ಬೆಂಗಳೂರಿನ ಪ್ರಮುಖ ಮೇಲ್ಸೇತುವೆ ಮಾರ್ಗ ಬದಲಾವಣೆ: ವಾಹನ ಸವಾರರೇ ಗಮನಿಸಿ!
ಬೆಂಗಳೂರಿನ ಪ್ರಮುಖ ಮಾರ್ಗದಲ್ಲಿ ಹಾಗೂ ಫ್ಲೈಓವರ್‌ನಲ್ಲಿ ಸಂಚಾರ ಬದಲಾವಣೆಯನ್ನು ಮಾಡಲಾಗಿದೆ. ಬೆಂಗಳೂರಿನಲ್ಲಿ ಹಲವು ಫ್ಲೈಓವರ್ ಹಾಗೂ ರಸ್ತೆಗಳ ಕಾಮಗಾರಿ ನಡೆಯುತ್ತಿದ್ದು ಕೆಲವೊಂದು ಪ್ರಮುಖ ಮಾರ್ಗಗಳ ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇನ್ನು ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ರಸ್ತೆ ಅಭಿವೃದ್ಧಿ ಹಾಗೂ ಟಾರ್ ಹಾಕುತ್ತಿರುವುದರಿಂದ ಕೆಲವೊಂದು ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಅದರಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಭಾರೀ ಸಂಚಾರ ಹಾಗೂ ಟ್ರಾಫಿಕ್ ಜಾಮ್ ಇರುವ ಪ್ರಮುಖ ರಸ್ತೆಯಲ್ಲೇ ಇದೀಗ ಮಹತ್ವದ ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ. ಅದೇನು ಎನ್ನುವ ವಿವರ ಇಲ್ಲಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಡಾಂಬರೀಕರಣ ಪ್ರಕ್ರಿಯೆ ಪ್ರಾರಂಭಿಸಿರುವುದರಿಂದಾಗಿ ನಗರದ ಪ್ರಮುಖ ಮೇಲ್ಸೇತುವೆಗಳಲ್ಲಿ ಒಂದಾಗಿರುವ ಹೆಬ್ಬಾಳ ಮೇಲ್ಸೇತುವೆಯ ಒಂದು ಭಾಗದಲ್ಲಿ ರಾತ್ರಿ ಸಂಚಾರವನ್ನು ನಿಷೇಧಿಸಲಾಗಿದೆ. ಇನ್ನು ಈ ಬದಲಾವಣೆಯು ಬುಧವಾರದಿಂದಲೇ ಪ್ರಾರಂಭವಾಗಿದ್ದು. ಇನ್ನೊ ಕೆಲವು ದಿನಗಳು ಇರಲಿವೆ. ಇದಕ್ಕೆ ಪರ್ಯಾಯ ಮಾರ್ಗಗಳನ್ನೂ ಪರಿಚಯಿಸಲಾಗಿದೆ. ಈ ಮಾರ್ಗವಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ವಿವಿಧ ಪ್ರಮುಖ ಮಾರ್ಗಗಳಿಗೆ ಈ ಮೇಲ್ಸೇತುವೆಯು ಸಂಪರ್ಕ ಕಲ್ಪಿಸುತ್ತದೆ. ಬೆಂಗಳೂರು ನಗರಕ್ಕೆ ಮುಖ್ಯ ಮಾರ್ಗವಾಗಿದೆ. ಆದರೆ ಈ ಭಾಗದಲ್ಲಿ ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ.

ಹೆಬ್ಬಾಳ ಮೇಲ್ಸೇತುವೆ ಮಾರ್ಗದಲ್ಲಿ ಶನಿವಾರ ವರೆಗೆ ನಿಷೇಧ ಜಾರಿಯಲ್ಲಿರಲಿದೆ ಎಂದು ಬೃಹತ್ ಬೆಂಗಳೂರು ಮಾಹನಗರ ಪಾಲಿಕೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಹೆಬ್ಬಾಳ ಮೇಲ್ಸೇತುವೆಯ ಎರಡೂ ಮಾರ್ಗಗಳಲ್ಲೂ ರಾತ್ರಿ 12 ರಿಂದ ಬೆಳಗ್ಗೆ 6ರ ಗಂಟೆಯ ವರೆಗೆ ದುರಸ್ತಿ ಹಾಗೂ ಕಾಮಗಾರಿ ನಡೆಯಲಿದೆ ಎಂದು ಹೇಳಲಾಗಿದೆ. ಹೀಗಾಗಿ ಕೆಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧವನ್ನು ವಿಧಿಸಲಾಗಿದೆ.
ಈ ಭಾಗದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಗರದ ಕಡೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಫ್ಲೈಓವರ್ ರ‍್ಯಾಂಪ್ ಮುಚ್ಚಲಾಗುತ್ತದೆ. ಇನ್ನು ಬಿಬಿಎಂಪಿಯು ಮೊದಲ ಹಂತದಲ್ಲಿ ಬೆಂಗಳೂರು ಕಡೆಗೆ ಸಂಚರಿಸುವ ಲೇನ್‌ನಲ್ಲಿ ಕಾಮಗಾರಿ ನಡೆಸಲಿದೆ. ಇದು ಮುಕ್ತಾಯವಾದ ಮೇಲೆ ಮತ್ತೊಂದು ಮಾರ್ಗದಲ್ಲೂ ಕಾಮಗಾರಿ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪರ್ಯಾಯ ಮಾರ್ಗ ಪರಿಚಯ: ಇನ್ನು ಬೆಂಗಳೂರಿನ ಪ್ರಮುಖ ಮೇಲ್ಸೇತುವೆ ಸಂಚಾರ ನಿರ್ಬಂಧದ ಹಿನ್ನೆಲೆಯಲ್ಲಿ ಈ ಸಂದರ್ಭದಲ್ಲಿ ಯಲಹಂಕ ಮತ್ತು ಬೆಂಗಳೂರು ಅಂತಾರರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗವಾಗಿ ಬರುವ ವಾಹನ ಸವಾರರು ಫ್ಲೈಓವರ್‌ನ ಕೆಳಗಿನ ಸರ್ವಿಸ್ ರಸ್ತೆಯ ಮಾರ್ಗವಾಗಿ ಬರಬಹುದಾಗಿದೆ. ಅಲ್ಲದೇ ಈ ಮಾರ್ಗವಾಗಿ ಮುಂದುವರಿದು ಹೆಬ್ಬಾಳ ಜಂಕ್ಷನ್‌ನ ಭದ್ರಪ್ಪ ಲೇಔಟ್ ಕಡೆಗೆ ಬಲಕ್ಕೆ ತಿರುಗಿ ಮುಂದೆ ನ್ಯೂ ಬಿಇಎಲ್ ರಸ್ತೆ ಹಾಗೂ ಮೇಖ್ರಿ ಸರ್ಕಲ್‌ನ ಮೂಲಕ ನಗರಕ್ಕೆ ಬರಬಹುದಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications