Bengaluru Lok Sabha Election: 4 ಕ್ಷೇತ್ರಗಳಿಗೆ ಮತದಾನ ಯಾವಾಗ? ವೇಳಾಪಟ್ಟಿ, ವಿವರ

ಬೆಂಗಳೂರು, ಮಾರ್ಚ್ 20: ಭಾರತೀಯ ಕೇಂದ್ರ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯ ಮತದಾನ ಮತ್ತು ಫಲಿತಾಂಶ ಪ್ರಕ್ರಿಯೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಹಾಗಾದರೆ ಕರ್ನಾಟಕ ರಾಜಧಾನಿ ಬೆಂಗಳೂರ ವ್ಯಾಪ್ತಿಯಲ್ಲಿ ಯಾವ ಹಂತದಲ್ಲಿ ಚುನಾವಣೆ ನಡೆಯಲಿದೆ, ಯಾವೆಲ್ಲ ಕ್ಷೇತ್ರಗಳಿವೆ ಎಂಬ ಮಾಹಿತಿ ಇಲ್ಲಿದೆ.

ಭಾರತದ ಒಟ್ಟು 543 ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಈ ಪೈಕಿ ಕರ್ನಾಟಕದ ಒಟ್ಟು 28 ಲೋಕಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26 ಮತ್ತು ಮೇ 7 ರಂದು ಚುನಾವಣೆ ಜರುಗಲಿದೆ ಎಂದು ಆಯೋಗದ ಅಧ್ಯಕ್ಷ ರಾಜೀವ್ ಕುಮಾರ್ ಅವರು ದಿನಾಂಕ ಪ್ರಕಟಿಸಿದ್ದ ದಿನ ಶನಿವಾರ ತಿಳಿಸಿದ್ದರು.

Bengaluru Lok Sabha Election 2024 Bengaluru When Will Go To Voting Now Schedule

ಬೆಂಗಳೂರು ಲೋಕಸಭಾ ಚುನಾವಣೆ: ವೇಳಾಪಟ್ಟಿ

ಕರ್ನಾಟಕದ ಎಲ್ಲ ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ಎರಡು ಜಿಲ್ಲೆ ವ್ಯಾಪ್ತಿಯಲ್ಲಿಯೇ ಒಟ್ಟು 4 ವಿಧಾನ

ನಾಲ್ಕು ಲೋಕಸಭಾ ಸ್ಥಾನಗಳನ್ನು ಒಳಗೊಂಡಿದೆ. ಈ ನಾಲ್ಕು ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಅಂದರೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಜೂನ್ 4 ರೊಳಗೆ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

2019 ರ ಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ಬೆಂಗಳೂರಿನ ನಾಲ್ಕು ಸ್ಥಾನಗಳ ಪೈಕಿ ಮೂರರಲ್ಲಿ ಗೆಲುವು ಸಾಧಿಸಿದೆ. ಬೆಂಗಳೂರು ಬಹುತೇಕ ಬಿಜೆಪಿ ಭದ್ರಕೋಟೆ ಎಂದರೆ ತಪ್ಪಾಗಲಾರದು. ಕಾಂಗ್ರೆಸ್ ಬೆಂಗಳೂರು ಗ್ರಾಮೀಣ ಭಾಗದ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಂಡಿದೆ. ಈ ಬಾರಿ ಅದನ್ನು ಬಿಟ್ಟುಕೊಡದಂತೆ ತಂತ್ರ ರೂಪಿಸಿದೆ.

Bengaluru Lok Sabha Election 2024 Bengaluru When Will Go To Voting Now Schedule

ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್ ಜಯಭೇರಿ ಬಾರಿಸಿದ್ದಾರೆ. ಇನ್ನೂ ಬೆಂಗಳೂರು ಉತ್ತರ ಡಿವಿ ಸದಾನಂದಗೌಡರು, ಬೆಂಗಳೂರು ಕೇಂದ್ರದಲ್ಲಿ ಪಿಸಿ ಮೋಹನ್ ಹಾಗೂ ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ ಅವರು ಗೆಲುವು ಸಾಧಿಸಿದ್ದಾರೆ.

ಭಾರತವು 2024 ರ ಲೋಕಸಭೆ ಚುನಾವಣೆ ಎದುರಿಸಲು ಸಜ್ಜಾಗಿದೆ. ದೇಶದಲ್ಲಿ ಒಟ್ಟು 97 ಕೋಟಿ ಮತದಾರರಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. 10.5 ಲಕ್ಷ ಮತಗಟ್ಟೆಗಳು ಮತ್ತು 1.5 ಕೋಟಿ ಮತಗಟ್ಟೆ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಬೃಹತ್ ಚುನಾವಣಾ ಪ್ರಕ್ರಿಯೆಗೆ ಸಿದ್ಧತೆಗಳು ನಡೆಯುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+