Vande Bharat Express: ಶೀಘ್ರದಲ್ಲೇ ಬರಲಿದೆ ಬೆಂಗಳೂರು- ಹೈದರಾಬಾದ್ ವಂದೇ ಭಾರತ್ ರೈಲು; ಮಾಹಿತಿ, ವಿವರ ತಿಳಿಯಿರಿ
ಬೆಂಗಳೂರು, ಆಗಸ್ಟ್ 15: ದಕ್ಷಿನ ಮಧ್ಯ ರೈಲ್ವೆ ವಿಭಾಗವು ಶೀಘ್ರದಲ್ಲೇ ಹೈದರಾಬಾದ್ ಮತ್ತು ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಪ್ರಾರಂಭಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಇದು ಎರಡು ನಗರಗಳ ನಡುವಿನ 618 ಕಿಲೋಮೀಟರ್ ದೂರವನ್ನು 8 ಗಂಟೆಗಳಲ್ಲಿ ಕ್ರಮಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದು ಸಿಕಂದರಾಬಾದ್-ತಿರುಪತಿ ಮತ್ತು ಸಿಕಂದರಾಬಾದ್-ವಿಶಾಖಪಟ್ಟಣಂ ನಂತರ ದಕ್ಷಿಣ ಮಧ್ಯ ರೈಲ್ವೆಯಿಂದ ಪ್ರಾರಂಭವಾಗಲಿರುವ ಮೂರನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಲಿದೆ. ಈ ರೈಲು ದಕ್ಷಿಣ ತೆಲಂಗಾಣ ಮತ್ತು ರಾಯಲಸೀಮಾದ ಗದ್ವಾಲ್ ಜಂಕ್ಷನ್, ಮಹಬೂಬ್‌ನಗರ, ಶಾದ್ ನಗರ, ಧೋನೆ, ಕರ್ನೂಲ್ ಮತ್ತು ಧರ್ಮಾವರಂ ಸೇರಿದಂತೆ ರಾಯಲಸೀಮಾದ ನಿಲ್ದಾಣಗಳನ್ನು ಒಳಗೊಂಡಿದೆ.

ಈ ರೈಲು ಎರಡು ಎಕ್ಸಿಕ್ಯೂಟಿವ್ ಕೋಚ್‌ಗಳು ಮತ್ತು 14 ಚೇರ್ ಕಾರ್‌ಗಳೊಂದಿಗೆ 16 ಬೋಗಿಗಳ ರೈಲಾಗಿರುತ್ತದೆ. ಇದು ಆಗಸ್ಟ್ ಅಂತ್ಯದ ವೇಳೆಗೆ ಪ್ರಾರಂಭವಾಗಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
16 ಬೋಗಿಗಳ ರೈಲಿನ ವಿತರಣೆಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ ಎಂದು ತಿಳಿದುಬಂದಿದೆ. ನಂತರ ಪ್ರಾರಂಭದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.
ಟೆಕ್ ಹಬ್‌ಗಳಾದ ಬೆಂಗಳೂರು ಹಾಗೂ ಹೈದರಾಬಾದ್ ನಡುವೆ ತ್ವರಿತ ಸಂಪರ್ಕದ ಬೇಡಿಕೆ ಹೆಚ್ಚುತ್ತಿದೆ ಎಂದು ತಿಳಿದುಬಂದಿದೆ. ಹೈದರಾಬಾದ್ ಮತ್ತು ಬೆಂಗಳೂರು ನಡುವಿನ ಅನೇಕ ರೈಲುಗಳು ಕನಿಷ್ಠ 11ರಿಂದ 12 ಗಂಟೆಗಳನ್ನು ತೆಗೆದುಕೊಳ್ಳುತ್ತವೆ. ವಂದೇ ಭಾರತ್ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿತಗೊಳಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡೆಕ್ಕನ್ ಹೆರಾಲ್ಡ್‌ನ ವರದಿಯ ಪ್ರಕಾರ, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಎರಡು ಮಹಾನಗರಗಳ ನಡುವಿನ ಪ್ರಯಾಣದ ಸಮಯವನ್ನು ಅಂದಾಜು ಏಳು ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಪ್ರಸ್ತುತ, ಡುರೊಂಟೊ ಎಕ್ಸ್‌ಪ್ರೆಸ್ ವಂದೇ ಭಾರತ್ ರೈಲಿಗಿಂತ ಎರಡು ಗಂಟೆ ಹೆಚ್ಚು ತೆಗೆದುಕೊಳ್ಳುತ್ತದೆ.
ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು, ಕರ್ನಾಟಕದಲ್ಲಿ ಕಾರ್ಯಾಚರಣೆಯನ್ನು ಆರಂಭಿಸಿದೆ. ಜೂನ್ 27 ರಂದು ಪ್ರಧಾನಿ ಮೋದಿ ಉದ್ಘಾಟಿಸಿದರು. ಮತ್ತೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ಚೆನ್ನೈ ಮತ್ತು ಮೈಸೂರು ನಡುವೆ ಕಾರ್ಯನಿರ್ವಹಿಸುತ್ತದೆ.

