ನೂತನ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ರೈಲಿಗೆ ಇಂದು ಹಸಿರು ನಿಶಾನೆ
ಬೆಂಗಳೂರು, ಮಾರ್ಚ್ 7: ಯಶವಂತಪುರ- ವಾಸ್ಕೋ ಡ ಗಾಮಾ ಎಕ್ಸ್‌ಪ್ರೆಸ್ ರೈಲಿಗೆ ಇಂದು ಹಸಿರು ನಿಶಾನೆ ದೊರೆಯಲಿದೆ.
ಬೆಂಗಳೂರಿನ ಯಶವಂತಪುರದಿಂದ ಹೊರಡುವ ರೈಲು ಗೋವಾದ ವಾಸ್ಕೋ ತನಕ ಸಂಚಾರ ನಡೆಸುತ್ತದೆ. ಹಲವು ವರ್ಷಗಳಿಂದ ಬೆಂಗಳೂರು-ವಾಸ್ಕೋ ನಡುವಿನ ನೇರ ರೈಲಿಗಾಗಿ ಬೇಡಿಕೆ ಇಡಲಾಗಿತ್ತು. ಉಭಯ ನಗರಗಳನ್ನು ರೈಲು 16 ಗಂಟೆಗಳಲ್ಲಿ ಕ್ರಮಿಸಲಿದೆ.
ಕೊಂಕಣ ರೈಲ್ವೆ ನಿಗಮವು(ಕೆಆರ್‌ಸಿಎಲ್) ರೈಲ್ವೆ ಸಚಿವಾಲಯದೊಂದಿಗೆ ಪ್ರಸ್ತಾವಿಸಿರುವ ಕಾರವಾರ ಮಾರ್ಗದ ಮೂಲಕ ನೂತನ ಯಶವಂತಪುರ-ವಾಸ್ಕೋ ಡ ಗಾಮಾ ಎಕ್ಸ್‌ಪ್ರೆಸ್ ಗೆ ಇಂದು ಹಸಿರು ನಿಶಾನೆ ತೋರಲಾಗುತ್ತಿದೆ.

ಈ ಕುರಿತು ರೈಲ್ವೆ ಇಲಾಖೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಯಶವಂತಪುರದಲ್ಲಿ ಹೊಸ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.
ಈ ವಿಶೇಷ ರೈಲಿನ ಅಗತ್ಯತೆಯ ಬಗ್ಗೆ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ಅನಂತ್ ಕುಮಾರ್ ಹೆಗಡೆ ಮತ್ತು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗಡೆ ಪ್ರಸ್ತಾಪಿಸಿದ್ದರು. ಈ ಪ್ರಸ್ತಾವನೆಗೆ ಬೆಂಬಲವಾಗಿ ನಿಂತ ಸುರೇಶ್ ಅಂಗಡಿಯವರು ಕೊನೆಗೂ ಕ್ರಮ ಕೈಗೊಂಡು ಬಹುದಿನಗಳ ಬೇಡಿಕೆ ಈಡೇರಿಸಿದ್ದಾರೆ.












Click it and Unblock the Notifications