Bengaluru: ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗೆ ಬಾಂಬ್ ಬೆದರಿಕೆ
ಬೆಂಗಳೂರಿನ ಪ್ರತಿತಿಷ್ಠಿಯ ಐಷಾರಾಮಿ ಹೋಟೆಲ್‌ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು ಕೆಲಕಾಲ ಆತಂಕ ಮೂಡಿಸಿತ್ತು. ನಗರದ ರಾಜಾರಾಮ್ ಮೋಹನ್‌ರಾಯ್ ರಸ್ತೆಯಲ್ಲಿರುವ ಐಬಿಎಸ್ ಹೋಟೆಲ್‌ನ ಇಮೇಲ್ ವಿಳಾಸಕ್ಕೆ ಅಪರಿತ ಮೂಲಗಳಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಕೂಡಲೇ ಹೋಟೆಲ್ ಸಿಬ್ಬಂದ ಸಂಪಂಗಿರಾಮ ನಗರ ಪೊಲೀಸ್ ಸ್ಟೇಷನ್‌ಗೆ ಮಾಹಿತಿ ನೀಡಿದರು.
ವಿಷಯ ತಿಳಿಯುತ್ತಿದ್ದಂತೆ ಸಂಪಂಗಿರಾಮ ನಗರ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆದಳದ ಜೊತೆ ಸ್ಥಳಕ್ಕೆ ದೌಡಾಯಿಸಿದರು. ಹೋಟೆಲ್‌ನಲ್ಲಿದ್ದ ಎಲ್ಲರನ್ನೂ ಹೊರಗೆ ಕಳಿಸಿ ತಪಾಸಣೆ ಮಾಡಿದರು. ಸೋಮವಾರ ಸಂಜೆ 7 ಗಂಟೆಗೆ ಹೋಟೆಲ್ ಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದಿದ್ದು, ಯಾವುದೇ ಕ್ಷಣದಲ್ಲಿ ಬಾಂಬ್ ಸ್ಫೋಟಗೊಳ್ಳಬಹುದು ಎಂದು ಬೆದರಿಕೆ ಹಾಕಲಾಗಿತ್ತು.

ಹೋಟೆಲ್‌ನಲ್ಲಿ ಸಂಪೂರ್ಣ ಪರಿಶೀಲನೆ ಮಾಡಿದ ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಗೊತ್ತಾಗಿದೆ. ಹೋಟೆಲ್‌ನಲ್ಲಿ ಯಾವುದೇ ಸ್ಫೋಟದ ವಸ್ತುಗಳು ಪತ್ತೆಯಾಗಿಲ್ಲ. ಅಪರಿಚಿತರ ಒಂದು ಹುಸಿ ಬೆದರಿಕೆಯಿಂದ ಹೋಟೆಲ್‌ನಲ್ಲಿದ್ದ ನೂರಾರು ಮಂದಿ ಕ್ಷಣ ಕಾಲ ಆತಂಕಕ್ಕೆ ಒಳಗಾಗಿದ್ದರು.
ಹೆಚ್ಚುತ್ತಿರುವ ಹುಸಿ ಬಾಂಬ್ ಬೆದರಿಕೆ
ಇತ್ತೀಚಿನ ದಿನಗಳಲ್ಲಿ ಹುಸಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿವೆ. ಕಳೆದ ಕೆಲವು ದಿನಗಳಿಂದ ಏರ್ ಇಂಡಿಯಾ ಸೇರಿದಂತೆ ಹಲವು ವಿಮಾನಗಳಿಗೆ ಸತತವಾಗಿ ಬಾಂಬ್ ಸ್ಫೋಟದ ಬೆದರಿಕೆ ಕರೆಗಳು ಬಂದಿದ್ದರಿಂದ, ವಿಮಾನ ಸಂಸ್ಥೆಯ ಸಿಬ್ಬಂದಿ ಹೈರಾಣಾಗಿದ್ದರು. ಸಾಲು ಸಾಲು ಬೆದರಿಕೆ ಸಂದೇಶಗಳು ಬಂದ ಬಳಿಕ ತನಿಖೆ ನಡೆಸಲು ವಿಶೇಷ ತಂಡವನ್ನು ರಚಿಸಲಾಯಿತು.
ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‌ಗು ಬೆದರಿಕೆ ಕರೆ ಬಂದಿತ್ತು. ನಗರದ ಪ್ರತಿಷ್ಠಿಯ ಹೋಟೆಲ್ ಇದಾಗಿದ್ದು, ರಾಜಕಾರಣಿಗಳು, ಉದ್ಯಮಿಗಳು, ಸಿನಿಮಾ ತಾರೆಯರು, ಕ್ರಿಕೆಟಿಗರು ಬಂದು ವಾಸ್ತವ್ಯ ಹೂಡುತ್ತಾರೆ. ಬೆದರಿಕೆ ಕರೆ ಬರುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ್ದ ಪೊಲೀಸರು ಸಂಪೂರ್ಣ ತಪಾಸಣೆ ನಡೆಸಿದ್ದರು. ಬಳಿಕ ಇದೊಂದು ಹುಸಿ ಬೆದರಿಕೆ ಕರೆ ಎಂದು ತಿಳಿದುಬಂದಿತ್ತು.
2024ರ ಮಾರ್ಚ್ 1ರಂದು ನಗರದ ಜನಪ್ರಿಯ ಹೋಟೆಲ್ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು. ಈ ಘಟನೆ ಬೆಂಗಳೂರು ನಗರದ ಜನರಲ್ಲಿ ಆತಂಕ ಮೂಡಿಸಿತ್ತು. ಅದಾದ ಬಳಿಕ ಅನೇಕ ಬಾರಿ ಬೆಂಗಳೂರಿನ ಪ್ರತಿಷ್ಠಿತ ಶಾಲೆ, ಕಾಲೇಜು, ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಲೇ ಇದ್ದು, ಜನರನ್ನು ಆತಂಕಕ್ಕೆ ದೂಡಿದೆ.












Click it and Unblock the Notifications