ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಕರೆ
Recommended Video

ಮತ್ತೊಮ್ಮೆ ಕೇಳಿ ಬಂತು ಬಾಂಬ್ ಬೆದರಿಕೆ..! | Oneindia Kannada
ಬೆಂಗಳೂರು, ಆಗಸ್ಟ್ 21: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿನ್ನೆ ತಡರಾತ್ರಿ ಬಾಂಬ್ ಬೆದರಿಕೆ ಕರೆ ಬಂದು ಆತಂಕ ಸೃಷ್ಠಿಯಾಗಿತ್ತು.
ವಿಮಾನ ನಿಲ್ದಾಣದ ಟರ್ಮಿನಲ್ ರೂಮ್‌ಗೆ ಕರೆ ಮಾಡಿದ್ದ ದುಷ್ಕರ್ಮಿಗಳು ಮಧ್ಯ ರಾತ್ರಿ 12 ಗಂಟೆಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟವಾಗುವುದಾಗಿ ಬೆದರಿಕೆ ಒಡ್ಡಿದ್ದರು.
ಕೂಡಲೇ ಟರ್ಮಿನಲ್ ಸಿಬ್ಬಂದಿ ವಿಮಾನ ನಿಲ್ದಾಣ ಪೊಲೀಸರಿಗೆ ಮಾಹಿತಿ ತಿಳಿಸಿದರು. ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ನಿಲ್ದಾಣದ ತಪಾಸಣೆ ನಡೆಸಿದರು. ಪ್ರಯಾಣಿಕರ ತಪಾಸಣೆಯನ್ನೂ ಮಾಡಲಾಯಿತು.

ಇದೀಗ ಪೊಲೀಸರು ಕರೆ ಮಾಡಿದ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಮುಂಚೆ ಸಹ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆಗಳು ಸಾಕಷ್ಟು ಬಂದಿದ್ದವು.












Click it and Unblock the Notifications