Bengaluru Metro Pink Line: ನಮ್ಮ ಮೆಟ್ರೋದ ಗುಲಾಬಿ ಮಾರ್ಗ ಪ್ರಾರಂಭದ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಹೊಸ ಅಪ್ಡೇಟ್ಸ್‌

Bengaluru Metro Pink Line: ಬೆಂಗಳೂರು ನಮ್ಮ ಮೆಟ್ರೋದ ಗುಲಾಬಿ ಮಾರ್ಗದ ವಿವಿಧ ಪ್ರದೇಶಗಳಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಪರಿಶೀಲನೆ ನಡೆಸಿದರು. ಬೆಂಗಳೂರು ನಮ್ಮ ಮೆಟ್ರೋದ ಗುಲಾಬಿ ಮಾರ್ಗದ ಜಯದೇವ ಆಸ್ಪತ್ರೆಯಿಂದ ಕಾಳೇನ ಅಗ್ರಹಾರ ಮೆಟ್ರೋ ನಿಲ್ದಾಣದವರೆಗಿನ ಎತ್ತರಿಸಿದ ಮಾರ್ಗದಲ್ಲಿ, ಸಾರ್ವಜನಿಕ ಸೇವೆಗೆ ತೆರೆಯುವ ಸಿದ್ಧತೆಗಳನ್ನು ಪರಿಶೀಲಿಸಿದರು.

ನಮ್ಮ ಮೆಟ್ರೋದ ಪಿಂಕ್ ಲೈನ್ ಪರಿಶೀಲನೆಯ ಸಂದರ್ಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಇತರ ಗಣ್ಯರು ಜಯದೇವ ಆಸ್ಪತ್ರೆಯಿಂದ ಕಾಳೇನ ಅಗ್ರಹಾರವರೆಗೆ ಸಂಚರಿಸಿ, ಕಾಳೇನ ಅಗ್ರಹಾರ ಮೆಟ್ರೋ ನಿಲ್ದಾಣದಲ್ಲಿನ ಪ್ರಯಾಣಿಕರ ಸೌಲಭ್ಯಗಳು ಹಾಗೂ ನಿಲ್ದಾಣದ ಸಿದ್ಧತೆಯನ್ನು ಪರಿಶೀಲಿಸಿದರು. ಬಿ.ಎಂ.ಆರ್.ಸಿ.ಎಲ್ ಅಧಿಕಾರಿಗಳು ಬಿಇಎಂಎಲ್ ಸಂಸ್ಥೆ ತಯಾರಿಸಿರುವ ಅತ್ಯಾಧುನಿಕ ಮೆಟ್ರೋ ರೈಲುಗಳ ಕುರಿತು ಮಾಹಿತಿ ನೀಡಿದರು. ಈ ರೈಲುಗಳಲ್ಲಿ ಸುಮಾರು ಶೇ 70% ಸ್ವದೇಶೀಯವಾಗಿದ್ದು, ಸ್ವಯಂಚಾಲಿತ ರೈಲು ಕಾರ್ಯಾಚರಣೆ (ATO) ಹಾಗೂ ಅತ್ಯಾಧುನಿಕ ಚಾಲಕರಹಿತ ರೈಲು ಕಾರ್ಯಾಚರಣೆ (UTO) ವ್ಯವಸ್ಥೆಗಳನ್ನು ಬೆಂಬಲಿಸುವ ಸಾಮರ್ಥ್ಯ ಹೊಂದಿವೆ.

Bengaluru Metro Pink Line Minister Krishna Byre Gowda Shares Key New Updates on Pink Line Launch

ಈ ಮಾರ್ಗವನ್ನು ಸಾರ್ವಜನಿಕ ಸೇವೆಗೆ ತರಲು ಅಗತ್ಯವಿರುವ ಸಾಕಷ್ಟು ಸಂಖ್ಯೆಯ ರೈಲುಗಳು ಪ್ರಸ್ತುತ ಲಭ್ಯವಿವೆ. ರೈಲುಗಳು ನಿಗದಿತ ಪರೀಕ್ಷೆ ಮತ್ತು ಪ್ರಯೋಗಗಳ ಹಂತದಲ್ಲಿದ್ದು, ಪ್ರಯಾಣಿಕರ ಸೇವೆಗೆ ನಿಯೋಜಿಸುವ ಮೊದಲು ಕಡ್ಡಾಯವಾಗಿ 750 ಕಿ.ಮೀ. ಸಂಚರಿಸುವ ಪರೀಕ್ಷೆಯನ್ನು ಪೂರ್ಣಗೊಳಿಸಬೇಕಾಗಿದೆ. ರೈಲು ಚಾಲಕರನ್ನು ಗುರುತಿಸಲಾಗಿದ್ದು, ಅವರಿಗೆ ಅಗತ್ಯವಿರುವ ಕಡ್ಡಾಯ ತರಬೇತಿಯನ್ನು ಈ ವಾರದೊಳಗೆ ಪೂರ್ಣಗೊಳಿಸುವ ನಿರೀಕ್ಷೆಯಿದೆ.

ಕಾಳೇನ ಅಗ್ರಹಾರ ಮೆಟ್ರೋ ನಿಲ್ದಾಣದಲ್ಲಿ ಅತ್ಯಾಧುನಿಕ ಕಮ್ಯುನಿಕೇಷನ್ ಬೇಸ್ಡ್ ಟ್ರೈನ್ ಕಂಟ್ರೋಲ್ (CBTC) ಸಿಗ್ನಲಿಂಗ್ ವ್ಯವಸ್ಥೆ, ಸ್ಟೇಷನ್ ಕಂಟ್ರೋಲ್ ರೂಮ್ ಹಾಗೂ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (NCMC) ಜೊತೆಗೆ ಸಂಯೋಜಿತವಾಗಿರುವ ಆಟೋಮ್ಯಾಟಿಕ್ ಫೇರ್ ಕಲೆಕ್ಷನ್ (AFC) ವ್ಯವಸ್ಥೆಯ ಸಿದ್ಧತೆ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಹೊಸ ರೋಲಿಂಗ್ ಸ್ಟಾಕ್‌ಗೆ ರೈಲ್ವೆ ಮಂಡಳಿಯ ಅನುಮೋದನೆ ಶೀಘ್ರದಲ್ಲೇ ದೊರೆಯುವ ನಿರೀಕ್ಷೆಯಿದೆ. ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (CMRS) ಸುರಕ್ಷತಾ ಪರಿಶೀಲನೆ ನಡೆಸಿ, ಅನುಮೋದನೆಯ ಮೇರೆಗೆ ಸಾರ್ವಜನಿಕ ಪ್ರಯಾಣಿಕರ ಸಂಚಾರಕ್ಕೆ ತೆರೆಯಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

ಬಿ.ಎಂ.ಆರ್.ಸಿ.ಎಲ್ ಅಗತ್ಯವಿರುವ ಎಲ್ಲಾ ಕಾಮಗಾರಿಗಳು ಪೂರ್ಣಗೊಳಿಸಿದೆ. ಕಡ್ಡಾಯ ಪರಿಶೀಲನೆಗಳು ಹಾಗೂ ಅಗತ್ಯ ಅನುಮತಿಗಳು/ಅನುಮೋದನೆಗಳಿಗೆ ಒಳಪಟ್ಟು ಈ ಮಾರ್ಗವನ್ನು ಸಾರ್ವಜನಿಕ ಸೇವೆಗೆ ತೆರೆಯಲು ನಿಗಮವು ಸಂಪೂರ್ಣ ಸಿದ್ಧವಾಗಿದೆ ಎಂದರು.

Bengaluru Metro Pink Line: ನಮ್ಮ ಮೆಟ್ರೋದ ಪಿಂಕ್ ಲೈನ್ ಇನ್ನೊಂದು ವಾರದಲ್ಲಿ ಸೇವೆಗೆ ಸಿದ್ಧ

ಇನ್ನು ಬೆಂಗಳೂರಿನ ನಮ್ಮ ಮೆಟ್ರೋದ ಪಿಂಕ್ ಲೈನ್ ಮಾರ್ಗವನ್ನು ಸಾರ್ವಜನಿಕ ಸೇವೆಗೆ ತರಲು ಅಗತ್ಯವಿರುವ ಸಾಕಷ್ಟು ಸಂಖ್ಯೆಯ ರೈಲುಗಳು ಪ್ರಸ್ತುತ ಲಭ್ಯವಿವೆ. ರೈಲುಗಳು ನಿಗದಿತ ಪರೀಕ್ಷೆ ಮತ್ತು ಪ್ರಯೋಗಗಳ ಹಂತದಲ್ಲಿದ್ದು, ಪ್ರಯಾಣಿಕರ ಸೇವೆಗೆ ನಿಯೋಜಿಸುವ ಮೊದಲು ಕಡ್ಡಾಯವಾಗಿ 750 ಕಿ.ಮೀ. ಸಂಚರಿಸುವ ಪರೀಕ್ಷೆಯನ್ನು ಪೂರ್ಣಗೊಳಿಸಬೇಕಾಗಿದೆ. ರೈಲು ಚಾಲಕರನ್ನು ಗುರುತಿಸಲಾಗಿದ್ದು, ಅವರಿಗೆ ಅಗತ್ಯವಿರುವ ಕಡ್ಡಾಯ ತರಬೇತಿಯನ್ನು ಈ ವಾರದೊಳಗೆ ಪೂರ್ಣಗೊಳಿಸುವ ನಿರೀಕ್ಷೆಯಿದೆ. ಕಾಳೇನ ಅಗ್ರಹಾರ ಮೆಟ್ರೋ ನಿಲ್ದಾಣದಲ್ಲಿ ಅತ್ಯಾಧುನಿಕ ಕಮ್ಯುನಿಕೇಷನ್ ಬೇಸ್ಡ್ ಟ್ರೈನ್ ಕಂಟ್ರೋಲ್ (CBTC) ಸಿಗ್ನಲಿಂಗ್ ವ್ಯವಸ್ಥೆ, ಸ್ಟೇಷನ್ ಕಂಟ್ರೋಲ್ ರೂಮ್ ಹಾಗೂ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (NCMC) ಜೊತೆಗೆ ಸಂಯೋಜಿತವಾಗಿರುವ ಆಟೋಮ್ಯಾಟಿಕ್ ಫೇರ್ ಕಲೆಕ್ಷನ್ (AFC) ವ್ಯವಸ್ಥೆಯ ಸಿದ್ಧತೆ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೊಸ ರೋಲಿಂಗ್ ಸ್ಟಾಕ್‌ಗೆ ರೈಲ್ವೆ ಮಂಡಳಿಯ ಅನುಮೋದನೆ ಶೀಘ್ರದಲ್ಲೇ ದೊರೆಯುವ ನಿರೀಕ್ಷೆಯಿದೆ. ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (CMRS) ಸುರಕ್ಷತಾ ಪರಿಶೀಲನೆ ನಡೆಸಿ, ಅನುಮೋದನೆಯ ಮೇರೆಗೆ ಸಾರ್ವಜನಿಕ ಪ್ರಯಾಣಿಕರ ಸಂಚಾರಕ್ಕೆ ತೆರೆಯಲಾಗುವುದು. ಬಿ.ಎಂ.ಆರ್.ಸಿ.ಎಲ್ ಅಗತ್ಯವಿರುವ ಎಲ್ಲಾ ಕಾಮಗಾರಿಗಳು ಪೂರ್ಣಗೊಳಿಸಿದೆ. ಕಡ್ಡಾಯ ಪರಿಶೀಲನೆಗಳು ಹಾಗೂ ಅಗತ್ಯ ಅನುಮತಿಗಳು/ಅನುಮೋದನೆಗಳಿಗೆ ಒಳಪಟ್ಟು ಈ ಮಾರ್ಗವನ್ನು ಸಾರ್ವಜನಿಕ ಸೇವೆಗೆ ತೆರೆಯಲು ನಿಗಮವು ಸಂಪೂರ್ಣ ಸಿದ್ಧವಾಗಿದೆ ಬೆ ಮೆ ರೈ ನಿ ನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕೃಷ್ಣಪ್ಪ, ಬೆಮೆರೈನಿನಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಪಿ.ಸಿ. ಜಾಫರ್ ಸೇರಿದಂತೆ ಹಲವರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+