Parking Policy: ಬೆಂಗಳೂರಿನ ಈ ಭಾಗದ 42 ರಸ್ತೆಗಳಲ್ಲಿ ಪಾರ್ಕಿಂಗ್ ನೀತಿ ಜಾರಿ: ಪಾಲಿಕೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಹಾಊ ಸಂಘಟಿತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಗ್ರೇಟರ್ ಬೆಂಗಳೂರು ವ್ಯಾಪ್ತಿಯ (ಜಿಬಿಎ) ಐದು ನಗರ ಪಾಲಿಕೆಗಳಲ್ಲಿ ಪಾರ್ಕಿಂಗ್ ನೀತಿ ಜಾರಿಗೆ ತರಲು ಮುಂದಾಗಿದೆ. ಇದರ ಭಾಗವಾಗಿ ಬೆಂಗಳೂರು ದಕ್ಷಿಣ ನಗರ ಪಾಲಿಕೆಯಿಂದ ವಿವಿಧ 42 ರಸ್ತೆಗಳಲ್ಲಿ ಪಾರ್ಕಿಂಗ್ ನೀತಿ ಜಾರಿಗೊಳ್ಳಲಿದೆ ಎಂದು ತಿಳಿಸಿದರು.

ಕನಕಪುರ ರಸ್ತೆಯ ಎಚ್.ಎಂ ತಾಂಬೂರಿನ್ ಅಪಾರ್ಟ್‌ಮೆಂಟ್‌ಗೆ ಭೇಟಿ ನೀಡಿ, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಒಕ್ಕೂಟ ಹಾಗೂ ದಕ್ಷಿಣ ನಗರ ಪಾಲಿಕೆಯ ಸಹಕಾರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಆಯುಕ್ತರಾದ ಕೆ.ಎನ್ ರಮೇಶ್ ಅವರು ಮಾಹಿತಿ ನೀಡಿದರು.

Parking Policy

ಬೆಂಗಳೂರು ದಕ್ಷಿಣ ನಗರ ಪಾಲಿಕೆ ಜಯನಗರದ 42 ರಸ್ತೆಗಳಲ್ಲಿ ಪಾರ್ಕಿಂಗ್ ನೀತಿಯನ್ನು ಜಾರಿಗೆ ತರಲಾಗುತ್ತಿದೆ. ಪ್ರಮುಖ ರಸ್ತೆಗಳಲ್ಲಿ ಈ ನೂತನ ನೀತಿ ಅನುಷ್ಠಾನಗೊಳ್ಳಲಿದೆ. ಈ ಸಂಬಂಧ ಟೆಂಡರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಇದೇ ಮಾದರಿಯಲ್ಲಿ ಉಳಿದ ವಿಭಾಗಗಳಲ್ಲಿ ಪಾರ್ಕಿಂಗ್ ನೀತಿಯನ್ನು ಹಂತ-ಹಂತವಾಗಿ ಜಾರಿಗೆ ತರಲಾಗುವುದೆಂದು ಅವರು ಮಾಹಿತಿ ನೀಡಿದರು.

ಜನಗಣತಿ 2026-27 ಅಂಗವಾಗಿ ಸಾಮೂಹಿಕ ಸ್ವಯಂಗಣತಿ

ಭಾರತ ಸರ್ಕಾರದ ಜನಗಣತಿ-2026-27ರ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ 'ಸ್ವಯಂ ಗಣತಿ '(Self Enumeration) ಕಾರ್ಯಕ್ರಮದಲ್ಲಿ ನೂರಾರು ಅಪಾರ್ಟ್‌ಮೆಂಟ್ ನಿವಾಸಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ದೇಶದ ಅಭಿವೃದ್ಧಿ ಯೋಜನೆಗಳ ರೂಪಿಸುವಲ್ಲಿ ಜನಗಣತಿಯು ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬ ನಾಗರಿಕರು ಜವಾಬ್ದಾರಿಯಿಂದ ಇದರಲ್ಲಿ ಪಾಲ್ಗೊಳ್ಳುವುದು ಅತ್ಯಗತ್ಯ ಎಂದು ಕರೆ ನೀಡಿದರು.

ಜನಗಣತಿ ಕಾರ್ಯಕ್ರಮದ ನಂತರ ನಡೆದ ಸಭೆಯಲ್ಲಿ, ನಿವಾಸಿಗಳು ಪಾಲಿಕೆಯ ವ್ಯಾಪ್ತಿಯಲ್ಲಿರುವ ಹಲವಾರು ಸಮಸ್ಯೆಗಳನ್ನು ಆಯುಕ್ತರ ಗಮನಕ್ಕೆ ತಂದರು. ನಾಗರಿಕರ ಕುಂದು ಕೊರತೆ ಆಲಿಸಿ, ಪರಿಹಾರ ಸೂಚಿಸಿದರು. ಜನರು ತೋಡಿಕೊಂಡ ಸಮಸ್ಯೆಗಳ ಪಟ್ಟಿ ಹೀಗಿದೆ.

1. ರಸ್ತೆ ಡಾಂಬರೀಕರಣ ಮತ್ತು ಗುಂಡಿಗಳ ಸಮಸ್ಯೆ.
2. ಘನತ್ಯಾಜ್ಯ ನಿರ್ವಹಣೆಯಲ್ಲಿನ ನ್ಯೂನತೆಗಳು.
3. ಬಾಟಲ್ ನೆಕ್ ರಸ್ತೆಗಳಿಂದ ಉಂಟಾಗುತ್ತಿರುವ ಸಂಚಾರ ದಟ್ಟಣೆ.
4. ಅಣ್ಣಯ್ಯಪ್ಪ ಕೆರೆ ಉದ್ಯಾನವನದ ಸಾರ್ವಜನಿಕ ಶೌಚಾಲಯದ ಅಸಮರ್ಪಕ ನಿರ್ವಹಣೆ.
5. ಸಾರಕ್ಕಿ ಕೆರೆ ಬಫರ್ ಝೋನ್ ನಿವಾಸಿಗಳ ಸಮಸ್ಯೆಗಳು.
6. ರಿಂಗ್ ರಸ್ತೆಯಲ್ಲಿ ಶಾಲೆ ಪಕ್ಕದಲ್ಲಿರುವ ಪಬ್‌ ಗಳು ಹಾಗೂ ರಿಂಗ್ ರಸ್ತೆಯಲ್ಲಿನ ಅಕ್ರಮ ಪಾರ್ಕಿಂಗ್ ಕಿರಿಕಿರಿ.

ಸಿ.ಎಸ್.ಆರ್ (CSR) ಅಡಿಯಲ್ಲಿ ಜರಗನಹಳ್ಳಿ ಹಾಗೂ ಯಲಚೇನಹಳ್ಳಿಯಲ್ಲಿ 'ಕಸ ಕಿಯೋಸ್ಕ್' ಅಳವಡಿಕೆ ಅಪಾರ್ಟ್ ಮೆಂಟ್ ಸಂಘದ ವತಿಯಿಂದ ಸ್ಥಾಪಿಸಲಾಗುವುದು ಇದಕ್ಕೆ ನಗರ ಪಾಲಿಕೆ ವತಿಯಿಂದ ಸಿಬ್ಬಂದಿ ನೀಡುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ಪಾಲಿಕೆಯಲ್ಲಿ ಸಿಬ್ಬಂದಿಗಳ ಕೊರತೆ ಇರುವುದರಿಂದ ಕೆಲವು ಕೆಲಸಗಳು ವಿಳಂಬವಾಗುತ್ತಿವೆ. ಸಕಾಲದಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ನಾಗರಿಕರು ಸಹಕರಿಸಬೇಕೆಂದು ವಿನಂತಿಸಿಕೊಂಡರು.

ನವೀನ ತಂತ್ರಜ್ಞಾನ ಸಹಿತ ಪರಿಹಾರ

ನಗರ ಪಾಲಿಕೆಯಲ್ಲಿರುವ ಸಮಸ್ಯೆಗಳ ಪರಿಹಾರಕ್ಕಾಗಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (RWA) ಹೊಸ ತಂತ್ರಜ್ಞಾನ ಹಾಗೂ ಪರಿಹಾರಗಳೊಂದಿಗೆ ಮುಂದೆ ಬಂದರೆ ಪಾಲಿಕೆಯು ಕೈಜೋಡಿಸಲಿದೆ. ಕೋರಮಂಗಲದ ಅಪಾರ್ಟ್‌ಮೆಂಟ್‌ಗಳ ಮಾದರಿಯಲ್ಲಿ ಒಣ ಕಸವನ್ನು ತಾವೇ ವಿಂಗಡಿಸಿ ವಾರಕ್ಕೆರಡು ಬಾರಿ ಸಂಗ್ರಹಣಾ ಕೇಂದ್ರಕ್ಕೆ ಕಳುಹಿಸುವ ವ್ಯವಸ್ಥೆಯನ್ನು ಇಲ್ಲಿಯೂ ಅಳವಡಿಸಿಸಬೇಕೆಂದು ಸಲಹೆ ನೀಡಿದರು. ಇದರೊಂದಿಗೆ ಪಬ್‌ಗಳ ಹಾವಳಿ ಹಾಗೂ ಪಾರ್ಕಿಂಗ್ ಸಮಸ್ಯೆಗಳ ಕುರಿತು ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+