ಸಿಲಿಕಾನ್ ಸಿಟಿ ಬೆಂಗಳೂರು ಈಗ 'ಸೈಬರ್ ಕ್ರೈಂ' ರಾಜಧಾನಿ
ಬೆಂಗಳೂರು, ಆಗಸ್ಟ್ 19: ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ಈಗ ಬೇಡದ ವಿಷಯಕ್ಕೆ ಪ್ರಸಿದ್ಧಿಯಾಗುತ್ತಿದೆ. ಆತ್ಮಹತ್ಯಾ ನಗರ ಎಂಬ ಟ್ಯಾಗ್ ತಗುಲಿ ಹಾಕಿಕೊಂಡಿದ್ದ ಬೆಂಗಳೂರು ಈಗ ಅತಿ ಹೆಚ್ಚು ಸೈಬರ್ ಕ್ರೈಂ ಕೇಸು ದಾಖಲಿಸಿಕೊಂಡು ಸೈಬರ್ ಕ್ರೈಂ ರಾಜಧಾನಿ ಎನಿಸಿಕೊಂಡಿದೆ.
ಅತಿ ಹೆಚ್ಚು ಕೊಲೆಗಳನ್ನು ದಾಖಲಿಸಿಕೊಂಡ ಕುಖ್ಯಾತಿ ರಾಜಧಾನಿ ದೆಹಲಿ ಪಾಲಾಗಿದ್ದರೆ ನಂತರದ ಸ್ಥಾನದಲ್ಲಿ ಬೆಂಗಳೂರು ಇದೆ.
ಮಾಹಿತಿ ತಂತ್ರಜ್ಞಾನ ಕಾಯಿದೆ 2000 ರ ಉಲ್ಲಂಘನೆ ಮಾಡಿದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಗಳ ಅಂಕಿ ಅಂಶವನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯುರೋ ಹೊರಹಾಕಿದೆ.

ಬೆಂಗಳೂರು ಸರಿ ಸುಮಾರು 675 ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ. ನಂತರದ ಸ್ಥಾನದಲ್ಲಿ ಹೈದರಾಬಾದ್ 386 ಸಂಖ್ಯೆಯನ್ನು ಹೊಂದಿದೆ. ನಂತರದ ಸ್ಥಾನದಲ್ಲಿ ಜೈಪುರ ಹಾಗೂ ಲಕ್ನೋ ಇದೆ. ಜೈಪುರದಲ್ಲಿ 317 ಕೇಸುಗಳು ಹಾಗೂ ಲಕ್ನೋದಲ್ಲಿ 205 ಕೇಸುಗಳು ದಾಖಲಾಗಿದೆ.
ಕರ್ನಾಟಕದಲ್ಲಿ ಒಟ್ಟಾರೆ 1,012 ಪ್ರಕರಣಗಳು ದಾಖಲಾಗಿವೆ. 2013ಕ್ಕೆ ಹೋಲಿಸಿದರೆ ಬಹುತೇಕ ಈ ಸಂಖ್ಯೆ ದ್ವಿಗುಣವಾಗಿದೆ.
ಕುತೂಹಲದ ಸಂಗತಿ ಎಂದರೆ ಅರ್ಧದಷ್ಟು ಪ್ರಕರಣಗಳು ಮಾಹಿತಿ ಮತ್ತು ತಂತ್ರಜ್ಞಾನ ಕಾಯಿದೆ ಸೆಕ್ಷನ್ 66ಎ ಅನ್ವಯ ದಾಖಲಾಗಿದ್ದು, ಸುಪ್ರೀಂಕೋರ್ಟಿನಿಂದ ಈ ಸೆಕ್ಷನ್ ಗೆ ತಡೆ ಸಿಕ್ಕಿದೆ.
ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗಿದೆ. ಐಟಿ ಕಾಯ್ದೆ 66ಎ ಅನ್ವಯ 603ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ ಎಂದು ಸಿಐಡಿ ಸೈಬರ್ ಕ್ರೈಂ ಡಿಐಜಿ ಹೇಮಂತ್ ನಿಂಬಾಳ್ಕರ್ ಅವರು ದಿ ಹಿಂದೂ ಪತ್ರಿಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications