ಅಕ್ಟೋಬರ್ 9ರಂದು ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು, ಅಕ್ಟೋಬರ್ 08; ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತವಾಗಲಿದೆ. ಎಂ. ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ರೈಲು ಸಂಚಾರ ಇರುವುದಿಲ್ಲ.

ಬೆಂಗಳೂರು ಮೆಟ್ರೋ ರೈಲು ನಿಗಮ ಶುಕ್ರವಾರ ಈ ಕುರಿತು ಪ್ರಕಟಣೆ ಹೊರಡಿಸಿದೆ. ಅಕ್ಟೋಬರ್ 9ರ ಸಂಜೆ 4 ಗಂಟೆಯಿಂದ ಅಕ್ಟೋಬರ್ 10ರ ಬೆಳಗ್ಗೆ 6 ಗಂಟೆ ತನಕ ಎಂ. ಜಿ. ರಸ್ತೆ-ಬೈಯಪ್ಪನಹಳ್ಳಿ ನಡುವೆ ರೈಲು ಸಂಚಾರ ರದ್ದುಗೊಳ್ಳಲಿದೆ ಎಂದು ಮಾಹಿತಿ ನೀಡಿದೆ.

ಅಕ್ಟೋಬರ್ 9ರಂದು ನೇರಳೆ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ಮೆಟ್ರೋ ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಎಂ. ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ರೈಲು ಸಂಚಾರ ನಡೆಸುವುದಿಲ್ಲ.

Bengaluru: Metro services on Purple Line to be disrupted from 4pm of Oct 9 till 6 am of Oct 10

ಎಂ. ಜಿ. ರಸ್ತೆ-ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ವರೆಗೆ ವಾಣಿಜ್ಯ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಅಕ್ಟೋಬರ್ 10ರ ಭಾನುವಾರ ಬೆಳಗ್ಗೆ 6 ಗಂಟೆ ಬಳಿಕ ಮೆಟ್ರೋ ಸಂಚಾರ ಎಂದಿನಂತೆ ಇರಲಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ಅವಧಿಯಲ್ಲಿ ನೇರಳೆ ಮಾರ್ಗದಲ್ಲಿ ಎಂ. ಜಿ. ರಸ್ತೆ-ಕೆಂಗೇರಿ ತನಕ ಎಂದಿನಂತೆ ಮೆಟ್ರೋ ರೈಲುಗಳು ಸಂಚಾರ ನಡೆಸಲಿವೆ. ಹಸಿರು ಮಾರ್ಗದಲ್ಲಿನ ರೈಲು ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್ ಹೇಳಿದೆ.

ಬೈಯಪ್ಪನಹಳ್ಳಿ-ಮೈಸೂರು ರಸ್ತೆ (ನೇರಳೆ) ಮಾರ್ಗವನ್ನು ಕೆಂಗೇರಿ ತನಕ ವಿಸ್ತರಣೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+