ಬೆಂಗಳೂರು - ಲಂಡನ್ ಏರ್ ಇಂಡಿಯಾ ಬೋಯಿಂಗ್ ವಿಮಾನದಲ್ಲಿ ಇಂಧನ ಸ್ವಿಚ್ ದೋಷ, ತುರ್ತು ಭೂಸ್ಪರ್ಶ
ಬೆಂಗಳೂರು: ವಿಮಾನದ ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ದೋಷವಿರುವ ಸಾಧ್ಯತೆ ಇದೆ ಎಂದು ಪೈಲಟ್ ಗುರುತಿಸಿದ ನಂತರ ಲಂಡನ್ ಮತ್ತು ಬೆಂಗಳೂರು ನಡುವೆ ಸಂಚರಿಸಬೇಕಾಗಿದ್ದ ಏರ್ ಇಂಡಿಯಾ ವಿಮಾನದ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಈಚೆಗೆ ಸಂಭವಿಸಿದ್ದ ಅಹಮದಾಬಾದ್ - ಲಂಡನ್ ನಡುವಿನ ವಿಮಾನದ ಅಪಘಾತಕ್ಕೂ ಇದೇ ಕಾರಣ ಎಂದು ಹೇಳಲಾಗುತ್ತಿದೆ. ಆ ವಿಮಾನ ಅಪಘಾತ ಮತ್ತು ಕಾಕ್‌ಪಿಟ್‌ನ ಸೋರಿಕೆಯಾದ ಆಡಿಯೋ ವಿಚಾರವನ್ನು ಈ ಬೆಳವಣಿಗೆ ನೆನಪಿಸುವಂತೆ ಇದೆ. ಲಂಡನ್ ಮತ್ತು ಬೆಂಗಳೂರು ನಡುವೆ ಸಂಚರಿಸಬೇಕಾಗಿದ್ದ ಏರ್ ಇಂಡಿಯಾ ವಿಮಾನದಲ್ಲಿ ಸಂಭವಿಸಿದ್ದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಪ್ರಾಥಮಿಕ ವರದಿಯ ಪ್ರಕಾರ, ಬೋಯಿಂಗ್ 787-8 ವಿಮಾನವು ಲಂಡನ್‌ನಿಂದ ಬೆಂಗಳೂರಿಗೆ ಹಾರಾಟ ನಡೆಸಬೇಕಾಗಿತ್ತು. AI 132 ವಿಮಾನ ಹಾರಾಟಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಸಹ ಮಾಡಿಕೊಳ್ಳಲಾಗಿತ್ತು. ಆದರೆ, ಪೂರ್ವ ವಿಮಾನ ಸಿದ್ಧತೆಯನ್ನು ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಮಸ್ಯೆ ಪತ್ತೆಯಾಗಿದ್ದು, ಈ ಕಾರಣದಿಂದ ವಿಚಾರ ಬೆಳಕಿಗೆ ಬಂದಿದೆ. ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ ಎಂದು ಹೇಳಲಾಗುತ್ತಿದೆ. ಭಾರತದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಸಂಭವಿಸಿರುವ ವಿಮಾನ ಹಾಗೂ ಹೆಲಿಕಾಪ್ಟರ್‌ಗಳ ಪತನ ಸುದ್ದಿ ಇನ್ನೂ ಮಾಸದೆ ಇರುವಾಗಲೇ ಆತಂಕಕಾರಿ ವಿಚಾರಗಳು ವರದಿಯಾಗುತ್ತಿವೆ.

ಬೋಯಿಂಗ್ 787-8 ವಿಮಾನವು ಲಂಡನ್‌ನಿಂದ ಬೆಂಗಳೂರಿಗೆ AI 132 ವಿಮಾನದ ಹಾರಾಟ ನಡೆಸುವುದಕ್ಕೆ ನಿರ್ಧರಿಸಲಾಗಿತ್ತು. ಆದರೆ ಹಾರಾಟದ ಪೂರ್ವ ಕಾರ್ಯವಿಧಾನಗಳ ಪರಿಶೀಲನೆಯ ಸಮಯದಲ್ಲಿ ಸಮಸ್ಯೆಯನ್ನು ಗುರುತಿಸಲಾಯಿತು. ನಮ್ಮ ಪೈಲಟ್‌ಗಳಲ್ಲಿ ಒಬ್ಬರು ಬೋಯಿಂಗ್ 787-8 ವಿಮಾನದ ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ಸಂಭವನೀಯ ದೋಷವಿದೆ ಎಂದು ವರದಿ ಮಾಡಿದ್ದಾರೆ ಎಂದು ವಿಮಾನಯಾನ ಸಂಸ್ಥೆ ಹೇಳಿರುವುದಾಗಿ ವರದಿಯಾಗಿದೆ. ಪ್ರಾಥಮಿಕ ವರದಿಯ ಆಧಾರದ ಮೇಲೆ ನಾವು ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದೇವೆ. ಆದ್ಯತೆಯ ಆಧಾರದ ಮೇಲೆ ಪೈಲಟ್ ಅವರು ಗುರುತಿಸಿರುವ ಸಮಸ್ಯೆಯನ್ನು ಪರಿಶೀಲನೆ ಮಾಡುತ್ತಿದ್ದೇವೆ ಎಂದು ವಿಮಾನಯಾನ ಸಂಸ್ಥೆಯು ಹೇಳಿದೆ.
Air India Boeing ಅಹಮದಾಬಾದ್ - ಲಂಡನ್ ಅಪಘಾತ
ಅಹಮದಾಬಾದ್‌ನಿಂದ ಲಂಡನ್‌ಗೆ ಹಾರಾಟ ನಡೆಸಿದ್ದ ವಿಮಾನವು ಹಾರಾಟ ಪ್ರಾರಂಭಿಸಿದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ಜೂನ್ 12, 2025 ರಂದು ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹಾರಾಟ ನಡೆಸಿದ್ದ ಏರ್ ಇಂಡಿಯಾದ ಬೋಯಿಂಗ್ 787-8 ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ಅಪಘಾತಕ್ಕೀಡಾಗಿತ್ತು. ಈ ವಿಮಾನ ಅಪಘಾತದಲ್ಲಿ 241 ಜನ ಪ್ರಯಾಣಿಕರು ಸೇರಿದಂತೆ ಒಟ್ಟು 260 ಜನರು ಸಾವನ್ನಪ್ಪಿದ್ದರು. ಇದು ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಈ ದೋಷವು ಭಾರತದಲ್ಲಿ ನಡೆದ ಅತ್ಯಂತ ಭೀಕರ ವಿಮಾನ ಅಪಘಾತಗಳಲ್ಲಿ ಒಂದಾಗಿದೆ.
ಕಳೆದ ವರ್ಷ ಜೂನ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಕಾರಣವಾದ ಎಲ್ಲಾ ಸಂಭಾವ್ಯ ಕಾರಣಗಳನ್ನು ತನಿಖೆ ಮಾಡಲಾಗುತ್ತಿದೆ ಮತ್ತು ಸಮಯಕ್ಕೆ ಅನುಗುಣವಾಗಿ ತನಿಖೆಯನ್ನು ಪೂರ್ಣಗೊಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಸೋಮವಾರ ತಿಳಿಸಿದೆ.
ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ನಡೆಸುತ್ತಿರುವ ತನಿಖೆಯು ಪ್ರಗತಿಯಲ್ಲಿದೆ. ಕಳೆದ ವರ್ಷ ಜುಲೈ 12 ರಂದು ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ವರದಿಯಲ್ಲಿ ವಿಮಾನದ ಎರಡೂ ಎಂಜಿನ್‌ಗಳಿಗೆ ಇಂಧನ ಪೂರೈಕೆಯನ್ನು ಒಂದು ಸೆಕೆಂಡ್ ಅಂತರದಲ್ಲಿ ಕಡಿತಗೊಳಿಸಲಾಗಿತ್ತು. ಇದು ಟೇಕ್ ಆಫ್ ಆದ ತಕ್ಷಣ ಕಾಕ್‌ಪಿಟ್‌ನಲ್ಲಿ ಗೊಂದಲವನ್ನು ಉಂಟುಮಾಡಿತು ಎಂದು ವಿಮಾನ ಅಪಘಾತ ತನಿಖಾ ಬ್ಯೂರೋ ಹೇಳಿದೆ.












Click it and Unblock the Notifications