Bengaluru KR Market: ಬಾಕಿ ಬಾಡಿಗೆ ಪಾವತಿಗೆ 15 ದಿನ ಗಡುವು; ತಪ್ಪಿದರೆ ಅಂಗಡಿಗಳಿಗೆ ಬೀಗ: ಜಿಬಿಎ ಎಚ್ಚರಿಕೆ

ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯ ಅಂಗಡಿ/ಮಳಿಗೆಗಳು ಸೇರಿದಂತೆ ವಿವಿಧ ಬಾಡಿಗೆ ಮಳಿಗೆಗಳಿಗೆ ಬಾಕಿ ಬಾಡಿಗೆ ಪಾವತಿಗೆ ಸಂಬಂಧಿಸಿದಂತೆ 15 ದಿನಗಳ ಗಡುವನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಧಿಕಾರಿಗಳು ನೀಡಿದ್ದಾರೆ.

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಚಾಮರಾಜಪೇಟೆ ವಿಭಾಗದ ಕೆ.ಆರ್.ಮಾರುಕಟ್ಟೆಯಲ್ಲಿನ ಸ್ವಚ್ಛತೆ, ಘನತ್ಯಾಜ್ಯ ನಿರ್ವಹಣೆ, ಪಾದಚಾರಿ ಮಾರ್ಗಗಳ ಒತ್ತುವರಿಗಳ ತೆರವು, ವಿದ್ಯುತ್ ಸಂಪರ್ಕ, ಶೌಚಾಲಯ ಹಾಗೂ ಇನ್ನಿತರೆ ಅಭಿವೃದ್ದಿ ಕಾರ್ಯಗಳ ಕುರಿತು ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ ಅವರು ಮಾರುಕಟ್ಟೆಯ ಸ್ವಚ್ಛತೆ ಹಾಗೂ ಸಾರ್ವಜನಿಕ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸುವುದರ ಜೊತೆಗೆ ವ್ಯಾಪಾರಸ್ಥರು ಮತ್ತು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಹಾಗೂ ನಿಯಮ ಉಲ್ಲಂಘನೆಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳಿಗೆ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ.

Bengaluru KR Market 15-Day Deadline to Clear Pending Rent Shops Face Locking for Non-Payment

Bengaluru KR Market: ಮಳಿಗೆಗಳ ಬಾಕಿ ಬಾಡಿಗೆ ಪಾವತಿಗೆ 15 ದಿನಗಳ ಗಡುವು

ಕೆ.ಆರ್. ಮಾರುಕಟ್ಟೆಯ ಅಂಗಡಿ/ಮಳಿಗೆಗಳ ಬಾಕಿ ಬಾಡಿಗೆಯನ್ನು ಸಂಬಂಧಪಟ್ಟ ವ್ಯಾಪಾರಿಗಳು 15 ದಿನಗಳೊಳಗಾಗಿ ಕಡ್ಡಾಯವಾಗಿ ಪಾವತಿಸಬೇಕು ನಿಗದಿತ ಅವಧಿಯೊಳಗೆ ಬಾಕಿ ಬಾಡಿಗೆ ಪಾವತಿಸದ ಅಂಗಡಿಗಳ ವಿರುದ್ಧ ನಿಯಮಾನುಸಾರ ಅಗತ್ಯ ಕ್ರಮ ಕೈಗೊಂಡು, ಅಂಗಡಿಗಳಿಗೆ ಬೀಗ ಹಾಕಿ ಅಂಗಡಿಗಳನ್ನು ನಗರ ಪಾಲಿಕೆಯ ವಶಕ್ಕೆ ಪಡೆಯುವ ಪ್ರಕ್ರಿಯೆ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

Bengaluru KR Market: ನಿರಂತರ ಸ್ವಚ್ಛತೆ ಹಾಗೂ ತ್ಯಾಜ್ಯ ನಿರ್ವಹಣೆಗೆ ವಿಶೇಷ ಆದ್ಯತೆ

ಕೆ.ಆರ್.ಮಾರುಕಟ್ಟೆಯಲ್ಲಿ ವ್ಯಾಪಾರ ಚಟುವಟಿಕೆಗಳ ಸಂದರ್ಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯ ಉತ್ಪತ್ತಿಯಾಗುವ ಹಿನ್ನೆಲೆಯಲ್ಲಿ ತ್ಯಾಜ್ಯವನ್ನು ಸ್ಥಳದಲ್ಲೇ ಹೆಚ್ಚು ಸಮಯ ಸಂಗ್ರಹವಾಗಲು ಅವಕಾಶ ನೀಡದೆ ಘನತ್ಯಾಜ್ಯ ನಿರ್ವಹಣೆ ವಿಭಾಗವು ಇನ್ನಷ್ಟು ಪರಿಣಾಮಕಾರಿಯಾಗಿ ಹಾಗೂ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಪ್ರತಿದಿನ ನಿಯಮಿತವಾಗಿ ಸಂಪೂರ್ಣ ಮಾರುಕಟ್ಟೆ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಹಾಗೂ ತ್ಯಾಜ್ಯ ಸಂಗ್ರಹವಾಗದಂತೆ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಸಾಧ್ಯವಾದಲ್ಲಿ 2 ರಿಂದ 3 ಪಾಳಿಗಳಲ್ಲಿ ಸ್ವಚ್ಛತಾ ಕಾರ್ಯವನ್ನು ನಿರಂತರವಾಗಿ ನಿರ್ವಹಿಸುವಂತೆ ನಿರ್ದೇಶನ ನೀಡಿದ್ದಾರೆ.

ಸ್ವಚ್ಛತಾ ಕಾರ್ಯ ಕೈಗೊಂಡ ನಂತರ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ಸಾಗಣೆ ಹಾಗೂ ವಿಲೇವಾರಿ ಮಾಡುವಂತೆ ತಿಳಿಸಿದರು. ಸ್ವಚ್ಛತಾ ಕಾರ್ಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬರದಂತೆ ಅಧಿಕಾರಿಗಳು ನಿರಂತರ ಮೇಲ್ವಿಚಾರಣೆ ನಡೆಸಿ, ಮಾರುಕಟ್ಟೆ ಪ್ರದೇಶವು ಸದಾ ಸ್ವಚ್ಛ ಹಾಗೂ ಸಾರ್ವಜನಿಕರಿಗೆ ಅನುಕೂಲಕರವಾಗಿರುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಪಾದಚಾರಿ ಮಾರ್ಗಗಳ ಒತ್ತುವರಿ ಮರುಕಳಿಸದಂತೆ ಕ್ರಮ

ಕೆ.ಆರ್. ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈಗಾಗಲೇ ತೆರವುಗೊಳಿಸಿರುವ ಪಾದಚಾರಿ ಮಾರ್ಗಗಳಲ್ಲಿ ಮತ್ತೆ ವ್ಯಾಪಾರಿಗಳು ಅಂಗಡಿಗಳು ಹಾಗೂ ವಸ್ತುಗಳನ್ನು ಇಟ್ಟು ಒತ್ತುವರಿ ಮಾಡಿರುವುದನ್ನು ಕಂಡು ಬಂದಿದ್ದು, ತಕ್ಷಣ ಸದರಿ ಅಂಗಡಿಗಳನ್ನು ತೆರವುಗೊಳಿಸಿ ಪುನಃ ಒತ್ತುವರಿ ಮರುಕಳಿಸದಂತೆ ನಿಯಮಿತವಾಗಿ ಸ್ಥಳ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘಿಸುವವರ ವಿರುದ್ಧ ಅಗತ್ಯ ಕ್ರಮ ಕೈಗೊಂಡು, ಸಾರ್ವಜನಿಕರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಪಾದಚಾರಿ ಮಾರ್ಗಗಳನ್ನು ಮುಕ್ತವಾಗಿಡುವಂತೆ ನಿರ್ದೇಶನ ನೀಡಿದರು.

ಕೆ.ಆರ್. ಮಾರುಕಟ್ಟೆಯಲ್ಲಿನ ವಿದ್ಯುತ್ ಸಂಪರ್ಕ, ಬೀದಿ ದೀಪಗಳು ಹಾಗೂ ಇತರೆ ವಿದ್ಯುತ್ ವ್ಯವಸ್ಥೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ದೋಷಗಳು ಕಂಡುಬಂದಲ್ಲಿ ಯಾವುದೇ ವಿಳಂಬವಿಲ್ಲದೆ ಅಗತ್ಯ ದುರಸ್ಥಿ ಹಾಗೂ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿದರು ಇದರ ಜೊತೆಗೆ ಮಾರುಕಟ್ಟೆಯಲ್ಲಿ ಕಾರ್ಯನಿರ್ವಹಿಸದ ಹಾಗೂ ದುರಸ್ತಿಯಲ್ಲಿರುವ ಶೌಚಾಲಯಗಳನ್ನು ತಕ್ಷಣ ಪರಿಶೀಲಿಸಿ, ಅಗತ್ಯ ದುರಸ್ತಿ ಹಾಗೂ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಿ ಎಲ್ಲಾ ಶೌಚಾಲಯಗಳು ಸದಾ ಸ್ವಚ್ಛವಾಗಿ ಹಾಗೂ ಸುಸ್ಥಿತಿಯಲ್ಲಿ ಕಾರ್ಯನಿರ್ವಹಿಸುವಂತೆ ಖಚಿತಪಡಿಸಿಕೊಂಡು, ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಿಗೆ ಸಮರ್ಪಕವಾಗಿ ಬಳಸಿಕೊಳ್ಳಲು ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಕೆ.ಆರ್. ಮಾರುಕಟ್ಟೆ ಮುಂಭಾಗದಲ್ಲಿ ವ್ಯಾಪಾರಿಗಳಿಗೆ ನಿಗದಿತ ವ್ಯಾಪಾರ ಸ್ಥಳಗಳನ್ನು ಈಗಾಗಲೇ ಗುರುತಿಸಿದ್ದು, ವ್ಯಾಪಾರಿಗಳು ನಿಗದಿಪಡಿಸಿದ ಸ್ಥಳವನ್ನು ಹೊರತುಪಡಿಸಿ ರಸ್ತೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ವ್ಯಾಪಾರ ನಡೆಸುವವರನ್ನು ತೆರವುಗೊಳಿಸಿ ಅವರಿಗೆ ದಂಡ ವಿಧಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಕೆ.ಆರ್. ಮಾರುಕಟ್ಟೆಯಲ್ಲಿ ಹಾನಿಗೊಳಗಾದ ಹಾಗೂ ಕಿತ್ತುಹೋಗಿರುವ ನೆಲಹಾಸಿನ ಟೈಲ್ಸ್‌ ಗಳನ್ನು ಪರಿಶೀಲಿಸಿ, ಅಗತ್ಯವಿರುವ ಕಡೆ ದುರಸ್ತಿ ಹಾಗೂ ಹೊಸ ಟೈಲ್ಸ್ ಅಳವಡಿಸುವಂತೆ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದರು. ಮೆಟ್ಟಿಲುಗಳಲ್ಲಿಯೂ ಹಾನಿಗೊಳಗಾದ ಭಾಗಗಳನ್ನು ದುರಸ್ತಿಪಡಿಸಿ, ಅಗತ್ಯವಿರುವ ಕಡೆ ಬದಲಾವಣೆ ಮಾಡಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಸುರಕ್ಷಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+