Get Updates
Get notified of breaking news, exclusive insights, and must-see stories!

ಬೆಂಗಳೂರಿನಲ್ಲಿ ಫೆ.22 ರಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು, ಜನವರಿ 3 : ಹತ್ತನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಫೆ.22 ರಿಂದ ಮಾರ್ಚ್ 1 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ವಿಧಾನಸೌಧ ಮುಂಭಾಗದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಈ ಚಲನಚಿತ್ರೋತ್ಸವ ದಲ್ಲಿ ಇಡೀ ಉದ್ಯಮ ಸಕ್ರಿಯವಾಗಿ ತೊಡಗಿಸಿಕೊಳ್ಳುವ ದೃಷ್ಟಿಯಿಂದ ಚಿತ್ರೋತ್ಸವದ ಉದ್ಘಾಟನಾ ದಿನವಾದ ಫೆ.22 ಹಾಗೂ ಸಮಾರೋಪ ನಡೆಯಲಿರುವ ಮಾರ್ಚ್ 1 ರಂದು ಚಿತ್ರೀಕರಣ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಕಳೆದ ವರ್ಷ ಮೈಸೂರಿನಲ್ಲಿ ಸಮಾರೋಪ ಸಮಾರಂಭ ನಡೆಸಲಾಗಿತ್ತು. ಆದರೆ ಈ ವರ್ಷ ವಿಧಾನಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೊಳ್ಳುವ ಸಾರ್ಧಯತೆ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೇ ಚಲನಚಿತ್ರೋತ್ಸವದ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭ ನಡೆಸಲು ಉದ್ದೇಶಿಸಲಾಗಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೀವಿಂದು ಹಾಗೂ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ತಿಳಿಸಿದ್ದಾರೆ.

Bengaluru International Film festival from Feb.22

800 ಚಲನಚಿತ್ರಗಳಲ್ಲಿ ಅತ್ಯುತ್ತಮ 150 ಚಿತ್ರಗಳ ಪ್ರದರ್ಶನ: ಜಗತ್ತಿನ ನಾನಾ ಭಾಷೆಯಗಳ 800 ಕ್ಕೂ ಅಧಿಕ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಯುರೋಪಿನಿಂದ 400, ಲ್ಯಾಟಿನ್ ಅಮೆರಿಕದಿಂದ 150, ಅಮೆರಿಕ ಹಾಗೂ ಕೆನಡಾದಿಂದ 45 , ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ನಿಂದ 5 , ಆಫ್ರಿಕಾದಿಂದ30 , ಏಷ್ಯಾಖಂಡದ ರಾಷ್ಟ್ರಗಳಿಂದ 170 ಹಾಗೂ ಆಸ್ಕರ್ ಪ್ರಶಸ್ತಿಗೆ ಸ್ಪರ್ಧೆಯೊಡ್ಡುವ 53 ಚಿತ್ರಗಳು ಚಲನಚಿತ್ರೋತ್ಸವದಲ್ಲಿ ಪ್ರದರ್ಸನ ಕಾಣಲು ಮುಂದೆ ಬಂದಿವೆ.

ರಾಜ್ಯ ಸರ್ಕಾರದಿಂದ10 ಕೋಟಿ ರೂ. ನೆರವು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಳೆದ ವರ್ಷ ಎಂಟು ಕೋಟಿ ರೂ. ನೀಡಿದ್ದ ರಾಜ್ಯ ಸರ್ಕಾರ ಈ ವರ್ಷ 10 ಕೋಟಿ ರೂ. ನೆರವು ನೀಡಲು ಒಪ್ಪಿಗೆ ಸೂಚಿಸಿದೆ.

ಅಲ್ಲದೆ, ಜಿಎಸ್ ಟಿ ಯ ಶೇ.18 ರಷ್ಟು ತೆರಿಗೆಯಲ್ಲಿ ರಾಜ್ಯದ ಪಾಲಿನ ಶೇ.೯ರಷ್ಟನ್ನು ಉದ್ಯಮಕ್ಕೆ ಹಿಂದಿರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನ 11 ಚಿತ್ರಮಂದಿರಗಳಲ್ಲಿ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದೆ. ಇದಲ್ಲದೆ ಮಂತ್ರಿ ಮಾಲ್ ನಲ್ಲೂ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+