ಭಾರತದಲ್ಲಿ ಕಾರ್ಯಾಚರಣೆಯಲ್ಲಿರುವ ವಂದೇ ಭಾರತ್ ರೈಲುಗಳ ಪಟ್ಟಿ
ನವದೆಹಲಿ - ವಾರಣಾಸಿ ವಂದೇ ಭಾರತ್ ಎಕ್ಸ್‌ಪ್ರೆಸ್
ಅಜ್ಮೀರ್ - ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್
ಮುಂಬೈ - ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್
ಪಾಟ್ನಾ - ರಾಂಚಿ ವಂದೇ ಭಾರತ್ ಎಕ್ಸ್‌ಪ್ರೆಸ್
ಕೆಎಸ್‌ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್
ರಾಣಿ ಕಮಲಾಪತಿ - ಜಬಲ್‌ಪುರ್ ವಂದೇ ಭಾರತ್ ಎಕ್ಸ್‌ಪ್ರೆಸ್
ಇಂದೋರ್ - ಭೋಪಾಲ್ ವಂದೇ ಭಾರತ್ ಎಕ್ಸ್‌ಪ್ರೆಸ್
ಜೋಧಪುರ - ಸಬರಮತಿ (ಅಹಮದಾಬಾದ್) ವಂದೇ ಭಾರತ್ ಎಕ್ಸ್‌ಪ್ರೆಸ್
ಗೋರಖ್‌ಪುರ - ಲಕ್ನೋ ಚಾರ್‌ಬಾಗ್ ವಂದೇ ಭಾರತ್ ಎಕ್ಸ್‌ಪ್ರೆಸ್
ತಿರುವನಂತಪುರಂ ಸೆಂಟ್ರಲ್ - ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್
ಸಿಕಂದರಾಬಾದ್ - ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್
ಸಿಕಂದರಾಬಾದ್- ವಿಶಾಖಪಟ್ಟಣಂ ವಂದೇ ಭಾರತ್ ಎಕ್ಸ್‌ಪ್ರೆಸ್
ದೆಹಲಿ- ಡೆಹ್ರಾಡೂನ್ ವಂದೇ ಭಾರತ್ ಎಕ್ಸ್‌ಪ್ರೆಸ್
ಹಜರತ್ ನಿಜಾಮುದ್ದೀನ್ - ರಾಣಿ ಕಮಲಪತಿ ವಂದೇ ಭಾರತ್ ಎಕ್ಸ್‌ಪ್ರೆಸ್
ನವದೆಹಲಿ - ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ (ಜೆ&ಕೆ) ವಂದೇ ಭಾರತ್ ಎಕ್ಸ್‌ಪ್ರೆಸ್
ನವದೆಹಲಿ - ಹಿಮಾಚಲ ಪ್ರದೇಶದ ಅಂಬ್ ಅಂಡೌರಾ ವಂದೇ ಭಾರತ್ ಎಕ್ಸ್‌ಪ್ರೆಸ್
ಚೆನ್ನೈ - ಕೊಯಮತ್ತೂರು ವಂದೇ ಭಾರತ್ ಎಕ್ಸ್‌ಪ್ರೆಸ್
ಚೆನ್ನೈ- ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್
ನಾಗ್ಪುರ - ಬಿಲಾಸ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್
ಹೊಸ ಜಲ್ಪೈಗುರಿ - ಗುವಾಹಟಿ ವಂದೇ ಭಾರತ್ ಎಕ್ಸ್‌ಪ್ರೆಸ್
ಗಾಂಧಿನಗರ - ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್
ಹೌರಾ - ನ್ಯೂ ಜಬಲ್ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್
ಹೌರಾ-ಪುರಿ-ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್
ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್
ಮುಂಬೈ- ಶಿರಡಿ ವಂದೇ ಭಾರತ್ ಎಕ್ಸ್‌ಪ್ರೆಸ್












Click it and Unblock the Notifications