ಬೆಂಗಳೂರು ಲಾಲ್‌ಬಾಗ್: ಪೂರ್ಣಚಂದ್ರ ತೇಜಸ್ವಿ ಥೀಮ್‌ನಲ್ಲಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ
ಬೆಂಗಳೂರು: ಬೆಂಗಳೂರಿನ ಸಸ್ಯಕಾಶಿ ಎಂದೇ ಖ್ಯಾತಿ ಗಳಿಸಿರುವ ಲಾಲ್‌ಬಾಗ್ (Lalbagh Botanical Garden)ನಲ್ಲಿ 2026ನೇ ಸಾಲಿನ ಜನವರಿ 15 ರಿಂದ 26 ರವರೆಗೆ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಚಿಂತಕರಾದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಜೀವನ ಮತ್ತು ಸಾಹಿತ್ಯ ಪರಂಪರೆಯನ್ನು ಗೌರವಿಸಲು ನಿರ್ಧರಿಸಲಾಗಿದೆ. ಪೂರ್ಣಚಂದ್ರ ತೇಜಸ್ವಿ ಅವರ ಸಾಹಿತ್ಯದ ಬಗ್ಗೆ ಆಸಕ್ತಿ ಇರುವ ದೊಡ್ಡ ಸಮುದಾಯವೇ ಇದೆ. ಅದರಲ್ಲೂ ಮುಖ್ಯವಾಗಿ ಯುವ ಸಮೂಹಕ್ಕೆ ಪೂರ್ಣಚಂದ್ರ ತೇಜಸ್ವಿ ಅವರು ಅತ್ಯಂತ ಆಪ್ತರಾಗಿದ್ದಾರೆ. ಹೀಗಾಗಿ ಈ ಬಾರಿಯ ಫಲಪುಷ್ಪ ಪ್ರದರ್ಶನವು ಅತ್ಯಂತ ಸೊಗಸಾಗಿರುವ ನಿರೀಕ್ಷೆ ಇದೆ.
ಪೂರ್ಣಚಂದ್ರ ತೇಜಸ್ವಿ ಅವರ ಕೃತಿಗಳೊಂದಿಗೆ ಯುವ ಸಮುದಾಯ ಹಾಗೂ ಹೊರ ರಾಜ್ಯದಿಂದ ಬರುವವರಿಗೆ ಪರಿಚಯ ಮಾಡಿಕೊಡುವ ಉದ್ದೇಶದಿಂದ ಮತ್ತು ಅವರ ಪ್ರತಿಷ್ಠಿತ ಕಾದಂಬರಿ ಕರ್ವಾಲೊ ಪ್ರಕಟವಾದ 45 ವರ್ಷಗಳಿಗೂ ಹೆಚ್ಚಿನ ವರ್ಷಗಳಾಗಿದ್ದು, ಕನ್ನಡ ಸಾಹಿತ್ಯ ಲೋಕಕ್ಕೆ ಪೂರ್ಣಚಂದ್ರ ತೇಜಸ್ವಿ ಅವರು ನೀಡಿರುವ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಈ ಥೀಮ್ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ ಎಂದು "ದಿ ಹಿಂದೂ" ವರದಿ ಮಾಡಿದೆ.

ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ: ಬರಹಗಾರರ ಅಭಿಪ್ರಾಯ
ಇನ್ನು ಈ ಬಾರಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ಪೂರ್ಣಚಂದ್ರ ತೇಜಸ್ವಿ ಅವರ ಥೀಮ್ ಬಳಸಿರುವ ಹಿನ್ನೆಲೆಯಲ್ಲಿ ಹೂವಿನ ಪ್ರತಿಮೆಗಳಲ್ಲಿ ಥೀಮ್ ಅರ್ಥಪೂರ್ಣವಾಗಿ ಪ್ರತಿಫಲಿಸುವಂತೆ ಮಾಡುವ ನಿಟ್ಟಿನಲ್ಲೂ ಕೆಲವೊಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ತೋಟಗಾರಿಕೆ ಇಲಾಖೆಯು ಸಾಹಿತ್ಯ ಪರಿಣಿತರು, ಬರಹಗಾರರು ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಜೀವನ ಮತ್ತು ಕೃತಿಗಳೊಂದಿಗೆ ಬಗ್ಗೆ ಪರಿಚಿಯ ಇರುವವರೊಂದಿಗೂ ಸುದೀರ್ಘ ಚರ್ಚೆ ನಡೆದಿದೆ.
ಫಲಪುಷ್ಪ ಪ್ರದರ್ಶನದಲ್ಲಿ ಲೇಖಕರ ಆಲೋಚನೆಗಳನ್ನು ಸೇರಿಸುವುದರಿಂದ ವಿದ್ಯಾರ್ಥಿಗಳಿಗೆ ಮತ್ತು ಮೊದಲ ಬಾರಿಗೆ ತೇಜಸ್ವಿ ಅವರ ಪುಸ್ತಕಗಳನ್ನು ಓದುವವರಿಗೆ ಹೊಸ ಅನುಭವ ಕೊಡಲಿದೆ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಎಂ. ಜಗದೀಶ್ ಅವರು ಹೇಳಿದ್ದಾರೆ.
ಪೂರ್ಣಚಂದ್ರ ತೇಜಸ್ವಿ ಅವರ ಸೃಜನಶೀಲ ಬರವಣಿಗೆಯ ಶೈಲಿ, ವೈಜ್ಞಾನಿಕ ಮನೋಭಾವ ಮತ್ತು ಪ್ರಕೃತಿ ಮತ್ತು ಸಮಾಜದೊಂದಿಗಿನ ಆಳವಾದ ಸಂಪರ್ಕದಿಂದಾಗಿ ಅವರ ಬರವಣಿಗೆ ಹಲವು ತಲೆಮಾರುಗಳಿಗೆ ಅಥವಾ ಹೊಸ ಓದುಗರಿಗೆ ಇಂದಿಗೂ ಪ್ರೇರಣೆಯಾಗಿದೆ. ತೇಜಸ್ವಿ ಅವರ ಪುಸ್ತಕಗಳನ್ನು ಕರ್ನಾಟಕದಲ್ಲಿ ಮಾತ್ರವಲ್ಲದೆ ರಾಜ್ಯದ ಹೊರಗಿನ ಓದುಗರು ಸಹ ವ್ಯಾಪಕವಾಗಿ ಓದುತ್ತಾರೆ.
-
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications