ಬೆಂಗಳೂರು ಲಾಕ್ ಡೌನ್; ಮದ್ಯ ಮಾರಾಟ ಬಂದ್

ಬೆಂಗಳೂರು, ಜುಲೈ 13 : ಕರ್ನಾಟಕ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಂಗಳವಾರದಿಂದ ಲಾಕ್ ಡೌನ್ ಜಾರಿಗೊಳಿಸಲಿದೆ. ಲಾಕ್ ಡೌನ್ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಮದ್ಯ ಮಾರಾಟವಿಲ್ಲ.

ಸೋಮವಾರ ಸಂಜೆ ಕರ್ನಾಟಕ ಸರ್ಕಾರ ಲಾಕ್ ಡೌನ್ ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಮೊದಲು ಮಾರ್ಗಸೂಚಿಯಲ್ಲಿ ಮದ್ಯ ಮರಾಟಕ್ಕೆ ಅವಕಾಶ ನೀಡಲಾಗಿತ್ತು. ಪಾರ್ಸೆಲ್ ಮಾತ್ರ ತೆಗೆದುಕೊಂಡು ಹೋಗಬಹುದು ಎಂದು ತಿಳಿಸಲಾಗಿತ್ತು.

ಕೆಲವೇ ಗಂಟೆಗಳಲ್ಲಿ ಸರ್ಕಾರ ಲಾಕ್ ಡೌನ್ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದ್ದು ಲಾಕ್ ಡೌನ್ ಅವಧಿಯಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಆದೇಶ ನೀಡಿದೆ. ಪಾರ್ಸೆಲ್ ತೆಗೆದುಕೊಂಡು ಹೋಗಲು ಸಹ ಅವಕಾಶವಿಲ್ಲ.

Bengaluru Lockdown Guidelines Liquor Sales Banned

ಮೊದಲು ಮಾರ್ಗಸೂಚಿಯಲ್ಲಿ ಲಿಕ್ಕರ್ ಅಂಗಡಿಗಳು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ತನಕ ಬಾಗಿಲು ತೆರೆಯಬಹುದು. ಜನರು ಪಾರ್ಸೆಲ್ ತೆಗೆದುಕೊಂಡು ಹೋಗಬಹುದು ಎಂದು ಹೇಳಿತ್ತು. ಬಳಿಕ ಮದ್ಯ ಮಾರಾಟಕ್ಕೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲಾಗಿದೆ.

ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಸೋಮವಾರವೂ ಬೆಂಗಳೂರು ನಗರದಲ್ಲಿ 1,315 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ.

ಕರ್ನಾಟಕ ಸರ್ಕಾರದ ಆದೇಶದಂತೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಜುಲೈ 14ರ ಮಂಗಳವಾರ ರಾತ್ರಿ 8 ಗಂಟೆಯಿಂದ ಜುಲೈ 22ರ ಸಂಜೆ 5 ಗಂಟೆ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಮದ್ಯ ಮಾರಾಟವಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+