ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಕಾರು ಸ್ಟಂಟ್ ವಿಡಿಯೋ ವೈರಲ್, ಮಾಲೀಕನ ವಿರುದ್ಧ ಎಫ್‌ಐಆರ್
ಬೆಂಗಳೂರಿನ ಹೃದಯಭಾಗವಾದ ಎಂ.ಜಿ.ರಸ್ತೆಯಲ್ಲಿ ತಡರಾತ್ರಿ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೈ-ಸ್ಪೀಡ್ ಡ್ರಿಫ್ಟಿಂಗ್ ಸ್ಟಂಟ್ ಮಾಡಿದ ಮಾಲೀಕನ ವಿರುದ್ಧ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿದ್ದಾರೆ. ಅನಿಲ್ ಕುಂಬ್ಳೆ ಸರ್ಕಲ್‌ನ ಈ ಘಟನೆಯ 11 ಸೆಕೆಂಡುಗಳ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಕಾರು ವೃತ್ತದ ಮಧ್ಯೆ ಡ್ರಿಫ್ಟಿಂಗ್ ಮಾಡುತ್ತಿರುವುದು ಮತ್ತು ಕೆಲವು ಜನರು ಅದನ್ನು ನೋಡಿ ಸಂಭ್ರಮಿಸುತ್ತಿರುವುದು ಕಂಡುಬಂದಿದೆ.
ಶನಿವಾರ ಮುಂಜಾನೆ ಸುಮಾರು 2ರಿಂದ 3 ಗಂಟೆಯ ನಡುವೆ ಈ ಘಟನೆ ನಡೆದಿದೆ. ಬಿಡುವಿಲ್ಲದ ಸಂಚಾರವಿರುವ ಅನಿಲ್ ಕುಂಬ್ಳೆ ವೃತ್ತವನ್ನು ಈ ಐಷಾರಾಮಿ ಕಾರು ಸ್ಟಂಟ್ ಝೋನ್ ಆಗಿ ಮಾರ್ಪಡಿಸಿತ್ತು. ಅತಿ ವೇಗವಾಗಿ ಕಾರನ್ನು ತಿರುಗಿಸುವ ಮೂಲಕ (ಡ್ರಿಫ್ಟಿಂಗ್) ಇತರ ವಾಹನ ಸವಾರರ ಜೀವಕ್ಕೆ ಅಪಾಯ ತಂದೊಡ್ಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಕಬ್ಬನ್ ಪಾರ್ಕ್ ಪೊಲೀಸರ ಕ್ರಮ
ಈ ಅಪಾಯಕಾರಿ ಕೃತ್ಯವು ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ, ಮೊಬೈಲ್‌ಗಳಲ್ಲಿ ಸೆರೆಯಾಗಿದೆ. ಅಲ್ಲದೆ, ಸ್ಥಳದಲ್ಲಿದ್ದ ಕೆಲವರು ಇದನ್ನು ಕಂಡು ಆತಂಕ ವ್ಯಕ್ತಪಡಿಸಿದ್ದಾರೆ. ಕಾರಿನ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಾಹನದ ಮಾಲೀಕನ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.
ನಿರ್ಲಕ್ಷ್ಯದ ಚಾಲನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಸಮಯದಲ್ಲಿ ಕಾರನ್ನು ಚಲಾಯಿಸುತ್ತಿದ್ದವರು ಯಾರು ಎಂಬುದನ್ನು ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ. ಮಾಲೀಕನೇ ಕಾರು ಚಲಾಯಿಸುತ್ತಿದ್ದರೇ ಅಥವಾ ಬೇರೆಯವರೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.
