Namma Metro: ಬೆಂಗಳೂರಿಗೆ ಯಾವಾಗ ಬರಲಿದೆ ಚಾಲಕ ರಹಿತ ಮೆಟ್ರೋ ರೈಲು?
ಬೆಂಗಳೂರು, ಫೆಬ್ರವರಿ 12: ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲು ಸಂಚಾರಕ್ಕೆ ಭರದಿಂದ ಸಿದ್ಧತೆ ಸಾಗುತ್ತಿದ್ದು, ಶೀಘ್ರವೇ ಚಾಲಕ ರಹಿತ ಮೆಟ್ರೋ ರೈಲು ಸಂಚರಿಸಲಿದೆ. ನಮ್ಮ ಮೆಟ್ರೋ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ಮೊದಲ ಬಾರಿಗೆ ಚಾಲಕ ರಹಿತ ಮೆಟ್ರೋ ರೈಲುನ್ನು ಪರಿಚಯಿಸಲು ಬಿಎಂಆರ್‌ಸಿಎಲ್ ಸನ್ನದ್ಧವಾಗಿದೆ.
ಮೊದಲ ಚಾಲಕ ರಹಿತ ರೈಲು ಚೀನಾದಿಂದ ಸಮುದ್ರ ಮಾರ್ಗವಾಗಿ ಚೆನ್ನೈ ಬಂದರಿಗೆ ಆಗಮಿಸಿದೆ. ಫೆಬ್ರವರಿ 18ರ ಹೊತ್ತಿಗೆ ಈ ಮೆಟ್ರೋ ರೈಲು ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಬರಲಿದೆ. ಬಳಿಕ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಈ ಚಾಲಕ ರಹಿತ ನಮ್ಮ ಮೆಟ್ರೋ ರೈಲು ಸಂಚಾರ ನಡೆಸಲಿದೆ.

ರಾಷ್ಟ್ರೀಯ ವಿದ್ಯಾಲಯ ರೋಡ್ (ಆರ್.ವಿ ರಸ್ತೆ) - ಬೊಮ್ಮಸಂದ್ರ ನಮ್ಮ ಮೆಟ್ರೋ ಹಳದಿ ಮಾರ್ಗ ಸದ್ಯವೇ ಕಾರ್ಯಾರಂಭ ಮಾಡಲಿದ್ದು ಅದರಲ್ಲಿ ಈ ಚಾಲಕ ರಹಿತ ರೈಲು ಓಡಾಡಲಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಎಲ್ಲಾ ರೀತಿಯ ತಯಾರಿ ನಡೆಸುತ್ತಿದ್ದಾರೆ.
ಚಾಲಕ ರಹಿತ ಮೆಟ್ರೋ ರೈಲು ಜನವರಿ 24ರಂದು ಶಾಂಘೈ ಬಂದರಿನಿಂದ ಹೊರಟಿದ್ದು, ಫೆಬ್ರವರಿ 6ರಂದು ಚೆನ್ನೈ ಬಂದರು ತಲುಪಿತ್ತು. ಕಸ್ಟಮ್ಸ್ ಪ್ರಕ್ರಿಯೆ ಹಿನ್ನೆಲೆಯಲ್ಲಿ ಚೆನ್ನೈ ಬಂದರಿನಲ್ಲೇ ಇರಿಸಲಾಗಿತ್ತು. ಸದ್ಯ ಬಿಎಂಆರ್‌ಸಿಎಲ್ ಅಧಿಕಾರಿಗಳು ಚೆನ್ನೈ ಬಂದರಿಗೆ ತೆರಳಿ ಕಸ್ಟಮ್ಸ್ ಪ್ರಕ್ರಿಯೆಗಳನ್ನು ಮುಗಿಸಿದ್ದಾರೆ.
ಸದ್ಯ ಚೀನಾದಿಂದ ಚೆನ್ನೈಗೆ ಬಂದ ರೈಲು ಬೋಗಿಗಳನ್ನು ಚೆನ್ನೈ ಬಂದರಿನ ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರಿಗೆ ತೆರಳಲು ಅನುಮತಿ ನೀಡಿದ್ದಾರೆ. ಹೀಗಾಗಿ ಇದನ್ನು ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಸಾಗಿಸುವ ಪ್ರಕ್ರಿಯೆಗೆ ಬಿಎಂಆರ್‌ಸಿಎಲ್ ಅಧಿಕಾರಿಗಳು ಚಾಲನೆ ನೀಡಿದ್ದು, ಫೆಬ್ರವರಿ 18ರಂದು ಎಲೆಕ್ಟ್ರಾನಿಕ್ಸ್ ಸಿಟಿಯ ಹೆಬ್ಬಗೋಡಿ ಡಿಪೋಗೆ ತಲುಪುವ ನಿರೀಕ್ಷೆ ಇದೆ. ಇನ್ನು ಬೆಂಗಳೂರು ತಲುಪಿದ ಮೇಲೆ ಸುಮಾರು ಮೂರು ತಿಂಗಳು ಈ ಚಾಲಕ ರಹಿತ ರೈಲು ಸಂಚಾರದ ಪ್ರಯೋಗ ನಡೆಯಲಿದ್ದು, ಬಳಿಕ ಸಾರ್ವಜನಿಕರ ಪ್ರಯಾಣಕ್ಕೆ ಮುಕ್ತವಾಗುವ ಸಾಧ್ಯತೆ ಇದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain











Click it and Unblock the Notifications