ಬೆಂಗಳೂರು ಪಾಲಿಕೆ ಬಜಾರ್ನಲ್ಲಿ ಇ - ಆಕ್ಷನ್ ಮೂಲಕ ಮಳಿಗೆಗಳ ಹಂಚಿಕೆ: ಮಹೇಶ್ವರ್ ರಾವ್
ಬೆಂಗಳೂರಿನ ಪ್ರಮುಖ ಪಾಲಿಕೆ ಬಜಾರ್ಗಳಲ್ಲಿ ಒಂದಾಗಿರುವ ವಿಜಯನಗರದ ಪಾಲಿಕೆ ಬಜಾರ್ನಲ್ಲಿ ಇ-ಆಕ್ಷನ್ ಮುಖಾಂತರ ಮಳಿಗೆಗಳನ್ನು ಹಂಚಿಕೆ ಮಾಡಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಮಂಗಳವಾರ (ಡಿಸೆಂಬರ್ 16) ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಹವಾನಿಯಂತ್ರಿತ ಪಾಲಿಕೆ ಬಜಾರ್ನಲ್ಲಿ 79 ಮಳಿಗೆಗಳು ಬರಲಿದ್ದು, ಕೂಡಲೇ ಇ-ಆಕ್ಷನ್ ಮಾಡಿ ನಿಯಮಾನುಸಾರು ಮಳಿಗೆಗಳನ್ನು ಹಂಚಿಕೆ ಮಾಡಲು ಸೂಚನೆ ನೀಡಿದ್ದಾರೆ.
ಪಾಲಿಕೆ ಬಜಾರ್ ಸುತ್ತಲೂ ಅನಧಿಕೃತವಾಗಿ ವ್ಯಾಪಾರ ಮಾಡುವುದನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು. ಪಾಲಿಕೆ ಬಜಾರ್ ಮೇಲ್ವಿಚಾರಣೆಗಾಗಿ ಒಬ್ಬ ಕಂದಾಯ ಅಧಿಕಾರಿಯನ್ನು ಪ್ರತ್ಯೇಕವಾಗಿ ನಿಯೋಜಿಸಲು ನಿರ್ದೇಶನ ನೀಡಿದರು.

ಶ್ರೀರಾಂಪುರ ಹೆರಿಗೆ ಆಸ್ಪತ್ರೆ ಹೊಸ ಕಟ್ಟಡ ನಿರ್ಮಾಣ: ಶ್ರೀರಾಂಪುರ ಹೆರಿಗೆ ಆಸ್ಪತ್ರೆಯು 1 ಅಂತಸ್ತಿನ ಕಟ್ಟಡ ತುಂಬಾ ಹಳೆಯ ಕಟ್ಟಡವಾಗಿದ್ದು, ಸದ್ಯ 30 ಹಾಸಿಗೆಗಳ ಸಾಮರ್ಥ್ಯವಿದೆ. ಪ್ರತಿನಿತ್ಯ 4-6 ಹೆರಿಗೆಗಳು ಆಗಲಿದ್ದು, ಒಪಿಡಿಗೆ 200 ರಿಂದ 300 ಮಂದಿ ಬರಲಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಇರುವ ಕಟ್ಟಡ ನೆಲಸಮಗೊಳಿಸಿ 50 ಹಾಸಿಗೆ ಒಳಗೊಂಡಂತೆ 4 ಅಂತಸ್ತಿನ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಕೂಡಲೆ ಕೆಲಸ ಪ್ರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಎಂ.ಸಿ ಲೇಔಟ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಗೋವಿಂದರಾಜನಗರ ಎಂ.ಸಿ ಲೇಔಟ್ ನಲ್ಲಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಪೈಕಿ ಅವಶ್ಯಕವಿರುವ ವೈದ್ಯರು/ಸಿಬ್ಬಂದಿಗಳ ಸಂಖ್ಯೆ, ಯಾವೆಲ್ಲಾ ಉಪಕರಣಗಳು ಬೇಕಿವೆ. ಯಾವ ರೀತಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಬಳಸಬಹುದೆಂಬುದರ ಕುರಿತು ಸಂಪೂರ್ಣ ವರದಿ ನೀಡಲು ತಿಳಿಸಲಾಗಿದೆ.
ಮೂಡಲಪಾಳ್ಯ ಹೆರಿಗೆ ಆಸ್ಪತ್ರೆ: ಮೂಡಲಪಾಳ್ಯ ಹೆರಿಗೆ ಆಸ್ಪತ್ರೆಯನ್ನು ಬ್ರಾಂಡ್ ಬೆಂಗಳೂರು ಯೋಜನೆಯಡಿ 12 ರಿಂದ 30 ಹಾಸಿಗೆಗೆ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪೈಕಿ ತ್ವರಿತವಾಗಿ ಕೆಲಸ ತಿಳಿಸಲಾಗಿದೆ. ಅಲ್ಲದೇ ಹೊಸಕೆರೆಹಳ್ಳಿ ಹೆರಿಗೆ ಆಸ್ಪತ್ರೆಯನ್ನು ಬ್ರ್ಯಾಂಡ್ ಬೆಂಗಳೂರು ಯೋಜನೆ ಅಡಿ ಹೊಸ ರ್ಯಾಂಪ್, ಫಾರ್ಮಸಿ, ತುರ್ತು ಸ್ಥಳ, ಆಪರೇಷನ್ ಥಿಯೇಟರ್ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯದ ಜೊತೆಗೆ 30 ರಿಂದ 50 ಹಾಸಿಗೆ ನಿರ್ಮಾಣ ಮಾಡುವ ಕೆಲಸ ಕೈಗೊಳ್ಳಲಾಗುತ್ತಿದ್ದು, ತ್ವರಿತವಾಗಿ ಕೆಲಸ ಪ್ರಾರಂಭಿಸಿ ಕಾಲಮಿತಿಯೊಳಗಾಗಿ ಪೂರ್ಣ ಆಯುಕ್ತರು ಡೆಡ್ಲೈನ್ ನಿಗದಿ ಮಾಡಿದ್ದಾರೆ.
ವೈಟ್ ಟಾಪಿಂಗ್ ಕೆಲಸ ತ್ವರಿತವಾಗಿ ಪೂರ್ಣಗೊಳಿಸಿ: ಇನ್ನು ಕೋರಮಂಗಲದಿಂದ ಸರ್ಜಾಪುರ ಕಡೆಯ 1 ಕಿ.ಮೀ ಉದ್ದದ ರಸ್ತೆ ವೈಟ್ ಟಾಪಿಂಗ್ ಕಾಮಗಾರಿಯು, ಒಂದು ಭಾಗದಲ್ಲಿ ಪೂರ್ಣಗೊಳಿಸಿದ್ದು, ಪಾದಚಾರಿ ಮಾರ್ಗದ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ. ವೈಟ್ ಟಾಪಿಂಗ್ ಆಗಿರುವ ಭಾಗದಲ್ಲಿ ಕೂಡಲೆ ವಾಹನಗಳ ಸಂಚಾರಕ್ಕೆ ಅನುವು ಮಾಡಿ ಮತ್ತೊಂದು ಭಾಗದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಂಡು ಶೀಘ್ರ ಪೂರ್ಣಗೊಳಿಸಲು ತಿಳಿಸಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications