ಯುವಕರ ಸೆಳೆದ ಮಿಡ್ ನೈಟ್ ಮ್ಯಾರಥಾನ್-2014
ಬೆಂಗಳೂರು, ಡಿ. 21: ಕೆಲ ವಿವಾದಗಳ ನಡುವೆಯೂ ಎಸ್ಬಿಐ ಹಮ್ಮಿಕೊಂಡಿದ್ದ ಬೆಂಗಳೂರು ಮಿಡ್ನೈಟ್ ಮ್ಯಾರಥಾನ್-2014 ವೈಟ್ಫೀಲ್ಡ್ನ ಸರ್ಕಾರಿ ಆಸ್ಪತ್ರೆ ಬಳಿ ಶನಿವಾರ ರಾತ್ರಿ ನಡೆಯಿತು.
ಕಾರ್ಪೊರೇಟ್ ಉದ್ಯೋಗಿಗಳು ಹಾಗೂ ದೇಶ-ವಿದೇಶಗಳಿಂದ ಆಗಮಿಸಿದ್ದ ಓಟಗಾರರು ಮ್ಯಾರಥಾನ್ ನಲ್ಲಿ ಪಾಲ್ಗೊಂಡರು. ಉದ್ಯಮಿ ಗೀತಾಂಜಲಿ ಕಿರ್ಲೋಸ್ಕರ್ ಮತ್ತು ವೈಟ್ ಪೀಲ್ಡ್ ಆಸ್ಪತ್ರೆಯ ಸಿಇಒ ರಾಜೀವ್ ಸಿಂಘಾಲ್ ಹಸಿರು ನಿಶಾನೆ ತೋರಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು.[ವಿವಾದದಲ್ಲಿ ಬೆಂಗಳೂರು ಮಿಡ್ನೈಟ್ ಮ್ಯಾರಥಾನ್]

ಸ್ವಚ್ಛ ಬೆಂಗಳೂರು ಧ್ಯೇಯದೊಂದಿಗೆ ನಡೆದ ಈ ಮ್ಯಾರಥಾನ್ನಲ್ಲಿ ಮಕ್ಕಳು, ಯುವಕರ ಆದಿಯಾಗಿ 10 ಸಾವಿರಕ್ಕೂ ಹೆಚ್ಚು ಓಟಗಾರರು ಭಾಗವಹಿಸಿದ್ದರು. ಕೊರೆವ ಚಳಿ ಲೆಕ್ಕಿಸದೆ ಹಿರಿಯ ನಾಗರಿಕರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಮ್ಯಾರಥಾನ್ಗೆ ಪ್ರಾಯೋಜಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಪ್ರಧಾನ ವ್ಯವಸ್ಥಾಪಕ ರಜಿನಿ ಮಿಶ್ರಾ, ಪ್ರಧಾನ ವ್ಯವಸ್ಥಾಪಕ ದೀಪಾಂಕರ್ ಬೋಸ್ ಕೂಡ ಓಟದಲ್ಲಿ ಪಾಲ್ಗೊಂಡಿದ್ದರು.
ಮಹಿಳೆಯರ 10ಕೆ (ಅಂತಾರಾಷ್ಟ್ರೀಯ) ವಿಭಾಗದಲ್ಲಿ ಕೀನ್ಯಾದ ಡ್ಯಾಲ್ಸ್ ತರೂಸ್ ಪ್ರಥಮ ಸ್ಥಾನ ಪಡೆದರೆ ಅದೇ ರಾಷ್ಟ್ರದ ವಿರ್ಜೀನಿಯಾ ದ್ವಿತೀಯ ಸ್ಥಾನ ಪಡೆದರು. ಸ್ವೀಡನ್ ನ ಲಿನಿ ತೃತೀಯ ಸ್ಥಾನ ಪಡೆದರು. ಭಾರತೀಯರ ವಿಭಾಗದಲ್ಲಿ ಮೀರಾ ಕತ್ವಾಲ್ (ಪ್ರಥಮ), ಪದವಿ ವಿದ್ಯಾರ್ಥಿಗಳಾದ ಗ್ರೇಸಿ (ದ್ವಿತೀಯ) ಹಾಗೂ ರತಿ (ತೃತೀಯ) ಸ್ಥಾನ ಪಡೆದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications