Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ
Bengaluru Mumbai Vande Bharat: ಬೆಂಗಳೂರು - ಮುಂಬೈಗೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಪರಿಚಯಿಸಲಾಗುತ್ತಿದೆ. ಬೆಂಗಳೂರಿನಿಂದ ಮುಂಬೈಗೆ ನೂತನ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಸಂಬಂಧ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಹತ್ವದ ಟ್ವೀಟ್ ಹಂಚಿಕೊಂಡಿದ್ದು, ಸಂಸದ ತೇಜಸ್ವಿ ಸೂರ್ಯ ಅವರು ಈ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ. ಬೆಂಗಳೂರು - ಮುಂಬೈಗೆ ಹೊಸ ವಂದೇ ಭಾರತ್ ಸ್ಲೀಪರ್ ರೈಲಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.
ಒಳ್ಳೆಯ ಸುದ್ದಿ: ಮುಂಬೈನಿಂದ ಬೆಂಗಳೂರಿಗೆ ಹೊಸ ವಂದೇ ಭಾರತ್ ಸ್ಲೀಪರ್ ಅನುಮೋದನೆ
ಒಳ್ಳೆಯ ಸುದ್ದಿ: ಮುಂಬೈನಿಂದ ಬೆಂಗಳೂರಿಗೆ ಹೊಸ ವಂದೇ ಭಾರತ್ ಸ್ಲೀಪರ್ ಅನುಮೋದನೆ ಎನ್ನುವ ಶೀರ್ಷಿಕೆಯೊಂದಿಗೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಿಂದ KSR ಬೆಂಗಳೂರಿಗೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಅನುಮೋದನೆ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಜಿ ಅವರಿಗೆ ಧನ್ಯವಾದಗಳು.

ಈ 2 ಪ್ರಮುಖ ನಗರಗಳ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಇದು ಬದಲಾವಣೆಯ ಮೈಲುಗಲ್ಲು ಎಂದಿದ್ದಾರೆ. ವಂದೇ ಭಾರತ್‌ನ ಉತ್ತಮ ಸೌಲಭ್ಯಗಳು ಮತ್ತು ವೇಗದಿಂದ, ಈಗ ಪ್ರಯಾಣವೂ ಗಮ್ಯಸ್ಥಾನ ತಲುಪಿದಷ್ಟು ಸಂತೋಷಕರವಾಗಿದೆ ಎಂದು ಅವರು ಸಂತೋಷ ಹಂಚಿಕೊಂಡಿದ್ದಾರೆ.
Bengaluru: ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು
ಇನ್ನು ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಬೆಂಗಳೂರು - ಮುಂಬೈಗೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಯೋಜನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡುತ್ತಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಟ್ವೀಟ್ ರೀಟ್ವೀಟ್ ಮಾಡಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ಯುವ ಮುಖಂಡ ತೇಜಸ್ವಿ ಸೂರ್ಯ ಅವರು, ಬೆಂಗಳೂರು ಮತ್ತು ಮುಂಬೈ ಭಾರತದ ಎರಡು ಪ್ರಮುಖ ಬೆಳವಣಿಗೆಯ ಎಂಜಿನ್‌ಗಳಾಗಿವೆ. ಅವು ಅತ್ಯುತ್ತಮ ಸಂಪರ್ಕಕ್ಕೆ ಅರ್ಹವಾಗಿವೆ, ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಎರಡು ನಗರಗಳ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿನ ಅನುಮೋದನೆಯ ಮೂಲಕ ಇದಕ್ಕೆ ಉತ್ತೇಜನ ನೀಡಿದೆ.
ರೈಲ್ವೆ ಮಂಡಳಿಯ ಅಧ್ಯಕ್ಷರು ದೂರವಾಣಿ ಸಂಭಾಷಣೆಯಲ್ಲಿ ನನಗೆ ಹೊಸ ಬೋಗಿಗಳನ್ನು ಸಿದ್ಧಪಡಿಸಲಾಗುತ್ತಿದೆ ಮತ್ತು ಜುಲೈ ಅಂತ್ಯದ ವೇಳೆಗೆ ಸೇವೆಯನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದ್ದಾರೆ ಎಂದು ತಿಳಿಸಿದ್ದಾರೆ. ಅತ್ಯಂತ ಅಗತ್ಯವಿರುವ ರೈಲು ಸೇವೆಯು ಎರಡೂ ನಗರಗಳ ದುಡಿಯುವ ಜನಸಂಖ್ಯೆಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ.
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಸಚಿವರಾದ ವಿ. ಸೋಮಣ್ಣ ಅವರ ನಿರಂತರ ಬೆಂಬಲಕ್ಕಾಗಿ ಅಪಾರ ಧನ್ಯವಾದಗಳು. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ವಿತರಣೆ ಮತ್ತು ನಾಗರಿಕ-ಮೊದಲ ವಿಧಾನವನ್ನು ಆದ್ಯತೆ ನೀಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Bengaluru and Mumbai are two of the most important growth engines of India. They deserve best of connectivity, which the PM Modi Ji led government is fulfilling through the approval of the Vande Bharat Sleeper train between the two cities.
— Tejasvi Surya (@Tejasvi_Surya) April 13, 2026
The Railway Board Chairman informed me… https://t.co/TEm69zzFLj












Click it and Unblock the Notifications