Namma Metro: ಹೊಸ ವರ್ಷಾಚರಣೆ ದಿನ ಮೆಟ್ರೋ ಸಮಯ ವಿಸ್ತರಣೆ, ತಡರಾತ್ರಿ 2.45ಕ್ಕೆ ಕೊನೆ ರೈಲು ಸಂಚಾರ
ಬೆಂಗಳೂರು: 2025 ಕಳೆದು 2026ನ್ನು ಸ್ವಾಗತಿಸುವ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ರಾಜಧಾನಿ ಬೆಂಗಳೂರು ಸಿದ್ಧವಾಗಿದೆ. ಡಿಸೆಂಬರ್ 31ರ ಮಧ್ಯರಾತ್ರಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮನೆಗೆ ತೆರಳುವವರಿಗೆ ಅನುಕೂಲವಾಗುವಂತೆ ನಮ್ಮ ಮೆಟ್ರೋ (Namma Metro) ತನ್ನ ಸೇವಾ ಸಮಯವನ್ನು ವಿಸ್ತರಣೆ ಮಾಡಿದೆ. ರೈಲು ಹೊರಡುವ ಹಾಗೂ ನಿಲ್ದಾಣದಲ್ಲಿ ಕಾಯುವ ಸಮಯದಲ್ಲಿ ಬದಲಾವಣೆ ಮಾಡಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL)ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು ಮೆಟ್ರೋ ರೈಲು ನಿಗಮವು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ ಮಾರ್ಗ, ಹಸಿರು ಮಾರ್ಗ ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಿದೆ. ಕೊನೆಯ ಮೆಟ್ರೋ ರೈಲುಗಳು ಹೊರಡುವ ಸಮಯವನ್ನು 2025ರ ಡಿಸೆಂಬರ್ 31ರ ಮಧ್ಯರಾತ್ರಿಯ ನಂತರ, ಅಂದರೆ 1ನೇ ಜನವರಿ 2026ರಂದು ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಕೊನೆಯ ಮೆಟ್ರೋ ರೈಲುಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅದರ ವಿವರ ಮುಂದಿದೆ.

ತಡರಾತ್ರಿ 2ಗಂಟೆವರೆಗೂ ಮೆಟ್ರೋ ಸೇವೆ
* ನೇರಳೆ ಮಾರ್ಗ: ವೈಟ್‌ಫೀಲ್ಡ್-ಚಲ್ಲಘಟ್ಟದ ವರೆಗೆ ಬೆಳಗಿನ ಜಾವ 1:45 ಗಂಟೆಗೆ ಕೊನೆ ರೈಲು ಚಲಿಸುತ್ತದೆ. ಚಲ್ಲಘಟ್ಟ ವೈಟ್ ಫೀಲ್ಡ್ ವರೆಗೆ ಕೊನೆ ರೈಲು ಬೆಳಗಿನ ಜಾವ 2 ಗಂಟೆಗೆ ಹೊರಡುತ್ತದೆ.
* ಹಸಿರು ಮಾರ್ಗ: ಮಾದಾವರ ದಿಂದ ರೇಷ್ಮೆ ಸಂಸ್ಥೆಯ ವರೆಗೆ ಬೆಳಗಿನ ಜಾವ 2 ಗಂಟೆಗೆ ಕೊನೆ ರೈಲು ಹಾಗೂ ರೇಷ್ಮೆ ಸಂಸ್ಥೆ ಯಿಂದ ಮಾದಾವರದ ವರೆಗೆ ಬೆಳಗಿನ ಜಾವ 2 ಗಂಟೆಗೆ ರೈಲು ಸಂಚಾರ ಮಾಡಲಿದೆ.
* ಹಳದಿ ಮಾರ್ಗ: ಆ.ರ್‌ವಿ ರಸ್ತೆ ಯಿಂದ ಬೊಮ್ಮಸಂದ್ರದ ವರೆಗೆ ಬೆಳಗಿನ ಜಾವ 3:10 ಕೊನೆ ರೈಲು ಹಾಗೂ ಬೊಮ್ಮಸಂದ್ರ ದಿಂದ ಆರ್‌ವಿ ರಸ್ತೆಯವರೆಗೆ ಬೆಳಗಿನ ಜಾವ 1:30ಗಂಟೆಗೆ ಕೊನೆ ರೈಲು ಸಂಚಾರ ಮಾಡಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಡರಾತ್ರಿ 2:45ಕ್ಕೆ ಮೆಜೆಸ್ಟಿಕ್‌ನಿಂದ ಕೊನೆ ರೈಲು ಸಂಚಾರ
ನಾಡಪ್ರಭು ಕೆಂಪೇಗೌಡ ಮೆಜೆಸ್ಟಿಕ್ ನಿಲ್ದಾಣದಿಂದ ಬೆಳಗಿನ ಜಾವ 2:45 ಗಂಟೆಗೆ ಕೊನೆಯ ರೈಲು ಹೊರಡಲಿದೆ. ವೈಟ್ ಫೀಲ್ಡ್ ಮತ್ತು ಚಲ್ಲಘಟ್ಟ ಕಡೆಗೆ (ನೇರಳೆ ಮಾರ್ಗ) ಹಾಗೂ ಮಾದಾವರ ಮತ್ತು ರೇಷ್ಮೆ ಸಂಸ್ಥೆ ಕಡೆಗೆ (ಹಸಿರು ಮಾರ್ಗ) ಹೊರಡುವ ಪ್ರಯಾಣೀಕರು ಈ ಸಮಯ ನೋಡಿಕೊಂಡು ನಿಲ್ದಾಣ ಪ್ರವೇಶಿಸಬೇಕಿದೆ.

