Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ
Liquor Sales: ಬೆಂಗಳೂರಿನ ವಿವಿಧ ಭಾಗಗಳಲ್ಲಿ / ನಿರ್ದಿಷ್ಟ ಪ್ರದೇಶಗಳಲ್ಲಿ ಮುಂದಿನ 48 ಗಂಟೆಯ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಯೋಜಿತ ಪ್ರತಿಭಟನೆಗಳ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮದ್ಯ ಮಾರಾಟ ನಿರ್ಬಂಧ ಹೇರಲಾಗಿದೆ. ಮಾರ್ಚ್ 24 ರಂದು ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 25 ರಂದು ರಾತ್ರಿ 10 ರವರೆಗೆ ಬೆಂಗಳೂರಿನ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಬೆಂಗಳೂರಿನ ಯಾವ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ ಇರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನ ವಿವಿಧ ಭಾಗಗಳಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ವಿವಿಧ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಹೀಗಾಗಿ, ವಿವಿಧ ಸಂಘಟನೆಗಳ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆಯ ದೃಷ್ಟಿPageಯಿಂದ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಬೆಂಗಳೂರಿನಲ್ಲಿ ಮಾರ್ಚ್ 24 ರಂದು ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 25ರ ರಾತ್ರಿ 10 ರವರೆಗೆ ಎಂಟು ಪೊಲೀಸ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ನಿರ್ಬಂಧದ ಸಮಯದಲ್ಲಿ ಹೆಚ್ಚಿನ ಭದ್ರತೆ ಮತ್ತು ಸಾರ್ವಜನಿಕ ಸಹಕಾರದೊಂದಿಗೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳು ಕರೆ ನೀಡಿದ ಪ್ರತಿಭಟನೆಗಳ ನಂತರ ಬೆಂಗಳೂರಿನಲ್ಲಿ ನಗರದ ಕೆಲವು ಭಾಗಗಳಲ್ಲಿ ಎರಡು ದಿನಗಳ ಮದ್ಯ ಮಾರಾಟ ನಿಷೇಧ ಹೇರಲಾಗಿದೆ. ಕರ್ನಾಟಕ ಮೀಸಲಾತಿ ರಕ್ಷಣಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟ ಆಯೋಜಿಸಿರುವ ಪ್ರತಿಭಟನೆಗಳನ್ನು ಗಮನದಲ್ಲಿರಿಸಿಕೊಂಡು ಈ ನಿರ್ಬಂಧ ವಿಧಿಸಲಾಗಿದೆ. ಕರ್ನಾಟಕ ಮೀಸಲಾತಿ ರಕ್ಷಣಾ ಒಕ್ಕೂಟವು ಮಾರ್ಚ್ 24 ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಮುಂದಾಗಿವೆ. ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟವು ಮಾರ್ಚ್ 25 ರಂದು ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ತಾತ್ಕಾಲಿಕ ನಿಷೇಧವನ್ನು ಜಾರಿಗೊಳಿಸುವ ಆದೇಶ ಹೊರಡಿಸಿದ್ದಾರೆ. ಅಧಿಕೃತ ಆದೇಶಗಳ ಪ್ರಕಾರ, ಬೆಂಗಳೂರಿನ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ಮಾರ್ಚ್ 24 ರ ಬುಧವಾರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 25 ರ ಗುರುವಾರ ರಾತ್ರಿ 10 ಗಂಟೆಯವರೆಗೆ ಮದ್ಯ ನಿಷೇಧ ಜಾರಿಯಲ್ಲಿವೆ.
ಬೆಂಗಳೂರಿನ ಈ ಭಾಗದಲ್ಲಿ ಮದ್ಯ ಮಾರಾಟ ನಿಷೇಧ
ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಅದರಲ್ಲಿ ಪ್ರಮುಖ ಪ್ರದೇಶಗಳು ಬೆಂಗಳೂರಿನ ಹೃದಯಭಾಗದಲ್ಲಿಯೇ ಇವೆ.
ಉಪ್ಪಾರಪೇಟೆ
ನಗರ ಮಾರುಕಟ್ಟೆ
ಕಾಟನ್‌ಪೇಟೆ
ಕಲಾಸಿಪಾಳ್ಯ
ಚಾಮರಾಜಪೇಟೆ
ಶೇಷಾದ್ರಿಪುರ
ಹಲಸೂರು ಗೇಟ್
ಬೆಂಗಳೂರಿನ ಈ ಎಂಟು ಪ್ರದೇಶಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿರ್ಬಂಧ ವಿಧಿಸಲಾಗಿದೆ. ಈ ಎಂಟು ಪೊಲೀಸ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮದ್ಯದಂಗಡಿಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಮದ್ಯ ಮಾರಾಟವನ್ನು ನಿರ್ಬಂಧಿಸಲಾಗಿದೆ. ಪ್ರತಿಭಟನೆಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಸೇರುವ ನಿರೀಕ್ಷೆ ಇದೆ. ಹೀಗಾಗಿ ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹಿಂದಿನ ದೇವಾಲಯ ಉತ್ಸವಗಳ ಸಮಯದಲ್ಲಿ ಮದ್ಯ ನಿಷೇಧ
ಈ ಹಿಂದೆ, ವಾರ್ಷಿಕ ಹುಸ್ಕೂರು ಮದ್ದೂರಮ್ಮ ಜಾತ್ರೆ ಮತ್ತು ಧರ್ಮರಾಯ ಸ್ವಾಮಿ ಜಾತ್ರಾ ಮಹೋತ್ಸವದ ಮೊದಲು ಶಾಂತಿಯುತ ಆಚರಣೆಗಳನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಬೆಂಗಳೂರಿನ ಕೆಲವು ಭಾಗಗಳಲ್ಲಿ ಮದ್ಯ ಮಾರಾಟದ ಮೇಲೆ ಇದೇ ರೀತಿಯ ತಾತ್ಕಾಲಿಕ ನಿಷೇಧವನ್ನು ವಿಧಿಸಿದ್ದರು.
ಮಾರ್ಚ್ 14 ರಿಂದ ಮಾರ್ಚ್ 15 ರವರೆಗೆ ಪರಪ್ಪನ ಅಗ್ರಹಾರ ಮತ್ತು ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೊರಡಿಸಿದ ಆದೇಶದಂತೆ ಈ ನಿರ್ಬಂಧವನ್ನು ಜಾರಿಗೆ ತರಲಾಗಿದೆ.












Click it and Unblock the Notifications