ಬೆಂಗಳೂರಲ್ಲಿ ಪತ್ನಿ ಕಿರುಕುಳಕ್ಕೆ ಪತಿ ಆತ್ಮಹತ್ಯೆ!
ಬೆಂಗಳೂರು, ನವೆಂಬರ್ 10: ಮೊದಲೆಲ್ಲ "ಗಂಡ-ಹೆಂಡತಿ ಉಂಡು ಮಲಗುವ ತನಕ" ಎನ್ನುವ ಮಾತಿತ್ತು. ಆದರೆ, ಇದು ಇತ್ತೀಚಿನ ದಿನಗಳಲ್ಲಿ ಬದಲಾಗಿಬಿಟ್ಟಿದೆ, ಜಗಳಗಳು ಕೊನೆಗೆ ಕೊಲೆಯಲ್ಲಿ ಅಂತ್ಯವಾದ ಘಟನೆಗಳು ನಡೆದಿರುವ ಉದಾಹರಣೆಗಳಿವೆ. ಇದೀಗ ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.
ವರದಕ್ಷಿಣೆ ಕೊಡಲಿಲ್ಲವೆಂದು ಹೆಣ್ಣಿಗೆ ಗಂಡಿನ ಕಡೆಯವರು ಚಿತ್ರಹಿಂಸೆ ಕೊಟ್ಟಿರುವುದನ್ನು ನಾವು ಕೇಳಿರುತ್ತೇವೆ. ಆದರೆ, ಇದೀಗ ಪತ್ನಿ ಕಿರುಕುಳದಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾದ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಂತಹ ಪ್ರಕರಣಗಳು ನಗರದಲ್ಲಿ ಹೆಚ್ಚಾಗುತ್ತಲಿವೆ.

ನಗರದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಪತಿ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗಿರಿನಗರದಲ್ಲಿ ನಡೆದಿದೆ. ಬೆಂಗಳೂರಿನ ಗಿರಿನಗರದಲ್ಲಿ ಗಗನ್ ರಾವ್ ಎಂಬುವರು ಆತ್ಮಹತ್ಯೆಗೆ ಶರಣಾದಂತ ವ್ಯಕ್ತಿ ಆಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ, ನಡೆದಿದ್ದೇನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ಗಗನ್ ರಾವ್ ಅವರು ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ 8 ತಿಂಗಳ ಹಿಂದಷ್ಟೇ ಗಗನ್ ರಾವ್ ಹಾಗೂ ಮೇಘನ್ ಜಾಧವ್ ವಿವಾಹ ಆಗಿದ್ದರು. ಆರಂಭದಲ್ಲಿ ಎಲ್ಲವೂ ಚೆನ್ನಾಗಿದ್ದಂತಹ ಸಂಸಾರದಲ್ಲಿ ಬಿರುಕು ಮೂಡಿದೆ. ಇದು ಪತಿ-ಪತ್ನಿ ನಡುವೆ ಜಗಳಕ್ಕೆ ಕಾರಣವಾಗಿತ್ತು. ಪತಿ ಗಗನ್ ರಾವ್‌ಗೆ ಪತ್ನಿ ಮೇಘನ ಜಾಧವ್ ಕಿರುಕುಳ ನೀಡುತ್ತಿದ್ದರಂತೆ.
ಇದರಿಂದ ಬೇಸತ್ತು ಪತಿ ಗಗನ್ ರಾವ್ ತಮ್ಮ ಗಿರಿನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಗಿರಿನಗರ ಠಾಣೆಯ ಪೊಲೀಸರು, ಮೃತನ ತಂಗಿಯಿಂದ ದೂರು ಪಡೆದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಇಂತಹ ವಿಚಿತ್ರ ಘಟನೆಗಳು ನಡೆದಿರುವುದು ಇದೇ ಮೊದಲೇನಲ್ಲ.. ಈ ಹಿಂದೆಯೂ ಸಹ ನಡೆದಿವೆ.
ಆತ್ಮಹತ್ಯೆ ತಡೆ ಸಹಾಯವಾಣಿ: ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಆರಂಭಿಸಲಾಗಿದೆ. ದೂರವಾಣಿ ಸಂಖ್ಯೆ 080 - 25497777.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications