Bengaluru Mumbai Vande Bharat: ಬೆಂಗಳೂರು ಹೊಸ ವಂದೇ ಭಾರತ್ ಸ್ಲೀಪರ್ ರೈಲು: ನನ್ನ ಮನವಿಗೆ ಸ್ಪಂದನೆ: ಪ್ರಹ್ಲಾದ ಜೋಶಿ
Bengaluru Mumbai Vande Bharat: ಬೆಂಗಳೂರು - ಮುಂಬೈಗೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಪರಿಚಯಿಸಲಾಗುತ್ತಿದ್ದು, ನನ್ನ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಬಹು ನಿರೀಕ್ಷಿತ ಬೆಂಗಳೂರಿನಿಂದ ಮುಂಬೈಗೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ.
ಬೆಂಗಳೂರಿನಿಂದ ಮುಂಬೈಗೆ ನೂತನ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ ರೈಲು ಬೆಂಗಳೂರಿನಿಂದ ಕಲ್ಯಾಣ ಕರ್ನಾಟಕದ ಮಾರ್ಗವಾಗಿ ಸಂಚರಿಸಲು ನನ್ನ ಮನವಿಗೆ ಸ್ಪಂದಿಸಿ, ನೂತನ ವಂದೇ ಭಾರತ್ ಸ್ಲೀಪರ್ ರೈಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಕಲ್ಯಾಣ ಕರ್ನಾಟಕದ ಮೂಲಕ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್‌ಗೆ ಸಂಚರಿಸಲಿದೆ.

ಬೆಂಗಳೂರಿನಿಂದ ಕರ್ನಾಟಕದ ಮಧ್ಯಭಾಗವಾದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ವಾಣಿಜ್ಯ ನಗರಿ ಮುಂಬೈಗೆ ತೆರಳಲು ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲಿಗೆ ನನ್ನ ಮನವಿಯ ಮೇರೆಗೆ ಈಗಾಗಲೇ ಅನುಮೋದನೆ ನೀಡಲಾಗಿತ್ತು. ಈ ಸೂಪರ್ ಫಾಸ್ಟ್ ರೈಲನ್ನು ಶೀಘ್ರವೇ ಪ್ರಾರಂಭಿಸುವುದಾಗಿ, ತದನಂತರದ ದಿನಗಳಲ್ಲಿ ವಂದೇ ಭಾರತ್ ಸ್ಲೀಪರ್ ರೈಲಾಗಿ ಬದಲಾಯಿಸುವಂತೆ ನನ್ನ ಪ್ರಸ್ತಾವನೆಯನ್ನು ಸಕಾರಾತ್ಮಕವಾಗಿ ಪರಿಗಣಿಸುವುದಾಗಿ ಹೇಳಿರುವ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದ್ದಾರೆ.
ರಾಜ್ಯದ ಅಭಿವೃದ್ಧಿಯ ಜೊತೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಮತ್ತಷ್ಟು ಹೆಚ್ಚಿನ ಮಹತ್ವ ಹಾಗೂ ರಾಜ್ಯದಲ್ಲಿನ ವಾಣಿಜ್ಯ ಚಟುವಟಿಕೆಗಳನ್ನು ಹೆಚ್ಚಿಸುವುದರ ಜೊತೆಗೆ ಉತ್ತಮ ಸಂಚಾರ ಸೌಲಭ್ಯವನ್ನು ಈ ನೂತನ ವಂದೇ ಭಾರತ್ ರೈಲು ಬಲವರ್ಧಿಸಲಿದೆ. ನೂತನ ವಂದೇ ಭಾರತ್ ಸ್ಲೀಪರ್ ರೈಲನ್ನು ಐಟಿ ಸಿಟಿ ಬೆಂಗಳೂರು - ವಾಣಿಜ್ಯ ನಗರಿ ಮುಂಬೈ ಮಧ್ಯೆ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪ್ರಧಾನಮಂತ್ರಿ ನರೇಂದ್ರ ಮೋದಿ, ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್, ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಅನಂತ ಧನ್ಯವಾದಗಳು ಎಂದು ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
Bengaluru Mumbai Vande Bharat: ಸಂಸದ ಪಿ.ಸಿ ಮೋಹನ್ ಟ್ವೀಟ್
ಬೆಂಗಳೂರು - ಮುಂಬೈಗೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಪರಿಚಯಕ್ಕೆ ಸಂಬಂಧಿಸಿದಂತೆ ಸಂಸದ ಪಿ.ಸಿ ಮೋಹನ್ ಅವರು ಸಹ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಮತ್ತು ವಾಣಿಜ್ಯ ರಾಜಧಾನಿ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಕಲ್ಯಾಣ ಕರ್ನಾಟಕ ಮೂಲಕ ಸಂಚರಿಸಲು ಯೋಜಿಸಲಾಗಿದ್ದು, ಇದು ಪ್ರಯಾಣಿಕರಿಗೆ ವೇಗವಾಗಿ ಮತ್ತು ಹೆಚ್ಚು ಪರಿಣಾಮಕಾರಿ ಪ್ರಯಾಣವನ್ನು ಒದಗಿಸುವುದರ ಜೊತೆಗೆ ಈ ಪ್ರದೇಶದಾದ್ಯಂತ ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.












Click it and Unblock the Notifications