ಯಾವ ಜಿಲ್ಲೆ, ನಗರಗಳಲ್ಲಿ ಹಾದು ಹೋಗಲಿದೆ ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ ವೇ? ಪ್ರಯೋಜನಗಳೇನು
Bengaluru-Mangaluru Expressway: ಈಗಾಗಲೇ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ನಿರ್ಮಾಣವಾಗಿದ್ದು, ವಾಹಗಳು ಕೂಡ ಸಂಚರಿಸುತ್ತಿವೆ. ಇದೀಗ ಇದೇ ರೀತಿಯಲ್ಲಿ ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ ವೇ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಹಾಗಾದರೆ ಈ ಹೆದ್ದಾರಿ ಯಾವ್ಯಾವ ಜಿಲ್ಲೆಗಳ ಮೇಲೆ ಹಾದು ಹೋಗಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬೆಂಗಳೂರಿನಿಂದ ಮಂಗಳೂರಿಗೆ ಅಥವಾ ಮಂಗಳೂರಿನಿಂದ ಬೆಂಗಳೂರಿಗೆ ಹೋಗಬೇಕೆಂದರೆ ಸುಮಾರು 350 ಕಿಲೋ ಮೀಟರ್ ಆಗುತ್ತದೆ. ಇಲ್ಲಿಗೆ ತಲುಪಲು ಸರಿಸುಮಾರು ಅಂದರೆ 6-7 ಗಂಟೆಗಳ ಕಾಲ ಸಮಯ ಬೇಕಾಗುತ್ತದೆ. ಆದರೆ, ಈ ಎಕ್ಸ್‌ಪ್ರೆಸ್ ವೇಳೆ ನಿರ್ಮಾಣದ ಆದರೆ ಪ್ರಯಾಣದ ಸಮಯ ಕಡಿತವಾಗಲಿದೆ.

ಎಷ್ಟು ಸಮಯ ಕಡಿತ?: ಈ ಎಕ್ಸ್‌ಪ್ರೆಸ್ ವೇ ನಿರ್ಮಾಣ ಆದರೆ ಬೆಂಗಳೂರಿನಿಂದ-ಮಂಗಳೂರಿಗೆ ಕೇವಲ 4-5 ಗಂಟೆಯೊಳಗೆ ತಲುಪಬಹುದು ಎಂದು ಅಂದಾಜಿಸಲಾಗಿದೆ. ಈಗಾಗಲೇ ಡಿಪಿಆರ್ ತಯಾರಿಸಲು ಟೆಂಡರ್ ಕರೆಯಲಾಗಿತ್ತು. 9 ಕಂಪನಿಗಳು ಟೆಂಡತರ್ನಲ್ಲಿ ಭಾಗಿಯಾಗಿದ್ದವು. 2025ರ ಜನವರಿ ಅಂದರೆ ಇದೇ ತಿಂಗಳಲ್ಲಿ ಟೆಂಡರ್ ಬಹುತೇಕ ಫೈನಲ್ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಯಾವೆಲ್ಲ ಜಿಲ್ಲೆಗಳ ಮೇಲೆ ಹಾದುಹೋಗಲಿದೆ?: ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ ವೇ ತುಮಕೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಹಾದುಹೋಗಲಿದೆ ಎನ್ನುವ ಮಾಹಿತಿ ಇದೆ. ಇನ್ನು ಈ ಹೆದ್ದಾರಿಯನ್ನು 4 ಅಥವಾ 6 ಲೈನ್‌ನಲ್ಲಿ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಈ ಎಕ್ಸ್‌ಪ್ರೆಸ್ ವೇ 335 ಕಿಲೋ ಮೀಟರ್ ವಿಸ್ತೀರ್ಣ ಇರಲಿದ್ದು, ಟೆಂಡರ್ ಪಡೆದುಕೊಳ್ಳುವ ಕಂಪನಿಗೆ ಡಿಪಿಆರ್ ವರದಿ ಸಲ್ಲಿಸಲು ಕಾಲವಕಾಶ ನೀಡಲಾಗುತ್ತದ ಎಂದು ತಿಳಿದುಬಂದಿದೆ.
ಕಾಮಗಾರಿ ಆರಂಭ ಯಾವಾಗ?: ಇನ್ನು 2028ರಲ್ಲಿ ಈ ಎಕ್ಸ್‌ಪ್ರೆಸ್ ವೇ ಯೋಜನೆಯ ಕಾಮಗಾರಿ ಆರಂಭವಾಗಲಿದ್ದು, 2-3 ವರ್ಷಗಳಲ್ಲಿ ಮುಕ್ತಾಯವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಎಕ್ಸ್‌ಪ್ರೆಸ್ ವೇ ನಿರ್ಮಾಣ ಮಾಡಲು ಸಾವಿರಾರು ಮರಗಳನ್ನು ಕಡಿಯಬೇಕಾಗುತ್ತದೆ. ಆದ್ದರಿಂದ ಅದಕ್ಕೆ ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತದೆ.
ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್‌ವೇ ಅನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ಅಭಿವೃದ್ಧಿ ಮಾಡಲು ಚಿಂತನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಈ ಎಕ್ಸ್‌ಪ್ರೆಸ್‌ವೇ ನಿರ್ಮಾಣದಿಂದ ಕರಾವಳಿ ಜಿಲ್ಲೆಯ ಜನರಿಗೆ ಹೆಚ್ಚಿನ ಅನುಕೂಲ ಆದಂತಾಗಲಿದೆ. ಈ ಭಾಗದಲ್ಲಿ ಪ್ರವಾಸೋದ್ಯಮ, ವ್ಯಾಪಾರ ಹಾಗೂ ವಾಣಿಜ್ಯ ಚಟುವಟಿಕೆಗಳು ಅಭಿವೃದ್ಧಿಯಾಗಲಿವೆ. ಆರೋಗ್ಯ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು ಹೊಂದಲು ಸಾಧ್ಯ ಆಗಲಿದೆ.
ಮತ್ತೊಂದೆಡೆ ಬಹುನಿರೀಕ್ಷಿತ ಬೆಂಗಳೂರು, ಪುಣೆ ಮತ್ತು ಮುಂಬೈ ನಡುವಿನ ಹೊಸ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಆದರೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ತುಂಬಾ ಉಪಯುಕ್ತವಾಗಲಿದೆ. ಈ ಹೊಸ ಅಲ್ಲದೆ, ಈ ಮೂರು ನಗರಗಳ ನಡುವಿನ ಪ್ರಯಾಣದ ಸಮಯ ಕಡಿಮೆಯಾಗಲಿದ್ದು, ಕೇವಲ 7 ಗಂಟೆ ಆಗುತ್ತದೆ. ಈ ಮೂಲಕ ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಸುವವರಿಗೆ ಇದು ತುಂಬಾ ಸಹಕಾರಿಯಾದಂತಾಗಲಿದೆ.
ಮಹಾರಾಷ್ಟ್ರದ ಎರಡು ಪ್ರಮುಖ ನಗರಗಳಾದ ಮುಂಬೈ, ಪುಣೆ ಹಾಗೂ ಕರ್ನಾಟಕದ ಬೆಂಗಳೂರು ನಡುವಿನ ಸಂಪರ್ಕ ಕಲ್ಪಿಸುವಲ್ಲಿ ಈ ಹೊಸ ಎಕ್ಸ್‌ಪ್ರೆಸ್‌ವೇ ಪ್ರಮುಖ ಪಾತ್ರ ವಹಿಸಲಿದೆ. ಪುಣೆ-ಬೆಂಗಳೂರು ಎಕ್ಸ್‌ಪ್ರೆಸ್‌ವೇ 3 ನಗರಗಳ ನಡುವಿನ ಪ್ರಯಾಣದ ದೂರವನ್ನು 95 ಕಿಲೋ ಮೀಟರ್‌ಗಳಷ್ಟು ಕಡಿಮೆ ಮಾಡುತ್ತದೆ. ಈ ನಗರಗಳ ನಡುವಿನ ಪ್ರಯಾಣದ ಸಮಯ 7 ಗಂಟೆ ಆಗಲಿದೆ.
ಪುಣೆ-ಬೆಂಗಳೂರು ಎಕ್ಸ್‌ಪ್ರೆಸ್‌ವೇ 699 ಕಿಲೋ ಮೀಟರ್‌ಗಳಷ್ಟು ವಿಸ್ತರಿಸಲಿದ್ದು, ಇದರ ನಿರ್ಮಾಣಕ್ಕೆ ಸುಮಾರು ₹50,000 ಕೋಟಿ ವೆಚ್ಚ ಆಗಲಿದೆ ಎಂದ ಎಂದು ಅಂದಾಜಿಸಲಾಗಿದೆ. ಡಿಪಿಆರ್ ಸಿದ್ಧಪಡಿಸಲಾಗುತ್ತಿದ್ದು, ಅಧಿಕಾರಿಗಳು ಶೀಘ್ರದಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಎಕ್ಸ್‌ಪ್ರೆಸ್‌ವೇ ನಿರ್ಮಿಸುವ ಅಂತಿಮ ಪ್ರಸ್ತಾವನೆಯನ್ನು ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ.












Click it and Unblock the Notifications