ಬೆಂಗಳೂರು ಜಾತ್ರೆ 2026ಕ್ಕೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭರ್ಜರಿ ಸಿದ್ಧತೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಬೆಂಗಳೂರು ಜಾತ್ರೆಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಭರ್ಜರಿ ಸಿದ್ಧತೆ ಶುರು ಮಾಡಿಕೊಂಡಿದೆ.

ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 24ರ ಸೋಮವಾರ ನಡೆದ ಪರಿಶೀಲನಾ ಸಭೆಯಲ್ಲಿ ವಾರ್ಡ್ ಒನ್ ತೀವ್ರ ಸ್ವಚ್ಛತಾ ಅಭಿಯಾನ, ಆರ್ಟೀರಿಯಲ್ ಹಾಗೂ ಸಬ್ ಆರ್ಟೀರಿಯಲ್ ರಸ್ತೆಗಳ ಸ್ವಚ್ಛತೆ ಮತ್ತು ನಿರ್ವಹಣೆ, ಬೆಂಗಳೂರು ಜಾತ್ರೆ ವಾಕ್‌ಫೆಸ್ಟ್ ಸಿದ್ಧತೆ ಹಾಗೂ ಜಿಕೆವಿಕೆ ಡಬಲ್ ರಸ್ತೆಯ ಪಾದಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಲಾಗಿದೆ.

Bengaluru Jatre 2026 Greater Bengaluru Authority Gears Up for Grand Celebrations

ಬೆಂಗಳೂರು ಜಾತ್ರೆ ವಾಕ್‌ಫೆಸ್ಟ್‌ಗಾಗಿ ಸೂಕ್ತ ರಸ್ತೆ ಮಾರ್ಗಗಳನ್ನು ಗುರುತಿಸಿ, ಸಂಪರ್ಕಿತ ನಡಿಗೆ ಮಾರ್ಗಗಳ ಜಾಲವನ್ನು ಅಭಿವೃದ್ಧಿಪಡಿಸುವಂತೆ ಆಯುಕ್ತರು ಎಲ್ಲಾ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು. ಸೈನ್ಸ್ ಗ್ಯಾಲರಿ, ಹೆಗಡೆ ನಗರ, ಉತ್ತಮ್ ಸಾಗರ್, ಬಾಣಸವಾಡಿ ಹಾಗೂ ಯಲಹಂಕ ಸುತ್ತಮುತ್ತಲಿನ ರಸ್ತೆಗಳನ್ನು ಈ ಉದ್ದೇಶಕ್ಕಾಗಿ ಪರಿಗಣಿಸಲಾಗುತ್ತಿದ್ದು, ಆಯ್ಕೆ ಮಾಡಲಾದ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳನ್ನು ನಡಿಗೆಗೆ ಅನುಕೂಲಕರವಾಗುವಂತೆ ಸಿದ್ಧಪಡಿಸಿ, ನಿರ್ವಹಿಸುವಂತೆ ನಿರ್ದೇಶನ ನೀಡಿದ್ದಾರೆ.

ಆರ್ಟೀರಿಯಲ್ - ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ ನಿರಂತರ ಸ್ವಚ್ಛತೆ

ಆರ್ಟೀರಿಯಲ್ ಹಾಗೂ ಸಬ್ ಆರ್ಟೀರಿಯಲ್ ರಸ್ತೆಗಳ ಸ್ವಚ್ಛತೆ ಕೇವಲ ಒಂದು ಬಾರಿ ನಡೆಸುವ ಕಾರ್ಯವಾಗಿರದೆ, ನಿರಂತರವಾಗಿ ಸ್ವಚ್ಛತೆ ಮತ್ತು ನಿರ್ವಹಣೆ ಕೈಗೊಳ್ಳುವಂತೆ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದರು. ಪಾಲಿಕೆಯ ವ್ಯಾಪ್ತಿಯ ಎಲ್ಲಾ ರಸ್ತೆಗಳನ್ನು ಸ್ವಚ್ಛವಾಗಿಡುವುದರ ಜೊತೆಗೆ, ಸ್ವಚ್ಛತೆಯನ್ನು ನಿರಂತರವಾಗಿ ಕಾಪಾಡುವಂತೆ ನಿರ್ದೇಶನ ನೀಡಿದ್ದಾರೆ.

ಪಾಲಿಕೆ ಅಧಿಕಾರಿಗಳು ಹಲವು ಬಾರಿ ಮನವಿ ಮಾಡಿದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ವ್ಯಾಪ್ತಿಯ ರಸ್ತೆಗಳ ಸಮರ್ಪಕ ಸ್ವಚ್ಛತೆ ನಡೆಯದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಆಯುಕ್ತರು, NHAI ವ್ಯಾಪ್ತಿಯ ರಸ್ತೆಗಳ ಸ್ವಚ್ಛತೆ ಮತ್ತು ನಿರ್ವಹಣೆಗೆ ತಕ್ಷಣ ಗಮನಹರಿಸುವಂತೆ ಪ್ರಾಧಿಕಾರಕ್ಕೆ ಅಧಿಕೃತ ಪತ್ರ ಬರೆಯಲು ಸೂಚಿಸಿದರು.

ಇದೇ ವೇಳೆ NHAI ಹಾಗೂ ಇತರ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಅವರ ವ್ಯಾಪ್ತಿಗೆ ಬರುವ ರಸ್ತೆಗಳನ್ನೂ ಸ್ವಚ್ಛವಾಗಿ ಮತ್ತು ಸುಸ್ಥಿತಿಯಲ್ಲಿಡಲು ಅಗತ್ಯ ಸಹಕಾರ ಪಡೆಯುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

Bengaluru Jatre 2026: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಪಾಲಿಕೆಯ ವಿವಿಧ ಪ್ರದೇಶಗಳಲ್ಲಿ ₹2,000 ಕೋಟಿ ಅನುದಾನದಡಿ ಕೈಗೊಳ್ಳಲಾಗುತ್ತಿರುವ ಮೂಲಸೌಕರ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಆಯುಕ್ತರು ಪರಿಶೀಲಿಸಿದರು. ಈಗಾಗಲೇ ಆರಂಭಿಸಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಮುಂದುವರಿಸುವಂತೆ ಹಾಗೂ ಇತರೆ ಪ್ರದೇಶಗಳಲ್ಲಿ ಕಾಮಗಾರಿಗಳನ್ನು ಆದಷ್ಟು ಶೀಘ್ರ ಆರಂಭಿಸುವಂತೆ ಸೂಚಿಸಿದರು. ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಗಳ ಪ್ರಗತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ನಡೆಸಿ, ಅನುಷ್ಠಾನವನ್ನು ವೇಗಗೊಳಿಸುವಂತೆ ನಿರ್ದೇಶಿಸಿದರು.

Gold: ಚಿನ್ನದ ಬೆಲೆ ಇಳಿಕೆಗೆ ಮೋದಿ ಮನವಿಯೇ ಕಾರಣವೇ? ಬಂಗಾರ ಬೆಲೆ ಕುಸಿತದ ಹಿಂದಿನ ಅಸಲಿ ಕಾರಣಗಳೇನು?
Gold: ಚಿನ್ನದ ಬೆಲೆ ಇಳಿಕೆಗೆ ಮೋದಿ ಮನವಿಯೇ ಕಾರಣವೇ? ಬಂಗಾರ ಬೆಲೆ ಕುಸಿತದ ಹಿಂದಿನ ಅಸಲಿ ಕಾರಣಗಳೇನು?

ಬೆಂಗಳೂರು ಜಾತ್ರೆ 2026 - ವಾಕ್‌ಫೆಸ್ಟ್ ಹಾಗೂ ಕಾರ್ಯಕ್ರಮಗಳ ಸಮನ್ವಯ

ಬೆಂಗಳೂರು ಜಾತ್ರೆ 2026ರ ವಾಕ್‌ಫೆಸ್ಟ್ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಸಿದ್ಧತೆಗಳನ್ನು ಆಯುಕ್ತರು ಪರಿಶೀಲಿಸಿದರು. ಕಲಾವಿದರು, ಕಾರ್ಯಕ್ರಮ ಸ್ಥಳಗಳು ಹಾಗೂ ವ್ಯಾಪಾರಿಗಳ ವಿವರಗಳನ್ನು ನಿಗದಿತ ಪೋರ್ಟಲ್‌ನಲ್ಲಿ ದಾಖಲಿಸಿ, ಅಪ್‌ಡೇಟ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ಪಾಲುದಾರರ ನಡುವೆ ಸೂಕ್ತ ಸಮನ್ವಯ ಸಾಧಿಸಿ, ಕಾರ್ಯಕ್ರಮಗಳ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು. ಅಲ್ಲದೆ, 14 ವೇದಿಕೆಗಳಲ್ಲಿ 20ಕ್ಕೂ ಹೆಚ್ಚು ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಕಾರ್ಯಕ್ರಮಗಳ ಯೋಜನೆ, ಸಮನ್ವಯ ಮತ್ತು ಅಗತ್ಯ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ರೂಪಿಸಿ, ಸುಗಮವಾಗಿ ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Rajiv Gandhi Security Row: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಭದ್ರತೆ, ಸಾವಿನ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ರಾಹುಲ್ ಗಾಂಧಿ!
Rajiv Gandhi Security Row: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಭದ್ರತೆ, ಸಾವಿನ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ರಾಹುಲ್ ಗಾಂಧಿ!

ಜಿಕೆವಿಕೆ ಡಬಲ್ ರಸ್ತೆಯ ಪಾದಚಾರಿ ಮಾರ್ಗ ಅಭಿವೃದ್ಧಿ

ಜಿಕೆವಿಕೆ ಡಬಲ್ ರಸ್ತೆಯ ಪಾದಚಾರಿ ಮಾರ್ಗದ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದ ಆಯುಕ್ತರು, ಪಾದಚಾರಿ ಮೂಲಸೌಕರ್ಯವನ್ನು ಸುಧಾರಿಸಿ, ರಸ್ತೆ ಮತ್ತು ಪಾದಚಾರಿ ಮಾರ್ಗವನ್ನು ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅನುಕೂಲಕರವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಇಂಜಿನಿಯರಿಂಗ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+