Bengaluru: ಮೋದಿ, ಎಚ್.ಡಿ ಕುಮಾರಸ್ವಾಮಿಗೆ ಧನ್ಯವಾದ ಹೇಳಿದ ಸಂಸದ ತೇಜಸ್ವಿ ಸೂರ್ಯ!

ಬೆಂಗಳೂರು ಹಾಗೂ ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಧನ್ಯವಾದ ಹೇಳಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದರ ವಿವರ ಇಲ್ಲಿದೆ.

ದೇಶದಲ್ಲಿ ಎಂಡ್ ಟು ಎಂಡ್ ಕನೆಕ್ಟಿವಿಟಿ (ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾರಿಗೆ ವ್ಯವಸ್ಥೆ) ಅಭಿವೃದ್ಧಿ ಆಗುತ್ತಿದೆ. ಇದೀಗ ಈ ವಿಚಾರದಲ್ಲಿ ಬೆಂಗಳೂರು ಸಹ ಪ್ರಗತಿ ಸಾಧಿಸುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸುಸ್ಥಿರ ಚಲನಶೀಲತೆಯತ್ತ / ಸಾರಿಗೆ ಸೇವೆ ಅಭಿವೃದ್ಧಿ ವೇಗವಾಗಿ ಆಗುತ್ತಿದೆ. ಅಲ್ಲದೇ ಬೆಂಗಳೂರು ಹೆಚ್ಚಿನ ಪ್ರಯೋಜನ ಪಡೆಯುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ.

Bengaluru MP Tejaswi Surya thanks Modi and H D Kumaraswamy

ಲೋಕಸಭೆಯಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ ಸರ್ಕಾರ, FAME ಯೋಜನೆಗಳು ಮತ್ತು PM E-ಡ್ರೈವ್ ಮೂಲಕ 21,000 ಕ್ಕೂ ಹೆಚ್ಚು ವಿದ್ಯುತ್ ಬಸ್‌ಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇದರಲ್ಲಿ 5,700ಕ್ಕೂ ಹೆಚ್ಚು ಬಸ್‌ಗಳನ್ನು ಬೆಂಗಳೂರಿಗೆ ಹಂಚಿಕೆ ಮಾಡಲಾಗಿದೆ ಮತ್ತು 1,221 ಬಸ್‌ಗಳ ಕಾರ್ಯಾಚರಣೆ ಪ್ರಾರಂಭವಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ.

ಬಸ್‌ಗಳು ಸಾಮೂಹಿಕ ಸಾರಿಗೆ ವ್ಯವಸ್ಥೆಗಳು ಮತ್ತು ಸಂಚಾರ ಸಮಸ್ಯೆ ತಪ್ಪಿಸಿ ಸುಸ್ಥಿರ ಸಾರಿಗೆ ಪರಿಹಾರಕ್ಕೆ ಸಹಕಾರಿಯಾಗಿದೆ. ಅಲ್ಲದೇ ಬೆಳೆಯುತ್ತಿರುವ ನಗರಗಳ ಸಂಚಾರ ಬೇಡಿಕೆಗಳನ್ನು ಪೂರೈಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಮೋದಿ ಜಿ ನೇತೃತ್ವದ ಕೇಂದ್ರ ಸರ್ಕಾರವು ನಮ್ಮ ನಗರಗಳನ್ನು ಹೆಚ್ಚು ವಾಸಯೋಗ್ಯವಾಗಿಸಲು ಮತ್ತು ವಿಶ್ವ ದರ್ಜೆಯ ಸಾರಿಗೆ ಪರಿಹಾರಗಳನ್ನು ಒದಗಿಸಲು ಸಂಪೂರ್ಣವಾಗಿ ಬದ್ಧವಾಗಿದೆ. ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಧನ್ಯವಾದ ಎಂದೂ ಸಂಸದ ತೇಜಸ್ವಿ ಸೂರ್ಯ ಅವರು ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+