• search
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದ ಕೆರೆಗಳ ಸಂರಕ್ಷಣೆ: ಕುಮಾರಸ್ವಾಮಿ

|

ಬೆಂಗಳೂರು, ಜನವರಿ 10: ರಾಜ್ಯದಲ್ಲಿ ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ಹಾಗೂ ನಿರ್ವಹಣೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಡಳಿತ ನನ್ನ ಕೈಯಲಿಲ್ಲ, ಕಾಂಗ್ರೆಸ್‌ ಕೈಯಲ್ಲಿದೆ: ಕುಮಾರಸ್ವಾಮಿ ಅಸಮಾಧಾನ

ಸಭೆಯಲ್ಲಿ ರಾಜ್ಯದ ಕೆರೆಗಳ ಅದರಲ್ಲೂ ವಿಶೇಷವಾಗಿ ಬೆಂಗಳೂರಿನ ಕೆರೆಗಳ ಸ್ಥಿತಿಗತಿಗಳ ಕುರಿತು ಹಾಗೂ ಅವುಗಳ ಸಂರಕ್ಷಣೆಗೆ ವಹಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ವಿವರವಾಗಿ ಚರ್ಚಿಸಿದರು.

ಇಂದು ನಮ್ಮ ಕೆರೆಗಳಿಗೆ ಒದಗಿರುವ ದುಸ್ಥಿತಿಯನ್ನು ರಾತ್ರೋರಾತ್ರಿ ಸರಿಪಡಿಸಲಾಗದು. ಕೆಲವು ವಿಚಾರಗಳಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದೂ ಅಗತ್ಯ. ಈ ನಿಟ್ಟಿನಲ್ಲಿ ವಸ್ತುಸ್ಥಿತಿಯನ್ನು ಸಮಗ್ರವಾಗಿ ಅಧ್ಯಯನ ನಡೆಸಿ, ವಿಸ್ತøತ ಯೋಜನಾ ವರದಿಗಳನ್ನು ಸಿದ್ಧಪಡಿಸುವಂತೆ ಸೂಚಿಸಿದರು.

ನೀರಾವರಿ ಯೋಜನೆಗಳಿಗೆ ಭೂಸ್ವಾಧೀನ: ಪರಿಹಾರ ಬೇಗ ನೀಡಲು ಸಿಎಂ ಸೂಚನೆ

ಈ ಯೋಜನೆಗಳನ್ನು ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಯೋಜನೆಗಳ ನೆರವಿನೊಂದಿಗೆ ಹಂತ ಹಂತವಾಗಿ ನಿಗದಿತ ಕಾಲಮಿತಿಯಲ್ಲಿ ಜಾರಿಗೊಳಿಸುವಂತೆ ಸೂಚಿಸಿದರು. ಕೆರೆಗಳ ನೀರು ಕಲುಷಿತವಾಗಿರುವ ಕುರಿತು, ತಜ್ಞರ ಅಭಿಪ್ರಾಯಗಳನ್ನು ಗಂಭೀರವಾಗಿ ಪರಿಗಣಿಸಿ, ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಕೆರೆಗಳ ಜಲಾನಯನ ರಕ್ಷಣೆ

ಕೆರೆಗಳ ಜಲಾನಯನ ರಕ್ಷಣೆ

ಬೆಂಗಳೂರು ನಗರದ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ, ಕೆರೆಗಳ ಜಲಾನಯನ ಪ್ರದೇಶಗಳ ಅಭಿವೃದ್ಧಿಗೂ ಸಹ ಆದ್ಯತೆ ನೀಡುವಂತೆ ತಜ್ಞರು ಮಾಡಿದ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳು, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ಕೆರೆಗಳಿಗೆ ನೀರು ಸರಾಗವಾಗಿ ಹರಿದುಬರುವಂತೆ ಮಾಡಲು ಸೂಚಿಸಿದರು. ಜೊತೆಗೆ ರಾಜಕಾಲುವೆ ಮೇಲೆ ಮನೆಕಟ್ಟಿಕೊಂಡಿರುವ ಬಡವರಿಗೆ ಪುನರ್ವಸತಿ ಕಲ್ಪಿಸಲು ಪರ್ಯಾಯ ಯೋಜನೆ ರೂಪಿಸಿ, ಪ್ರಸ್ತಾವನೆ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದರು. ಮಳೆ ನೀರು ಚರಂಡಿಗೆ ಕೊಳಚೆ ನೀರು ಸೇರದಂತೆ ಎಚ್ಚರ ವಹಿಸಲು ಹಾಗೂ ಒಳಚರಂಡಿ ನೀರಿನ ಸಂಸ್ಕರಣೆಗೆ ಅಗತ್ಯ ಪ್ರಮಾಣದಲ್ಲಿ ಎಸ್‍ಟಿಪಿಗಳನ್ನು ನಿರ್ಮಾಣ ಮಾಡುವ ಬಗ್ಗೆ ಕ್ರಮ ವಹಿಸುವಂತೆ ಹೇಳಿದರು.

ಬೆಂಗಳೂರು ವ್ಯಾಪ್ತಿಯಲ್ಲಿ 204 ಕೆರೆ

ಬೆಂಗಳೂರು ವ್ಯಾಪ್ತಿಯಲ್ಲಿ 204 ಕೆರೆ

ಬೆಂಗಳೂರಿನಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ 204 ಕೆರೆಗಳಿವೆ. ಮಾನವ ತ್ಯಾಜ್ಯ, ಡಿಟರ್ಜೆಂಟ್‍ಗಳಲ್ಲಿ ಹಾಗೂ ಕೈಗಾರಿಕಾ ತ್ಯಾಜ್ಯಗಳಲ್ಲಿ ಫಾಸ್ಫೇಟ್ ಮತ್ತು ಸಲ್ಫೇಟ್ ಅಂಶ ಹೆಚ್ಚಾಗಿರುವುದರಿಂದ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಒಳಚರಂಡಿ ನೀರು ನೇರವಾಗಿ ಕೆರೆಗಳಿಗೆ ಸೇರದಂತೆ, ಕೈಗಾರಿಕಾ ತ್ಯಾಜ್ಯಗಳನ್ನು ಸಂಸ್ಕರಿಸಲು ಎಸ್‌ಟಿಪಿಗಳನ್ನು ನಿರ್ಮಿಸಲಾಗುತ್ತಿದೆ. ಜೊತೆಗೆ ಡಿಟರ್ಜೆಂಟ್‍ಗಳಲ್ಲಿ ಫಾಸ್ಪೇಟ್, ಸಲ್ಫೇಟ್‌ಗಳ ಅಂಶವನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲು ಕ್ರಮ ವಹಿಸುವಂತೆ ತಿಳಿಸಿದರು.

ಭತ್ತದ ಬೆಂಬಲ ಬೆಲೆ ಪರ್ಯಾಯ ಮಾರ್ಗಕ್ಕೆ ಸಿಎಂ ಕುಮಾರಸ್ವಾಮಿ ಸೂಚನೆ

ಹಸಿರು ಪೀಠ ಮಾರ್ಗದರ್ಶನದಂತೆ ಕ್ರಮ

ಹಸಿರು ಪೀಠ ಮಾರ್ಗದರ್ಶನದಂತೆ ಕ್ರಮ

ಬೆಳ್ಳಂದೂರು ಕೆರೆ ಸುಧಾರಣೆಗೆ ರಾಷ್ಟ್ರೀಯ ಹಸಿರು ನ್ಯಾಯಪೀಠದ ಮಾರ್ಗದರ್ಶನದಂತೆ ಕ್ರಮ ವಹಿಸಲಾಗುತ್ತಿದೆ. ಈ ಕುರಿತು ಶಾಶ್ವತ ಪರಿಹಾರಗಳಿಗಾಗಿ ಕೆರೆ ಸಂರಕ್ಷಣಾ ಪ್ರಾಧಿಕಾರವು ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಿದ್ದು, ಎನ್‍ಜಿಟಿ ರಚಿಸಿರುವ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ನೇತೃತ್ವದ ಸಮಿತಿಯ ಅನುಮೋದನೆಗಾಗಿ ಸಲ್ಲಿಸಿ, ಕ್ರಮ ವಹಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಲಾಯಿತು.

ಕೆರೆ ಅಭಿವೃದ್ಧಿಗೆ ಶಾಶ್ವತ ಪರಿಹಾರ

ಕೆರೆ ಅಭಿವೃದ್ಧಿಗೆ ಶಾಶ್ವತ ಪರಿಹಾರ

ಕೆರೆ ಅಭಿವೃದ್ಧಿಗೆ ಶಾಶ್ವತ ಪರಿಹಾರಗಳನ್ನು ಕಂಡುಕೊಳ್ಳುವುದು ಅತಿ ಅಗತ್ಯವಾಗಿದೆ. ಖಾಸಗಿ ಸಂಸ್ಥೆಗಳು ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ಪಡಿಸಲು ಉತ್ಸಾಹ ತೋರಿಸಿ ಮುಂದೆ ಬಂದಾಗ ಅಧಿಕಾರಿಗಳು ಅವರಿಗೆ ಉತ್ತೇಜನ ನೀಡಿ, ತ್ವರಿತವಾಗಿ ಅಗತ್ಯ ಅನುಮೋದನೆಗಳನ್ನು ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಂತೆಯೇ ಅವರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಒಪ್ಪಂದದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿ, ಯೋಜನೆ ಅನುಷ್ಠಾನದಲ್ಲಿ ಲೋಪಗಳಾಗದಂತೆ ಎಚ್ಚರ ವಹಿಸುವಂತೆ ಸೂಚಿಸಿದರು.

ನಿಗಮ-ಮಂಡಳಿ ನೇಮಕಕ್ಕೆ ತಡೆ, ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಕೆರೆಗಳ ಹೂಳು ತೆಗೆಯಲು ಕ್ರಮ

ಕೆರೆಗಳ ಹೂಳು ತೆಗೆಯಲು ಕ್ರಮ

ಉತ್ತರ ಕರ್ನಾಟಕದ ಕೆರೆಗಳ ಹೂಳು ತೆಗೆಯಲು ಸೂಕ್ತ ಕಾರ್ಯಕ್ರಮ ರೂಪಿಸಿ ಮಳೆಗಾಲ ನೀರು ಸಂಗ್ರಹವಾಗಲು ಅನುವು ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಎಫ್‌ಕೆಸಿಸಿಐ ಪದಾಧಿಕಾರಿಗಳು ಭಾಗವಹಿಸಿ, ರಾಜ್ಯದ ಕೈಗಾರಿಕೋದ್ಯಮಿಗಳು ಕೆರೆ ಸಂರಕ್ಷಣೆಯಲ್ಲಿ ಕೈಜೋಡಿಸುವುದಾಗಿ ಭರವಸೆ ನೀಡಿದರು.

ಸಚಿವ ಪುಟ್ಟರಾಜು ಭಾಗಿ

ಸಚಿವ ಪುಟ್ಟರಾಜು ಭಾಗಿ

ಸಭೆಯಲ್ಲಿ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ನಗರಾಭಿವೃದ್ಧಿ ಇಲಾಖೆ, ಅರಣ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಣ್ಣ ನೀರಾವರಿ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಕೆರೆ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಮತ್ತಿತತರು ಹಾಜರಿದ್ದರು.

lok-sabha-home

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
CM Kumaraswamy today told that government will protect and development Bengaluru's lakes. He also take on meeting with BDA officers and many other Bengaluru development related officers.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more