ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು?

ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಪ್ರಮುಖ ಸುದ್ದಿಯೊಂದು ಹೊರ ಬಿದ್ದಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇರಳೆ ಮಾರ್ಗದಲ್ಲಿ ತುರ್ತು ಕೆಲಸ ಕೈಗೊಳ್ಳುತ್ತಿರುವ ಪರಿಣಾಮ ಏಪ್ರಿಲ್ 5ರಂದು ಭಾನುವಾರ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ.

ಹೌದು, ನೇರಳೆ ಮಾರ್ಗದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮಜೆಸ್ಟಿಕ್) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಅಂದು (ಏ.5) ಬೆಳಗ್ಗೆ 2 ಗಂಟೆಗಳ ಕಾಲ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತಗೊಳ್ಳಲಿವೆ. ಅಡಚರಣೆಗೆ ಸಹಕರಿಸುವಂತೆ ನಮ್ಮ ಮೆಟ್ರೋ ಅಧಿಕಾರಿಗಳು ಕೋರಿದ್ದಾರೆ.

Bengaluru Metro

ತಾತ್ಕಾಲಿಕ ಅಡಚಣೆಗೆ ಕಾರಣವೇನು?

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಿದೆ. ಈ ಕಾಮಗಾರಿಯನ್ನು ನೆರವೇರಿಸಲು ನೇರಳೆ ಮಾರ್ಗದಲ್ಲಿ ಅಂದು ಬೆಳಗ್ಗೆ 7ರಿಂದ ರಿಂದ 9 ಗಂಟೆಯವರೆಗೆ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಬೇರೆ ಬೇರೆ ಮಾರ್ಗಗಳಲ್ಲಿ ಬದಲಾವಣೆ ಇದೆಯೇ?

ಇತರೆ ಎಲ್ಲಾ ವಿಭಾಗಗಳಲ್ಲಿ ಅಂದರೆ, ಚಲ್ಲಘಟ್ಟ ದಿಂದ ಮೈಸೂರು ರಸ್ತೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ನಿಂದ ವೈಟ್‌ಫಿಲ್ಡ್ (ಕಾಡುಗೋಡಿ), ಮಾದಾವರ ದಿಂದ ರೇಷ್ಮೆ ಸಂಸ್ಥೆ ಮತ್ತು ಆ‌ರ್.ವಿ.ರಸ್ತೆ ಯಿಂದ ಬೊಮ್ಮಸಂದ್ರ ನಡುವಿನ ಮೆಟ್ರೋ ರೈಲು ಸೇವೆಗಳು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಗ್ಗೆ 7ಗಂಟೆಗೆ ಪ್ರತಿ ಭಾನುವಾರದ ವೇಳಾಪಟ್ಟಿಯಂತೆ ನಿಗದಿತ ಸಮಯಕ್ಕೆ ಸಂಚಾರ ಮಾಡಲಿವೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.

ಭಾನುವಾರ ಬೆಳಗ್ಗೆ 9 ಗಂಟೆಯ ನಂತರ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆ ಎಂದಿನಂತೆ ಲಭ್ಯವಿರುತ್ತದೆ. ಎರಡು ಗಂಟೆಗಳ ಕಾಲ ತಾತ್ಕಾಲಿಕ ಅಡಚಣೆ ಎದುರಾಗಲಿದೆ ಎಂದು ಬಿಎಂಆರ್‍‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+