Bengaluru weather: ಬೆಂಗಳೂರಿನಲ್ಲಿ ಮುಂದಿನ ಎರಡು ವಾರ ಭರ್ಜರಿ ಮಳೆ
ಬೆಂಗಳೂರು, ಮೇ. 05: ಬೆಂಗಳೂರಿನ ಜನ ಮತ್ತು ನೆಲ ಎರಡು ಕಳೆದ ಕೆಲವು ತಿಂಗಳುಗಳಿಂದ ಬಿಸಿಲಿನ ಬೇಗೆ, ನೀರಿನ ಬಿಕ್ಕಟ್ಟಿನಿಂದ ತತ್ತರಿಸಿದ್ದವು. ಆದರೆ, ನಗರದಲ್ಲಿ ಇತ್ತೀಚೆಗೆ ಸುರಿದ ತುಂತುರು ಮಳೆ ಬೆಂಗಳೂರಿಗರಿಗೆ ಕೊಂಚ ನೆಮ್ಮದಿ ತಂದಿದೆ. ಎರಡು ದಿನ ಸುರಿದ ಮಳೆಗೆ ತಾಪಮಾನ ಕಡಿಮೆಯಾಗಿದೆ.
ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಮಳೆ ಮುಂದುವರಿಯುವ ಬಗ್ಗೆ ಮಾಹಿತಿ ನೀಡಿದೆ. ಮುಂದಿನ ಎರಡು ವಾರ ಅಂದರೆ ಮೇ 7 ರ ನಂತರ ಬೆಂಗಳೂರಿನಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಮೇ 19 ರವರೆಗೆ ಸಾಧಾರಣದಿಂದ ಭಾರೀ ಮಳೆಯನ್ನು ನಿರೀಕ್ಷಿಸಬಹುದು ಎಂದು ತಿಳಿಸಿದೆ.

ಜನಪ್ರಿಯ ಹವಾಮಾನ ಬ್ಲಾಗರ್, ಬೆಂಗಳೂರು ವೆದರ್‌ಮ್ಯಾನ್ ಪ್ರಕಾರ, ಬೆಂಗಳೂರಿನಲ್ಲಿ ಮಳೆ ಇನ್ನೂ ತುಂಬಾ ದಿನ ಇರಲ್ಲಿದೆ. ತಮ್ಮ ಟ್ವಿಟರ್ ಖಾತೆಯಲ್ಲಿ "ಮೇ 7 ರಿಂದ ಉತ್ತಮ ತೀವ್ರತೆಯೊಂದಿಗೆ ಬೇಸಿಗೆಯ ಗುಡುಗು ಸಹಿತ ಮರಳಲಿದೆ. ಇದರ ಪರಿಣಾಮವಾಗಿ ತಾಪಮಾನವು ಸಾಮಾನ್ಯ ಸ್ಥಿತಿಗೆ ಮರಳುತ್ತದೆ. ಮುಂದಿನ 2 ವಾರಗಳವರೆಗೆ ಬೆಂಗಳೂರು ನಗರಕ್ಕೆ ಶಾಖದಿಂದ ಹೆಚ್ಚು ವಿರಾಮ ಸಿಗಲಿದೆ" ಎಂದಿದ್ದಾರೆ.
ರಾಜ್ಯದಲ್ಲಿ ಸೋಮವಾರ ಸಂಜೆಯಿಂದ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನೂ ನೀಡಿದ್ದಾರೆ. ಈ ಅವಧಿಯಲ್ಲಿ ಬೆಂಗಳೂರಿನಲ್ಲೂ ಮಳೆಯನ್ನು ನಿರೀಕ್ಷಿಸಲಾಗಿದೆ. ಸೋಮವಾರ ಸಂಜೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಏತನ್ಮಧ್ಯೆ, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸಹ ಮಧ್ಯಮದಿಂದ ತೀವ್ರವಾದ ಗುಡುಗು, ಮಿಂಚು ಮತ್ತು ಬಿರುಗಾಳಿಯ ಗಾಳಿಯೊಂದಿಗೆ , ದಕ್ಷಿಣ ಒಳಗಿನ ಕರ್ನಾಟಕದ ಮೇಲೆ, ಉತ್ತರದ ಒಳಭಾಗದ ತಮಿಳುನಾಡು, ಉತ್ತರದ ಕರಾವಳಿ ಆಂಧ್ರ ಪ್ರದೇಶ ಮತ್ತು ದಕ್ಷಿಣ ರಾಯಲಸೀಮಾ ಮೇಲೆ ಲಘುವಾಗಿ ಮಧ್ಯಮ ಮಳೆಯ ಬಗ್ಗೆ ಎಚ್ಚರಿಕೆ ನೀಡಿದೆ.

ಉತ್ತರ ಕರ್ನಾಟಕದಲ್ಲಿ ಬಿಸಿಲಿನ ಝಳ
ಮಂಗಳವಾರ ಲೋಕಸಭಾ ಚುನಾವಣ ಮತದಾನ ನಡೆಯಲಿರುವ ಉತ್ತರ ಕರ್ನಾಟಕದಲ್ಲಿ ಬಿಸಿಲಿನ ಝಳ ಮುಂದುವರಿಯುವ ಸಾಧ್ಯತೆ ಇದೆ. ಕರ್ನಾಟಕದ ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನವನ್ನು ನಿರೀಕ್ಷಿಸಲಾಗಿದೆ.
ಹೀಗಾಗಿ ಮಧ್ಯಾಹ್ನ 12.00 ರಿಂದ 3.00 ರವರೆಗೆ ನೇರವಾಗಿ ಸೂರ್ಯನ ಕಿರಣಗಳಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು. ಆಗಾಗ್ಗೆ ನೀರು ಕುಡಿಯುವ ಮೂಲಕ ದೇಹವನ್ನು ಹೈಡ್ರೇಟ್ ಆಗಿ ಇಟ್ಟುಕೊಳ್ಳಬೇಕು. ತೀವ್ರವಾದ ಶಾಖದ ಅಲೆಗಳಿಂದ ರಕ್ಷಣೆ ಪಡೆಯಲು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸುವುದು ಸೇರಿದಂತೆ ಹಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಸಾರ್ವಜನಿಕರಿಗೆ ಸಲಹೆ ನೀಡಿದೆ.












Click it and Unblock the Notifications