Liqour Ban: ಬೆಂಗಳೂರಿನ ಈ ಏರಿಯಾಗಳಲ್ಲಿ ಎರಡು ದಿನ ಎಣ್ಣೆ ಸಿಗಲ್ಲ!

ಬೆಂಗಳೂರಿನ ಹಲವು ಕಡೆಗಳಲ್ಲಿ ವಾರಾಂತ್ಯದಲ್ಲಿ ಸಾವಿರಾರು ಗಣೇಶ ಮೂರ್ತಿ ನಿಮಜ್ಜನ ಮತ್ತು ಮೆರವಣಿಗೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ಮುಂಜಾಗ್ರತಾ ಕ್ರಮವಾಗಿ ನಗರದ ವಿವಿಧ ಕಡೆಗಳಲ್ಲಿ ಸೆಪ್ಟೆಂಬರ್ 14 ರಿಂದ ಸೆಪ್ಟೆಂಬರ್ 16ರವರಗೆ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.

ಬಾರ್‌ಗಳು, ರೆಸ್ಟೋರೆಂಟ್‌ಗಳು, ವೈನ್ ಶಾಪ್‌ಗಳು, ಪಬ್‌ಗಳು ಮತ್ತು ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (MSIL) ಔಟ್‌ಲೆಟ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದ್ದು, ಇದು ಕ್ಲಬ್‌ಗಳು (ಸಿಎಲ್‌-4) ಮತ್ತು ಸ್ಟಾರ್ ಹೋಟೆಲ್‌ಗಳು (ಸಿಎಲ್‌-6ಎ) ಪರವಾನಗಿ ಹೊಂದಿರುವ ಕಡೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

bengaluru liquor ban during ganesha idol immersion

ಉತ್ತರ ಮತ್ತು ಪೂರ್ವ ಬೆಂಗಳೂರಿನ ಏಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಜೆಸಿ ನಗರ, ಆರ್‌ಟಿ ನಗರ, ಹೆಬ್ಬಾಳ, ಸಂಜಯ್ ನಗರ, ಡಿಜೆ ಹಳ್ಳಿ, ಭಾರತಿ ನಗರ ಮತ್ತು ಪುಲಕೇಶಿನಗರ ಪ್ರದೇಶಗಳಲ್ಲಿ ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಜೆಸಿ ನಗರ,

ಪೂರ್ವ ಮತ್ತು ಈಶಾನ್ಯ ಬೆಂಗಳೂರಿನ ಎಂಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕಮರ್ಷಿಯಲ್ ಸ್ಟ್ರೀಟ್, ಭಾರತಿ ನಗರ, ಶಿವಾಜಿನಗರ, ಪುಲಕೇಶಿನಗರ, ಹಲಸೂರು, ಯಲಹಂಕ, ಯಲಹಂಕ ನ್ಯೂ ಟೌನ್ ಮತ್ತು ವಿದ್ಯಾರಣ್ಯಪುರ ಪ್ರದೇಶಗಳಲ್ಲಿ ಭಾನುವಾರ ಬೆಳಿಗ್ಗೆ 6 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ನಗರದೆಲ್ಲೆಡೆ ಬಿಗಿ ಭದ್ರತೆ

ವಾರಾಂತ್ಯವಾಗಿರುವ ಕಾರಣ ಹಲವು ಕಡೆ ಸಾಮೂಹಿಕ ಗಣೇಶೋತ್ಸವ ನಡೆಯುವ ಕಾರಣ, ಪೊಲೀಸರು ಈಗಾಗಲೇ ಎಲ್ಲಾ ಕಡೆ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದು, ಯಾವುದೇ ಅನಾಹುತ ನಡೆಯದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ಅತಿ ಸೂಕ್ಷ್ಮ ಪ್ರದೇಶಗಳಾದ ಬನಶಂಕರಿ, ಆರ್.ಟಿ.ನಗರ, ಚಾಮರಾಜಪೇಟೆ, ಜೆ.ಜೆ.ನಗರ, ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ, ವಿವೇಕನಗರ, ಎಸ್.ಜಿ ಪಾಳ್ಯ, ತಿಲಕನಗರ, ಜೆ.ಸಿ.ನಗರದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಗಣೇಶ ಮೆರವಣಿಗೆ ನಡೆಯುವ ಮಾರ್ಗಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಕೂಡ ಅಳವಡಿಸಲಾಗಿದ್ದು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ನಾಗಮಂಗಲ ಗಲಭೆ ಬಳಿಕ ಬೆಂಗಳೂರಿನಲ್ಲಿ ಹಿಂದೂ ಪರ ಸಂಘಟನೆಗಳು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದ್ದವು. ಇದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸರ್ಕಾರ ಕೂಡ ತೀವ್ರ ಕಟ್ಟೆಚ್ಚರ ವಹಿಸಲು ಪೊಲೀಸ್ ಇಲಾಖೆಗೆ ಸೂಚನೆ ಕೊಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+