8 ಮತ್ತು 15 ನಿಮಿಷಗಳ ಅಂತರದಲ್ಲಿ ರೈಲು ಸಂಚಾರ
ಸಂಭ್ರಮಾಚರಣೆ ಬಳಿಕ ಪ್ರಯಾಣಿಕರಿಗೆ ಮೆಟ್ರೋ ಸೇವೆ ಲಭ್ಯವಾಗುವಂತೆ ಡಿಸೆಂಬರ್ 31ರ ರಾತ್ರಿ 11:30 ರಿಂದ ವಿಸ್ತರಿತ ಸೇವೆ ಮುಗಿಯುವವರೆಗೂ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ 8 ನಿಮಿಷಗಳ ಅಂತರದಲ್ಲಿ ಹಾಗೂ ಹಳದಿ ಮಾರ್ಗದಲ್ಲಿ 15 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ.
ಡಿ.31ರಂದು ಎಂ.ಜಿ ರಸ್ತೆ ನಿಲ್ದಾಣ ಬಂದ್
ಹೊಸ ವರ್ಷದ ಸಂಭ್ರಮಾಚರಣೆ ನಗರದ ಎಂಜಿ ರಸ್ತೆಯಲ್ಲಿ ಮುಗಿಲು ಮುಟ್ಟಿರುತ್ತದೆ. ಪ್ರತಿ ವರ್ಷದಂತೆ ಈ ವರ್ಷವು ಇಲ್ಲಿನ ಅತ್ಯಧಿಕ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ 31ನೇ ಡಿಸೆಂಬರ್ ರಾತ್ರಿ 10 ಗಂಟೆಯಿಂದ ರಿಂದ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗುತ್ತದೆ. ಆದರೆ, ರೈಲುಗಳು ಪಕ್ಕದ ನಿಲ್ದಾಣಗಳಾದ ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿವೆ. ಪ್ರಯಾಣಿಕರು ಅಲ್ಲಿಂದ ರೈಲು ಹತ್ತಬಹುದು ಮತ್ತು ಇಳಿಯಬಹುದು.
ಟೋಕನ್ ಟಿಕೆಟ್ ಮಾರಾಟ ಇಲ್ಲ
ಮೆಟ್ರೋ ನಿಲ್ದಾಣಗಳ ಟಿಕೆಟ್ ಕೌಂಟರ್‌ಗಳಲ್ಲಿ ಜನದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ರಾತ್ರಿ 11 ಗಂಟೆ ನಂತರ ಟೋಕನ್ ಮಾರಾಟ ಇರುವುದಿಲ್ಲ. ಈ ನಿಲ್ದಾಣಗಳಿಂದ ರಾತ್ರಿ 11 ಗಂಟೆ ಗಂಟೆಯ ಬಳಿಕ ಓಡಾಡುವ ಪ್ರಯಾಣಿಕರು ಕ್ಯೂಆರ್ ಟಿಕೆಟ್‌ಗಳ ಮೂಲಕ, ಮುಂಗಡವಾಗಿ ರಿಟರ್ನ್ ಟಿಕೆಟ್ ಖರೀದಿಸುವಂತೆ ಅಥವಾ ಸಾಕಷ್ಟು ನಗದುವಿರುವ ಸ್ಮಾರ್ಟ್ ಕಾರ್ಡ್‌ಗಳನ್ನು ಬಳಸುವಂತೆ ಮೆಟ್ರೋ ಅಧಿಕಾರಿಗಳು ವಿನಂಸಿಕೊಂಡಿದ್ದಾರೆ.
ಸಾರ್ವಜನಿಕರು ತಡರಾತ್ರಿವರೆಗೆ ಹೊಸ ವರ್ಷದ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಿದ್ದರೆ, ಅದಕ್ಕೆ ಅನುಗುಣವಾಗಿ ತಮ್ಮ ಪ್ರಯಾಣ ಯೋಜಿಸಬೇಕು. ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಮೆಟ್ರೋ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯೊಂದಿಗೆ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications