ಕುಮಾರಸ್ವಾಮಿ ಭೇಟಿ ಮಾಡಲು ಸಂಸದರ ನಿರ್ಧಾರ, ಉದ್ದೇಶವೇನು?

Recommended Video

      ಎಚ್ ಡಿ ಕುಮಾರಸ್ವಾಮಿಯನ್ನ ಭೇಟಿ ಮಾಡಲಿದ್ದಾರೆ ಬೆಂಗಳೂರಿನ ಸಂಸದರು | Oneindia Kannada

      ಬೆಂಗಳೂರು, ಸೆಪ್ಟೆಂಬರ್ 19: ಸಂಸದರು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರನ್ನು ಬುಧವಾರ(ಸೆ.19)ರಂದು ಭೇಟಿ ಮಾಡಲಿದ್ದಾರೆ. ಹಾಗಾದರೆ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇರಬಹುದು ಎಂದು ನೀವು ಆಲೋಚನೆ ಮಾಡುತ್ತಿದ್ದರೆ ಅದು ತಪ್ಪು.

      ಬೆಂಗಳೂರು ಉಪನಗರ ರೈಲು ಯೋಜನೆ ಆರಂಭದಲ್ಲಿಯೇ ನಿಂತಿದ್ದು ಇದನ್ನು ತ್ವರಿತವಾಗಿ ಜಾರಿಗೊಳಿಸಬೇಕಿದ್ದು ಅದಕ್ಕಾಗಿ ವಿಶೇಷ ಯೋಜನಾ ವಾಹ ರೂಪಿಸುವಂತೆ ಮನವಿ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಲಿದ್ದಾರೆ.

      ನೈಋತ್ಯ ವಲಯದ ಹಿರಿಯ ಅಧಿಕಾರಿಗಳು ಹಾಗೂ ಸಂಸದರ ಮಧ್ಯೆ ಈ ಕುರಿತು ಮಾತುಕತೆ ನಡೆದಿದೆ, ಸಬ್‌ಅರ್ಬನ್ ರೈಲು ಯೋಜನೆಗಿರುವ ತೊಡಕುಗಳನ್ನು ನಿವಾರಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಜತೆಗೆ ರೈಲ್ವೆ ಹಾಗೂ ರಾಜ್ಯ ಸರ್ಕಾರ ಸಮನ್ವಯ ಸಾಧಿಸಿ ತ್ವರಿತವಾಗಿ ಯೋಜನೆ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಲಿದ್ದಾರೆ.

      Bengaluru MPs to meet CM seeking SPV for suburban rail project

      ಈ ರೈಲು ಯೋಜನೆಗೆ ಕೇಂದ್ರ ಸರ್ಕಾರ ಈಗಾಗಲೇ ಒಪ್ಪಿಗೆ ಸೂಚಿಸಿದೆ. ಸಂಸದರ ಮನವಿಗೆ ಪ್ರತಿಕ್ರಿಯಿಸಿದ ರೈಲ್ವೆ ಅಧಿಕಾರಿಗಳು ಸಬ್ ಅರ್ಬನ್ ರೈಲು ಯೋಜನೆ ಜಾರಿಗೆ ಇಲಾಖೆ ಬದ್ಧವಾಗಿದೆ. ಇದಕ್ಕೆ ರಾಜ್ಯ ಸರ್ಕಾರದ ಸಹಕಾರ ಅಗತ್ಯವಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಿಂದ ಹೆಚ್ಚಿ ಸಂಖ್ಯೆಯ ರೈಲುಗಳನ್ನು ಬೆಂಗಳೂರು ಮಾರ್ಗದಲ್ಲಿ ಓಡಿಸಬೇಕು. ಆ ಮಾರ್ಗದಲ್ಲಿ ಪ್ರಯಾಣಿಕರ ದಟ್ಟಣೆ ಆಧರಿಸಿ ರೈಲು ಅಥವಾ ಬೋಗಿಗಳ ಸಂಖ್ಯೆ ಹೆಚ್ಚಿಸಲು ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+