Bengaluru Mangaluru Vande Bharat Express: 2 ನಗರಗಳ ರೈಲು ಸಂಚಾರಕ್ಕೆ ದಿನಗಣನೆ, ಯಾವಾಗ ಪ್ರಾರಂಭವಾಗಲಿದೆ ಇಲ್ಲಿದೆ ಮಾಹಿತಿ!

Bengaluru Mangaluru Vande Bharat Express: ಬೆಂಗಳೂರು ಹಾಗೂ ಮಂಗಳೂರು ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಬೆಂಗಳೂರು - ಮಂಗಳೂರು ನಗರಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಸಂಬಂಧಿಸಿದಂತೆ ಭರ್ಜರಿ ಗುಡ್‌ನ್ಯೂಸ್ ಕೊಡಲಾಗಿದೆ. ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ (ICF) ತಯಾರಾದ, ಸ್ವಯಂಚಾಲಿತ ತುರ್ತು ಬ್ರೇಕಿಂಗ್ (AEB) ವ್ಯವಸ್ಥೆ ಹೊಂದಿರುವ 20 ಬೋಗಿಗಳ ವಂದೇ ಭಾರತ್ ರೈಲು ಸಿದ್ಧವಾಗಿದೆ. ಈ ರೈಲಿನ ಪ್ರಾಯೋಗಿಕ ಸಂಚಾರವನ್ನು ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್ ಮಾರ್ಗದಲ್ಲಿ ಆಗಸ್ಟ್‌ 5ರಂದು ಯಶಸ್ವಿಯಾಗಿ ನಡೆಸಲಾಗಿದೆ.

ಬೆಂಗಳೂರು ಹಾಗೂ ಮಂಗಳೂರು ನಗರಗಳ ನಡುವೆ ಸಂಚರಿಸುವ ಪ್ರಯಾಣಿಕರ ಬಹುದಿನಗಳ ಕನಸು ಕೊನೆಗೂ ಈಡೇರುತ್ತಿದೆ. ಕರಾವಳಿಯ ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಆಗಸ್ಟ್‌ 11ರಿಂದ ಬೆಂಗಳೂರು - ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ (Bengaluru-Mangaluru Vande Bharat Express) ಪ್ರಾಯೋಗಿಕ ಸಂಚಾರ ಪ್ರಾರಂಭಿಸಲು ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇದರ ಸಂಪೂರ್ಣ ವಿವರ ನೋಡೋಣ.

Bengaluru Mangaluru Vande Bharat Express

ಬೆಂಗಳೂರು ಹಾಗೂ ಮಂಗಳೂರಿನ ಜನ ಬಹಳ ದಿನಗಳಿಂದ ಕಾಯುತ್ತಿದ್ದ ಕನಸು ನನಸಾಗುವ ಸಮಯ ಬಂದಿದೆ. ಬೆಂಗಳೂರು - ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು(Bengaluru-Mangaluru Vande Bharat Express)ಇನ್ನು ಕೆಲವೇ ದಿನಗಳಲ್ಲಿ ಸಂಚಾರ ಪ್ರಾರಂಭಿಸಲಿದೆ. ಆಗಸ್ಟ್‌ 11ರಿಂದ ಮತ್ತಷ್ಟು ಪ್ರಾಯೋಗಿಕ ಸಂಚಾರ ಆರಂಭಿಸಲು ನೈಋತ್ಯ ರೈಲ್ವೆ ಸಿದ್ಧತೆ ಮಾಡಿಕೊಂಡಿದೆ.

ಇದಾದ ನಂತರ ಈ ರೈಲು ಪೂರ್ಣ ಪ್ರಮಾಣದಲ್ಲಿ ಕರ್ನಾಟಕದ ಎರಡು ಪ್ರಮುಖ ನಗರಗಳ ನಡುವೆ ಸಂಚಾರವನ್ನು ಪ್ರಾರಂಭಿಸಲಿದೆ. ಎಲ್ಲವೂ ಅಂದುಕೊಂಡತೆಯೇ ನಡೆದಿದ್ದರೆ, ಜೂನ್ ವೇಳೆಗೆ ಬೆಂಗಳೂರು-ಮಂಗಳೂರು ವಲಯದಲ್ಲಿ ಈ ರೈಲು ಸಂಚಾರ ಪ್ರಾರಂಭವಾಗಬೇಕಾಗಿತ್ತು. ಆದರೆ ಸ್ವಯಂಚಾಲಿತ ತುರ್ತು ಬ್ರೇಕಿಂಗ್ (ಎಇಬಿ) ವ್ಯವಸ್ಥೆಯೊಂದಿಗೆ ಅಳವಡಿಸಲಾದ ವಿಬಿ ರೇಕ್ ಕೊರತೆಯಿಂದಾಗಿ ಯೋಜನೆಯು ಉದ್ದೇಶಿತ ಅವಧಿಯಲ್ಲಿ ಕಾರ್ಯರೂಪಕ್ಕೆ ತರಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ.

ಆಗಸ್ಟ್‌ 11 ರಿಂದ ಪ್ರಾರಂಭವಾಗಲಿರುವ ಪ್ರಾಯೋಗಿಕ ಸಂಚಾರವು ಆಗಸ್ಟ್‌ 20 ರವರೆಗೆ ನಡೆಯಲಿದೆ. ಪ್ರಾಯೋಗಿಕ ಸಂಚಾರಗಳ ನಂತರ ಕರ್ನಾಟಕದ ಎರಡು ಪ್ರಮುಖ ನಗರಗಳ ನಡುವೆ ಶೀಘ್ರವೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ. ಈ ಮೂಲಕ ಬೆಂಗಳೂರು ಹಾಗೂ ಮಂಗಳೂರು ನಗರದ ನಡುವೆ ಸಂಚರಿಸುವ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ.

Bengaluru Mangaluru Vande Bharat Express: ಬೆಂಗಳೂರು - ಮಂಗಳೂರು: ಘಾಟ್ ಮಾರ್ಗವೇ ಸವಾಲು!

ಇನ್ನು ಬೆಂಗಳೂರು ಹಾಗೂ ಮಂಗಳೂರು ನಡುವೆ ರೈಲು ಸಂಚಾರಕ್ಕೆ ಘಾಟ್ ಮಾರ್ಗವೇ ಸವಾಲಾಗಿದೆ. ವಂದೇ ಭಾರತ್ ರೈಲು ಸಾಮಾನ್ಯವಾಗಿ ಅತ್ಯಾಧುನಿಕ ಎಲೆಕ್ಟ್-ನ್ಯೂಮ್ಯಾಟಿಕ್ ಡಿಸ್ಕ್ ಬ್ರೇಕ್ ಹಾಗೂ ನಿರ್ದಿಷ್ಟ ಬ್ರೇಕಿಂಗ್‌ ವ್ಯವಸ್ಥೆಯನ್ನು ಹೊಂದಿರಲಿದೆ. ಆದರೆ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ನಡುವಿನ ಘಾಟ್ ಮಾರ್ಗವು ಅತ್ಯಂತ ಕಡಿದಾದ ಇಳಿಜಾರು ಪ್ರದೇಶವಾಗಿದೆ. ಹೀಗಾಗಿ, ಈ ಮಾರ್ಗದಲ್ಲಿ ಸವಾಲು ಎದುರಾಗಿದೆ ಎಂದು ಹೇಳಲಾಗಿದೆ. ಬೆಂಗಳೂರು - ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ (Bengaluru-Mangaluru Vande Bharat Express) ಇನ್ನು ಕೆಲವೇ ದಿನಗಳಲ್ಲಿ ಸಂಪೂರ್ಣ ಪ್ರಯಾಣಕ್ಕೆ ಸಿದ್ಧವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+