Bengaluru Metro: ಹಸಿರು ಮಾರ್ಗದಲ್ಲಿ ಮತ್ತೆ ಮೆಟ್ರೋ ಸಂಚಾರ ಆರಂಭ
Bengaluru Metro: ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ದೋಷ ಹಿನ್ನೆಲೆ ಇಂದು ಸಂಜೆ 5:33ರಿಂದ ಹಸಿರು ಮಾರ್ಗದಲ್ಲಿ ರೈಲುಗಳ ಸಂಚಾರ ವ್ಯತ್ಯಯ ಆಗಿದ್ದು, ಇದೀಗ ಮತ್ತೆ ಸಂಜೆ 07:05 ಗಂಟೆಯಿಂದ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಿದೆ ಎನ್ನುವ ಅಪ್ಡೇಟ್ ಮಾಹಿತಿ ಲಭ್ಯವಾಗಿದೆ.
ರೈಲು ಸೇವೆಗಳು ಆರ್‌ವಿ ರಸ್ತೆಯಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ಕಡೆಗೆ 19.05 ಗಂಟೆಗಳಿಂದ ಪ್ರಾರಂಭವಾಯಿತು. ಸಂಪೂರ್ಣ ಗ್ರೀನ್ ಲೈನ್‌ನಲ್ಲಿ ವೇಳಾಪಟ್ಟಿಯ ಪ್ರಕಾರ ಮತ್ತೆ ಪುನಃಸ್ಥಾಪಿಸಲಾಗಿದೆ. ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ಬಿಎಂಆರ್‌ಸಿಎಲ್ ಅಧಿಕೃತ ಟ್ವೀಟ್ ಮೂಲಕ ತಿಳಿಸಿದೆ.

ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಹಿನ್ನೆಲೆ ಇಂದು ಸಂಜೆ 5:33ರಿಂದ ಹಸಿರು ಮಾರ್ಗದಲ್ಲಿ ರೈಲುಗಳ ಸಂಚಾರ ವ್ಯತ್ಯಯ ಆಗಿದೆ. ನಾಗಸಂದ್ರ-ಆರ್‌ವಿ ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಮೆಟ್ರೋ ರೈಲುಗಳು ಓಡಲಿವೆ ಎಂದು ತನ್ನ ಅಧಿಕೃತ ಟ್ವೀಟ್ ಮೂಲಕ ಬಿಎಂಆರ್‌ಸಿಎಲ್ ತಿಳಿಸಿತ್ತು. ಇನ್ನು ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ತಿಳಿಸಿದೆ.
ಇನ್ನು ಸದ್ಯ ಹಸಿರುವ ಮಾರ್ಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆಯಾಗಿದ್ದು, ಉಳಿದಂತೆ ನೇರಳೆ ಮಾರ್ಗದ ರೈಲುಗಳ ಸಂಚಾರ ಎಂದಿನಂತೆ ಚಲಘಟ್ಟ-ವೈಟ್‌ಫೀಲ್ಡ್ ನಡುವೆ ಸಂಚರಿಸಲಿವೆ.
ಬನಶಂಕರಿ, ಜೆಪಿ ನಗರ, ಯಲಚೇನಹಳ್ಳಿ, ಕೋಣನಕುಂಟೆ ಕ್ರಾಸ್, ದೊಡ್ಡಕಲ್ಲಸಂದ್ರ, ವಜರಹಳ್ಳಿ, ತಲಘಟಪುರ, ರೇಷ್ಮೇ ಮಂಡಳಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ. ಇನ್ನು ನೇರಳೆ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ರೈಲು ಸಂಚಾರ ಮಾಡಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications