ನಟ ಪುನೀತ್, ಶಿವಣ್ಣ, ರಾಕ್ ಲೈನ್ ಮನೆ ಮೇಲೆ ಐಟಿ ದಾಳಿ

ಬೆಂಗಳೂರು, ಜನವರಿ 03: ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಜಿಎಫ್ ಸಿನಿಮಾನದ ಯಶಸ್ಸಿನ ಸಂತಸದಲ್ಲಿದ್ದ ನಟ ಯಶ್ ಮನೆ ಮೇಲೂ ಐಟಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಅಷ್ಟೇ ಅಲ್ಲದೆ, ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ , ನಟ ಸುದೀಪ್ ಅವರ ಮನೆ ಮೇಲೆಯೂ ಐಟಿ ದಾಳಿ ನಡೆದಿದೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ನಿರ್ಮಾಪಕ ಜಯಣ್ಣ ಅವರ ಮನೆ ಮೇಲೆಯೂ ಐಟಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಸದಾಶಿವನಗರದಲ್ಲಿರುವ ಪುನೀತ್ ಮನೆ ಮೇಲೆ ಐಟಿ ಅದಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ತೆರಿಗೆ ವಂಚನೆ ಆರೋಪದ ಮೇಲೆ ಈ ಎಲ್ಲ ನಟ, ನಿರ್ದೇಶಕ, ನಿರ್ಮಾಪಕರ ಮನೆ ಮೇಲೆ ದಾಳಿ ನಡೆದಿದೆ.

Bengaluru: IT Raid on Puneeth Rajkumar and Rockline Venkateshs house

ರಾಕ್ ಲೈನ್ ವೆಂಕಟೇಶ್ ಅವರ ಮಹಾಲಕ್ಷ್ಮಿ ಲೇಔಟ್ ನಿವಾಸದ ಮೇಲೂ ಐಟಿ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ನಟ ಪುನೀತ್ ರಾಜ್ ಕುಮಾರ್ ಮನೆ ಮೇಲೆ ಐಟಿ ದಾಳಿ

ಆದಾಯ ತೆರಿಗೆ ಇಲಾಖೆಯ 8 ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಕೆಜಿಎಫ್ ಡೈರೆಕ್ಟರ್ ಪ್ರಶಾಂತ ನೀಲ್, ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು, ವಿಲನ್ ಚಿತ್ರದ ನಿರ್ಮಾಪಕ ಸಿ ಆರ್ ಮನೋಹರ್, ಮನೆ ಮೇಲೆಯೂ ಏಕಕಾಲದಲ್ಲಿ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+