• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರಿನಲ್ಲಿ ಎರಡು ದಿನ ನಮ್ಮ ಮೆಟ್ರೋ ಸಂಚಾರ ಬಂದ್

|

ಬೆಂಗಳೂರು, ಏಪ್ರಿಲ್ 23: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿರುವ ವಾರಾಂತ್ಯದ ನಿಷೇಧಾಜ್ಞೆ ಹಿನ್ನೆಲೆ ಬೆಂಗಳೂರಿನಲ್ಲಿ ಎರಡು ದಿನ ನಮ್ಮ ಮೆಟ್ರೋ ರೈಲು ಸಂಚಾರ ಬಂದ್ ಆಗಲಿದೆ.

ಕೊವಿಡ್-19 ಸೋಂಕು ಹರಡುವಿಕೆ ಆತಂಕ ಹೆಚ್ಚಾಗಿರುವ ಹಿನ್ನೆಲೆ ಶನಿವಾರ ಮತ್ತು ಭಾನುವಾರ ಎರಡು ದಿನ ಮೆಟ್ರೋ ಸಂಚಾರವನ್ನು ಬಂದ್ ಮಾಡಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಪ್ರಕಟಣೆ ಹೊರಡಿಸಿದೆ.

ಅಘೋಷಿತ ಲಾಕ್‌ಡೌನ್‌ ಯಾಕೆ ಅಂದರೆ, ಸಚಿವ ಸುಧಾಕರ್ ಉತ್ತರ ಕೊಟ್ಟಿದ್ದು ಹೀಗೆ!ಅಘೋಷಿತ ಲಾಕ್‌ಡೌನ್‌ ಯಾಕೆ ಅಂದರೆ, ಸಚಿವ ಸುಧಾಕರ್ ಉತ್ತರ ಕೊಟ್ಟಿದ್ದು ಹೀಗೆ!

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಸೋಮವಾರದಿಂದ ಶುಕ್ರವಾರದವರೆಗೂ ಬೆಳಗ್ಗೆ 7 ರಿಂದ ರೈಲು ಸಂಚಾರ ಆರಂಭವಾಗಲಿದೆ. ನಾಗಸಂದ್ರ, ಸಿಲ್ಕ್ ಬೋರ್ಡ್, ಮೈಸೂರು ರಸ್ತೆ ಹಾಗೂ ಬೈಯಪ್ಪನಹಳ್ಳಿ ಮಾರ್ಗದಲ್ಲಿ ರೈಲು ಸಂಚರಿಸಲಿವೆ. ರಾತ್ರಿ 7.30ಕ್ಕೆ ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಕೊನೆಯ ಮೆಟ್ರೋ ರೈಲು ಸಂಚಾರ ನಡೆಸಲಿದೆ.

ಶನಿವಾರ ಮತ್ತು ಭಾನುವಾರ ಮೆಟ್ರೋ ಸಂಚಾರ ಬಂದ್:

ಬೆಂಗಳೂರಿನಲ್ಲಿ ವಾರಾಂತ್ಯದ ನಿಷೇಧಾಜ್ಞೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವುದಕ್ಕೆ ಸರ್ಕಾರ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ಕೊರೊನಾವೈರಸ್ ನಿಯಂತ್ರಿಸುವ ಉದ್ದೇಶದಿಂದ ಕಠಿಣ ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಅದರಂತೆ ಸಿಲಿಕಾನ್ ಸಿಟಿ ಜನರ ಸಂಚಾರ ನಾಡಿ ಆಗಿರುವ ಮೆಟ್ರೋ ರೈಲಿನ ಸಂಚಾರವನ್ನು ವಾರಾಂತ್ಯದಲ್ಲಿ ಬಂದ್ ಮಾಡುವುದಕ್ಕೆ ನಿರ್ಧರಿಸಲಾಗಿದೆ.

ರಾಜ್ಯ ರಾಜಧಾನಿಯಲ್ಲಿ ದಾಖಲೆ ಬರೆದ ಕೊರೊನಾ:

ಕರ್ನಾಟಕದಲ್ಲಿ ಒಂದೇ ದಿನ 25 ಸಾವಿರಕ್ಕೂ ಅಧಿಕ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿದ್ದರೆ, ಈ ಪೈಕಿ ಬೆಂಗಳೂರು ನಗರದ್ದೇ ಸಿಂಹಪಾಲು ಆಗಿತ್ತು. ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲೇ 15244 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 598919ಕ್ಕೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿಯಲ್ಲಿ 137813 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ. ಒಂದು ದಿನದಲ್ಲಿ ಮಹಾಮಾರಿಗೆ 68 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 5450ಕ್ಕೆ ಏರಿಕೆಯಾಗಿದೆ.

English summary
Bengaluru Metro will not run trains during weekends due to curfew in City till May 4.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X