Get Updates
Get notified of breaking news, exclusive insights, and must-see stories!

Namma Metro: ಐಪಿಎಲ್‌ ಪಂದ್ಯದ ದಿನ ದಟ್ಟಣೆ ಇಲ್ಲದೇ ಓಡಾಡಿ, ಮೆಟ್ರೋ ಸೇವಾವಧಿ ವಿಸ್ತರಣೆ

Namma Metro: ಬೆಂಗಳೂರಿನಲ್ಲಿ ನಡೆಯಲಿರುವ 2026 ಐಪಿಎಲ್ ಟಿ 20 ಪಂದ್ಯಾವಳಿಗಳ ಪ್ರಯುಕ್ತ ಬೆಂಗಳೂರು ನಮ್ಮ ಮೆಟ್ರೋ ಸೇವೆ ಮತ್ತೆ ವಿಸ್ತರಣೆ ಆಗಿದೆ. ಮೊದಲ ದಿನದ ಐಪಿಎಲ್ ಪಂದ್ಯಾವಳಿ ಮಾ.28ರಂದು ನಡೆದಿತ್ತು. ಆಗಲೂ ಮೆಟ್ರೋ ಸೇವೆ ತಡರಾತ್ರಿವರೆಗೆ ಲಭ್ಯವಾಗುವಂತೆ ವಿಸ್ತರಣೆ ಮಾಡಲಾಗಿತ್ತು. ಇದೀಗ 5ನೇ ರಂದು ಮತ್ತೆ ಐಪಿಎಲ್ ಪಂದ್ಯ ಜರುಗಲಿದ್ದು, ಈ ಸಂಬಂಧ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್‌ಸಿಎಲ್) ಪ್ರಯಾಣಿಕರಿಗೆ ಸುಲಭ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೆಟ್ರೋ ರೈಲು ಸೇವಾವಧಿ ವಿಸ್ತರಿಸಿದೆ.

ಸಮಯ ವಿಸ್ತರಣೆ, ಕೊನೆ ರೈಲು ಸಂಚಾರ ಯಾವಾಗ?

ಅಂದು ಮೆಟ್ರೋ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11:00 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2:00 ಗಂಟೆಯವರೆಗೆ ವಿಸ್ತರಿಸಲಾಗಿದೆ. ಎಲ್ಲ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲುಗಳು, 'ವೈಟ್‌ಫೀಲ್ಡ್ (ಕಾಡುಗೋಡಿ) ನಿಂದ ರಾತ್ರಿ 12.30ಕ್ಕೆ ಮತ್ತು ಚೆಲ್ಲಘಟ್ಟ ದಿಂದ ರಾತ್ರಿ 12.45 ಗಂಟೆಗೆ ಹೊರಡುತ್ತವೆ. ರೇಷ್ಮೆ ಸಂಸ್ಥೆ ಹಾಗೂ ಮಾದಾವರ ದಿಂದ ರಾತ್ರಿ 12.45 ಗಂಟೆಗೆ ಇನ್ನೂ ಬೊಮ್ಮಸಂದ್ರ ದಿಂದ ರಾತ್ರಿ 12.30 ಹಾಗೂ ಆರ್.ವಿ. ರಸ್ತೆ ಯಿಂದ ರಾತ್ರಿ 02.00ಕ್ಕೆ ಕೊನೆಯ ರೈಲು ಹೊರಡುತ್ತವೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮಜೆಸ್ಟಿಕ್) ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 01:30ಕ್ಕೆ ಕೊನೆಯ ರೈಲು ಹೊರಡತ್ತವೆ ಎಂದು ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Bengaluru Metro

ಎರಡು ಮಾರ್ಗಗಳ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಕ್ಯೂಆ‌ರ್ (QR) ಕೋಡ್ ಡಿಜಿಟಲ್ ಐಪಿಎಲ್ ಪಂದ್ಯದ ಟಿಕೆಟ್‌ ಗಳಲ್ಲಿ ಒಳಗೊಂಡಿರುತ್ತದೆ. ಕಬ್ಬನ್ ರಸ್ತೆ ಭಾಗದಿಂದ ಸ್ಟೇಡಿಯಂಗೆ ಪ್ರವೇಶ/ನಿರ್ಗಮನ ಗೇಟ್‌ ಗಳನ್ನು ಬಳಸುವ ಪ್ರೇಕ್ಷಕರು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ ಬಳಸಬೇಕಿದೆ. ಲಿಂಕ್ ರಸ್ತೆ ಭಾಗದಿಂದ ಪ್ರವೇಶ, ನಿರ್ಗಮನ ಗೇಟ್‌ಗಳನ್ನು ಬಳಸುವ ಪ್ರೇಕ್ಷಕರು ಸಮೀಪದಲ್ಲಿರುವ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣ ಮೂಲಕ ಬರುವಂತೆ ತಿಳಿಸಿದೆ.

ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು?
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು?

ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ

ಕ್ರಿಕೆಟ್ ನಡೆಯುವ ದಿನ ನಮ್ಮ ಮೆಟ್ರೋದಲ್ಲಿ ಸುಗಮ ಪ್ರಯಾಣ ಖಚಿತಪಡಿಸಲು, ಬಿಎಂಆರ್‌ಸಿಎಲ್ ಅನೇಕ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದೆ. ಪಂದ್ಯದ ದಿನಗಳಲ್ಲಿ ಮೆಟ್ರೋ ನಿಲ್ದಾಣಗಳ ಪಾರ್ಕಿಂಗ್ ಸೌಲಭ್ಯ ನೀಡಿದ್ದು, ಎರಡು ಚಕ್ರ ವಾಹನಗಳಿಗೆ 30 ರೂ., ಕಾರುಗಳಿಗೆ 60 ರೂ. ನಿಗದಿ ಮಾಡಲಾಗಿದೆ. ಈ ದರವು ಆ ದಿನದ ಮೆಟ್ರೋ ಸೇವೆ ಮುಕ್ತಾಯವಾಗುವವರೆಗೆ ಮಾತ್ರವೇ ಮಾನ್ಯವಾಗಿರುತ್ತದೆ.

ಪ್ರೇಕ್ಷಕರು ತಮ್ಮ ವಾಹನಗಳನ್ನು ನಿಗದಿತ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿ. ಮೆಟ್ರೋ ಮೂಲಕ ಸ್ಟೇಡಿಯಂಗೆ ನಡೆದು ಹೋಗಬಹುದಾದ ಅಂತರದಲ್ಲಿರುವ ಕಬ್ಬನ್ ಪಾರ್ಕ್ ಅಥವಾ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳಿಗೆ ಪ್ರಯಾಣಿಸಿದರೆ ದಟ್ಟಣೆ ಕಡಿಮೆ ಮಾಡಬಹುದು. ಕೇಂದ್ರ ವ್ಯವಹಾರ ಪ್ರದೇಶ (ಸಿಬಿಡಿ) ಹಾಗೂ ಸ್ಟೇಡಿಯಂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ಸಂಚಾರ ದಟ್ಟಣೆ ಕಡಿಮೆ ಮಾಡುಲು ಈ ಸಲಹೆ ನೀಡಲಾಗಿದೆ.

ಪೊಲೀಸ್, ಮೆಟ್ರೋ ಸಿಬ್ಬಂದಿ ನಿರ್ದೇಶನ ಪಾಲಿಸಿ

ಪ್ರಯಾಣಿಕರು ಸುಗಮ ಸಂಚಾರ, ಸುರಕ್ಷತೆಗಾಗಿ ಸಾರ್ವಜನಿಕರು ಪೊಲೀಸ್, ಸ್ಟೇಡಿಯಂ ನಿರ್ವಹಣೆ ಮತ್ತು ಬಿಎಂಆರ್‌ಸಿಎಲ್ ಸಿಬ್ಬಂದಿಯ ನಿರ್ದೇಶನ ಅನುಸರಿಸುವುದು ಕಡ್ಡಾಯವಾಗಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ಅಹಿತಕರ ಘಟನೆಗಳು ಜರುಗುವ ಸಾಧ್ಯತೆ ಕಂಡು ಬಂದಲ್ಲಿ ಮೆಟ್ರೋ ನಿಲ್ದಾಣಗಳ ಪ್ರವೇಶ ದ್ವಾರಗಳನ್ನು ನಿಯಂತ್ರಿಸುವ ಅಥವಾ ತಾತ್ಕಾಲಿಕವಾಗಿ ಮುಚ್ಚುವ ಹಕ್ಕನ್ನು ಬಿಎಂಆರ್‌ಸಿಎಲ್ ಹೊಂದಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+