ಚೂರಿ ಇರಿತ ಕೇಸ್:ಆಸ್ಪತ್ರೆಯಿಂದ ಇಂದು ವಿಶ್ವನಾಥ್ ಶೆಟ್ಟಿ ಡಿಸ್ಚಾರ್ಜ್
ಬೆಂಗಳೂರು, ಮಾರ್ಚ್ 07: ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ದಾಖಲಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರನ್ನು ಇಂದು(ಮಾ.14) ಡಿಸ್ಚಾರ್ಜ್ ಮಾಡುವುದಾಗಿ ಮಲ್ಯ ಆಸ್ಪತ್ರೆ ವೈದ್ಯ ದಿವಾಕರ್ ಶೆಟ್ಟಿ ಹೇಳಿದ್ದಾರೆ.
ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ. ಆದರೆ ಸಂಪೂರ್ಣ ಗುಣಮುಖರಾಗಲು ಕನಿಷ್ಠ ಒಂದು ತಿಂಗಳಾದರೂ ಬೇಕು ಎಂದು ಅವರು ಹೇಳಿದ್ದಾರೆ.
ಮಾ. 7 ರಂದು ಲೋಕಾಯುಕ್ತ ಕಚೇರಿಗೆ ದೂರು ನೀಡುವುದಕ್ಕಾಗಿ ಬಂದಿದ್ದ ದುಷ್ಕರ್ಮಿಯೊಬ್ಬ ಅವರಿಗೆ ಅವರ ಚೇಂಬರ್ ನಲ್ಲಿಯೇ ಚಾಕುವಿನಿಂದ ಇರಿದು ಹಲ್ಲೆಗೊಳಿಸಿದ್ದ. ತಕ್ಷಣವೇ ಅವರನ್ನು ಆಸ್ಪತ್ರೆಗೆ ರವಾನಿಸಿದ್ದರಿಂದ ಶೆಟ್ಟಿಯವರು ಪ್ರಾಣಾಪಾಯದಿಂದ ಪಾರಾಗಿದ್ದರು.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಆರೋಪಿಯನ್ನು ತೇಜಸ್ ಶರ್ಮಾ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಿರುವ ಪೊಲೀಸರು, ಆತನ ವಿರುದ್ಧ ಐಪಿಸಿ ಸೆಕ್ಷನ್ 307, 341 ಸೇರಿದಂತೆ ವಿವಿಧ ಸೆಕ್ಷನ್ ಗಳಡಿಯಲ್ಲಿ ಎಫ್ಐಆರ್ ದಾಖಲು ಮಾಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.












Click it and Unblock the Notifications