Namma Metro: ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳ? ಸಾರ್ವಜನಿಕರ ಸಲಹೆ ಕೇಳಿದ ಬಿಎಂಆರ್‌ಸಿಎಲ್

ಶೀಘ್ರದಲ್ಲೇ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಶಾಕ್ ಸಿಗುವ ಸಾಧ್ಯತೆ ಇದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಟಿಕೆಟ್ ದರ ಪರಿಷ್ಕರಣೆಗೆ ನಿರ್ಧರಿಸಿದ್ದು ಈ ಬಗ್ಗೆ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದೆ. ಸಾರ್ವಜನಿಕರ ಪ್ರತಿಕ್ರಿಯೆ ನೋಡಿಕೊಂಡು ದರಪರಿಷ್ಕರಣೆ ಮಾಡುವ ಸಾಧ್ಯತೆ ಇದೆ.

ಬಿಎಂಆರ್‌ಸಿಎಲ್ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಅಕ್ಟೋಬರ್ 21 ರೊಳಗೆ ಸಾರ್ವಜನಿಕರು ತಮ್ಮ ಸಲಹೆಗಳನ್ನು ನೀಡಬೇಕಿದೆ. [email protected] ಇಮೇಲ್ ಮೂಲಕ ಸಲಹೆಗಳನ್ನು ನೀಡಬಹುದು. ಅಂಚೆ ಮೂಲಕ ಸಲಹೆ ಕೊಡುವವರು ಬಿಎಂಆರ್‌ಸಿಎಲ್ ಮುಖ್ಯ ಕಚೇರಿಗೆ ಕಳಿಸಬಹುದು.

Bengaluru Metro Fares Revision Public Suggestions Invited

2022ರ ಮೆಟ್ರೋ ರೈಲ್ವೆ ಕಾರ್ಯಾಚರಣೆ ಮತ್ತು ನಿರ್ವಹಣೆ ಕಾಯಿದೆ ಸೆಕ್ಷನ್ 33 ಮತ್ತು 34ರ ಅಡಿಯಲ್ಲಿ ರಚನೆಯಾಗಿರುವ ಸ್ವತಂತ್ರ ಸಂಸ್ಥೆ ಶುಲ್ಕ ನಿಗದಿ ಸಮಿತಿ (ಎಫ್‌ಎಫ್‌ಸಿ), ಕಾರ್ಯಾಚರಣೆ ಅಂಕಿ ಅಂಶಗಳನ್ನು ಪರಿಶೀಲನೆ ಮಾಡಿದ ಬಳಿಕ ಪ್ರಯಾಣಿಕರು ಮತ್ತು ತಜ್ಞರಿಂದ ಸಲಹೆ ಪಡೆದು, ದರ ಪರಿಷ್ಕರಣೆ ಬಗ್ಗೆ ನಿರ್ಧಾರ ಮಾಡುತ್ತದೆ.

ದರ ಪರಿಷ್ಕರಣೆ ಅನಿವಾರ್ಯ?

ಸದ್ಯ ನಮ್ಮ ಮೆಟ್ರೋ ಟಿಕೆಟ್ ದರ ಕನಿಷ್ಠ 10 ರೂಪಾಯಿ ಇದ್ದರೆ ಗರಿಷ್ಠ 60 ರೂಪಾಯಿ ಆಗಿದೆ. ಸ್ಮಾರ್ಟ್ ಕಾರ್ಡ್ ಬಳಕೆ ಮಾಡುವವರಿಗೆ 5% ರಿಯಾಯಿತಿ ಸಿಗುತ್ತದೆ. ಮೆಟ್ರೋ ನೀತಿಯ ಪ್ರಕಾರ ಪ್ರತಿ ಎರಡು ವರ್ಷಗಳಿಗೆ ಒಮ್ಮೆ ಪ್ರಯಾಣ ದರ ಪರಿಷ್ಕರಣೆಯಾಗಬೇಕು. ಈಗ ಮೆಟ್ರೋ ಕಾರ್ಯಾಚರಣೆ ವೆಚ್ಚ ಅಧಿಕವಾಗಿದ್ದು, ದರ ಪರಿಷ್ಕರಣೆ ಅನಿವಾರ್ಯ ಎನ್ನಲಾಗಿದೆ.

ಸದ್ಯ ನಮ್ಮ ಮೆಟ್ರೋ ದೈನಂದಿನ ಪ್ರಯಾಣಿಕರ ಸಂಖ್ಯೆ 8-9 ಲಕ್ಷವಿದೆ. ನಾಗಸಂದ್ರದಿಂದ ಮಾದಾವರದವರೆಗೆ ನಡುವಿನ ಹಸಿರು ವಿಸ್ತೃತ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಆರಂಭವಾಗಲು ದಿನಗಣನೆ ಆರಂಭವಾಗಿದೆ. ಈಗಾಗಲೇ ಸುರಕ್ಷತಾ ತಪಾಸಣೆ ನಡೆದಿದ್ದು, ಅಕ್ಟೋಬರ್ ಅಂತ್ಯದ ವೇಳೆಗೆ ವಾಣಿಜ್ಯ ಕಾರ್ಯಾಚರಣೆ ಆರಂಭಿಸುವ ಸಾಧ್ಯತೆ ಇದ್ದು, ಬಳಿಕ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+