ಬೆಂಗಳೂರು-ಮಂಗಳೂರು ವಿಶೇಷ ರೈಲು ವೇಳಾಪಟ್ಟಿ ಬದಲು

ಬೆಂಗಳೂರು, ಸೆಪ್ಟೆಂಬರ್ 17 : ನೈಋತ್ಯ ರೈಲ್ವೆ ಬೆಂಗಳೂರು-ಮಂಗಳೂರು ವಿಶೇಷ ರೈಲಿನ ವೇಳಾಪಟ್ಟಿಯನ್ನು ಬದಲಾವಣೆ ಮಾಡಿದೆ. ರೈಲು ಸಂಚಾರ ಸಹಜ ಸ್ಥಿತಿಗೆ ಮರಳಿದ ಬಳಿಕ ನೂತನ ವೇಳಾಪಟ್ಟಿ ಜಾರಿಗೆ ಬರಲಿದೆ.

ಮೆಜೆಸ್ಟಿಕ್‌ನಲ್ಲಿರುವ ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ ರೈಲು ತಡವಾಗಿ ಹೊರಡಲಿದೆ. ಬೆಂಗಳೂರಿಗೆ ಆಗಮಿಸುವ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಬೇಗ ಹೊರಡುವಂತೆ ವೇಳಾಪಟ್ಟಿ ಬದಲಾವಣೆಯಾಗಿದೆ.

ರೈಲು ನಂಬರ್ 06515 ಕೆಎಸ್ಆರ್ ಬೆಂಗಳೂರು-ಮಂಗಳೂರು ಸೆಂಟ್ರಲ್ ವಿಶೇಷ ರೈಲು ಬೆಂಗಳೂರಿನಿಂದ ರಾತ್ರಿ 10.30ಕ್ಕೆ ಹೊರಡಲಿದೆ. ಮರುದಿನ ಬೆಳಗ್ಗೆ 8.25ಕ್ಕೆ ಮಂಗಳೂರು ತಲುಪಲಿದೆ.

Bengaluru-Mangaluru Special Train Schedule Changed

ರೈಲು ನಂಬರ್ 06516 ಮಂಗಳೂರು ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಮಂಗಳೂರಿನಿಂದ ಸಂಜೆ 7.15ಕ್ಕೆ ಹೊರಡಲಿದೆ. ಬೆಂಗಳೂರಿಗೆ ಮರುದಿನ ಬೆಳಗ್ಗೆ 4.15ಕ್ಕೆ ಆಗಮಿಸಲಿದೆ.

ಯಾವುದೇ ಬದಲಾವಣೆ ಇಲ್ಲ : ಬೆಂಗಳೂರು-ಮಂಗಳೂರು ಸೆಂಟ್ರಲ್ ನಡುವೆ ಮೈಸೂರು ಮಾರ್ಗವಾಗಿ ಸಂಚಾರ ನಡೆಸುವ ರೈಲು ನಂಬರ್ 06517 ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.

ಯಶವಂತಪುರ-ಕಾರವಾರ ವಿಶೇಷ ಎಕ್ಸ್‌ಪ್ರೆಸ್ ರೈಲು ನಿಗದಿತ ವೇಳಾಪಟ್ಟಿಯಂತೆ ಸಂಜೆ 6.45ಕ್ಕೆ ಹೊರಡಲಿದೆ. ಆದರೆ, ಈ ರೈಲು ಹಾಸನ ಮತ್ತು ಬಂಟ್ವಾಳ ತಲುಪುವ ಸಮಯದಲ್ಲಿ ಪರಿಷ್ಕರಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+