Video from last night in Bengaluru. Lamborghini KA 05 NR 0009 seen repeatedly doing donuts at a public junction under a flyover while other vehicles were present, posing a safety risk.@blrcitytraffic @BlrCityPolice please look into this and take action if required. pic.twitter.com/UuOHXljE5i
— CitizenReportIN (@CitizenReprt) March 21, 2026
ಪೊಲೀಸರ ಮಾಹಿತಿ ಪ್ರಕಾರ ದುಬಾರಿ ಲ್ಯಾಂಬೋರ್ಗಿನಿ ಕಾರು ಈ ಬ್ಯುಸಿ ಜಂಕ್ಷನ್‌ನ್ನು ಸ್ಟಂಟ್ ಜೋನ್ ಆಗಿ ಬಳಸಿಕೊಂಡು ಅಪಾಯಕಾರಿ ರೀತಿಯಲ್ಲಿ ಡ್ರಿಫ್ಟ್ ಮಾಡಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ಕೆಲವು ಪ್ರಯಾಣಿಕರು ಘಟನೆಯನ್ನು ಕಣ್ಣಾರೆ ಕಂಡಿದ್ದಾರೆ. ಕಾರು ಯಾರು ಚಾಲನೆ ಮಾಡುತ್ತಿದ್ದರು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆ ನಂತರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಹುಚ್ಚಾಟಗಳಿಗೆ ಬ್ರೇಕ್ ಹಾಕಿ
ಅತ್ಯಂತ ಜನನಿಬಿಡ ಮತ್ತು ಪ್ರತಿಷ್ಠಿತ ಪ್ರದೇಶಗಳಾದ ಎಂ.ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳು ಈಗ 'ವೀಲಿಂಗ್' ಮತ್ತು ಡ್ರಿಫ್ಟಿಂಗ್‌ನಂತಹ ಅಪಾಯಕಾರಿ ಸ್ಟಂಟ್‌ಗಳ ತಾಣವಾಗಿ ಮಾರ್ಪಡುತ್ತಿವೆ. ಅದರಲ್ಲೂ ವಾರಾಂತ್ಯದ ರಾತ್ರಿಗಳಲ್ಲಿ ಈ ರೀತಿಯ ಪುಂಡಾಟಿಕೆ ಮಿತಿಮೀರುತ್ತಿದೆ. ತಡರಾತ್ರಿ ಸಂಚಾರ ಮುಕ್ತವಾದಾಗ ಐಷಾರಾಮಿ ಕಾರುಗಳನ್ನು ಹೊಂದಿರುವವರು ಅತಿ ವೇಗವಾಗಿ ವಾಹನ ಚಲಾಯಿಸುವುದು, ತಿರುವುಗಳಲ್ಲಿ ಡ್ರಿಫ್ಟಿಂಗ್ ಮಾಡುವುದು ಸಾಮಾನ್ಯವಾಗುತ್ತಿದೆ. ಇದು ಕೇವಲ ಚಾಲಕನ ಜೀವಕ್ಕೆ ಮಾತ್ರವಲ್ಲದೆ, ರಸ್ತೆಯಲ್ಲಿರುವ ಇತರ ವಾಹನ ಸವಾರರ ಮತ್ತು ಪಾದಚಾರಿಗಳ ಜೀವಕ್ಕೂ ಸಂಚಕಾರ ತರುತ್ತಿದೆ.
ಬೈಕ್ ಸವಾರರ ಹುಚ್ಚಾಟವೂ ಇಲ್ಲಿ ಕಡಿಮೆಯೇನಿಲ್ಲ. ಮಾರ್ಪಾಡು ಮಾಡಿದ ಸೈಲೆನ್ಸರ್‌ಗಳನ್ನು ಬಳಸಿ ಅತಿಯಾದ ಶಬ್ದ ಮಾಡುವುದು ಮತ್ತು ವೀಲಿಂಗ್ ಮಾಡುವುದು ಈ ರಸ್ತೆಗಳಲ್ಲಿ ನಿರಂತರವಾಗಿ ನಡೆಯುತ್ತಿದೆ. ವಿಶೇಷವಾಗಿ ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡಲು ಇಂತಹ ಸಾಹಸಗಳಿಗೆ ಕೈಹಾಕುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ.
ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳು ಸದಾ ಪ್ರವಾಸಿಗರು ಮತ್ತು ಸ್ಥಳೀಯರಿಂದ ತುಂಬಿರುತ್ತವೆ. ರಾತ್ರಿ 11 ಗಂಟೆಯ ನಂತರವೂ ಇಲ್ಲಿ ಜನರ ಓಡಾಟವಿರುತ್ತದೆ. ಇಂತಹ ಸಮಯದಲ್ಲಿ ಕಿಡಿಗೇಡಿಗಳು ನಡೆಸುವ ಈ ಸ್ಟಂಟ್‌ಗಳು ಪಾದಚಾರಿಗಳಲ್ಲಿ ಭಯ ಹುಟ್ಟಿಸುತ್ತಿವೆ. ನಿಯಮ ಉಲ್ಲಂಘಿಸುವವರಿಗೆ ಕೇವಲ ದಂಡ ವಿಧಿಸಿದರೆ ಸಾಲದು, ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಒತ್ತಾಯವಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications