ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು?
ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಪ್ರಮುಖ ಸುದ್ದಿಯೊಂದು ಹೊರ ಬಿದ್ದಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇರಳೆ ಮಾರ್ಗದಲ್ಲಿ ತುರ್ತು ಕೆಲಸ ಕೈಗೊಳ್ಳುತ್ತಿರುವ ಪರಿಣಾಮ ಏಪ್ರಿಲ್ 5ರಂದು ಭಾನುವಾರ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ.
ಹೌದು, ನೇರಳೆ ಮಾರ್ಗದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮಜೆಸ್ಟಿಕ್) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಅಂದು (ಏ.5) ಬೆಳಗ್ಗೆ 2 ಗಂಟೆಗಳ ಕಾಲ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತಗೊಳ್ಳಲಿವೆ. ಅಡಚರಣೆಗೆ ಸಹಕರಿಸುವಂತೆ ನಮ್ಮ ಮೆಟ್ರೋ ಅಧಿಕಾರಿಗಳು ಕೋರಿದ್ದಾರೆ.

ತಾತ್ಕಾಲಿಕ ಅಡಚಣೆಗೆ ಕಾರಣವೇನು?
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಿದೆ. ಈ ಕಾಮಗಾರಿಯನ್ನು ನೆರವೇರಿಸಲು ನೇರಳೆ ಮಾರ್ಗದಲ್ಲಿ ಅಂದು ಬೆಳಗ್ಗೆ 7ರಿಂದ ರಿಂದ 9 ಗಂಟೆಯವರೆಗೆ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಬೇರೆ ಬೇರೆ ಮಾರ್ಗಗಳಲ್ಲಿ ಬದಲಾವಣೆ ಇದೆಯೇ?
ಇತರೆ ಎಲ್ಲಾ ವಿಭಾಗಗಳಲ್ಲಿ ಅಂದರೆ, ಚಲ್ಲಘಟ್ಟ ದಿಂದ ಮೈಸೂರು ರಸ್ತೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ನಿಂದ ವೈಟ್ಫಿಲ್ಡ್ (ಕಾಡುಗೋಡಿ), ಮಾದಾವರ ದಿಂದ ರೇಷ್ಮೆ ಸಂಸ್ಥೆ ಮತ್ತು ಆರ್.ವಿ.ರಸ್ತೆ ಯಿಂದ ಬೊಮ್ಮಸಂದ್ರ ನಡುವಿನ ಮೆಟ್ರೋ ರೈಲು ಸೇವೆಗಳು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಗ್ಗೆ 7ಗಂಟೆಗೆ ಪ್ರತಿ ಭಾನುವಾರದ ವೇಳಾಪಟ್ಟಿಯಂತೆ ನಿಗದಿತ ಸಮಯಕ್ಕೆ ಸಂಚಾರ ಮಾಡಲಿವೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.
ಭಾನುವಾರ ಬೆಳಗ್ಗೆ 9 ಗಂಟೆಯ ನಂತರ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆ ಎಂದಿನಂತೆ ಲಭ್ಯವಿರುತ್ತದೆ. ಎರಡು ಗಂಟೆಗಳ ಕಾಲ ತಾತ್ಕಾಲಿಕ ಅಡಚಣೆ ಎದುರಾಗಲಿದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ













Click it and Unblock the Notifications