Bengaluru-Mysuru Expressway: ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಕಡಿಮೆಯಾದ ಅಪಘಾತ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಕಡಿಮೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹಲವು ಕ್ರಮಗಳನ್ನು ತೆಗೆದುಕೊಂಡ ಬಳಿಕ ಹೆದ್ದಾರಿಯಲ್ಲಿ ಅಪಘಾತ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, ಸಾವಿನ ಸಂಖ್ಯೆ ಕೂಡ ಕಡಿಮೆಯಾಗಿದೆ.

ಈ ಬಗ್ಗೆ ಟ್ರಾಫಿಕ್ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಮಾಹಿತಿ ನೀಡಿದ್ದು, ಕಳೆದ ಮೂರು ತಿಂಗಳ ಅಪಘಾತದಿಂದ ಸತ್ತವರ ಸಂಖ್ಯೆಯನ್ನು ಬಹಿರಂಗಪಡಿಸಿದ್ದಾರೆ.

Bengaluru-Mysore Highway Fatalities Drop to 8 in July 2023, Thanks to Police Proactivity

ಪೊಲೀಸರು ಹಲವು ಕ್ರಮಗಳನ್ನು ತೆಗೆದುಕೊಂಡ ಬಳಿಕ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ. ಜುಲೈ ತಿಂಗಳಲ್ಲಿ ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯಲ್ಲಿ ಜುಲೈ ತಿಂಗಳಲ್ಲಿ ಅಪಘಾತಗಳಿಂದ ಸಾವನ್ನಪ್ಪಿದವರ ಸಂಖ್ಯೆ 8 ಕ್ಕೆ ಇಳಿದಿದೆ ಎಂದು ಅವರು ಹೇಳಿದ್ದಾರೆ.

ಕಳೆದ ಮೂರು ತಿಂಗಳಲ್ಲಿ ಸತ್ತವರೆಷ್ಟು?

ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಮೇ ತಿಂಗಳಿನಲ್ಲಿ ನಡೆದ ಅಪಘಾತಗಳಿಂದ 29 ಜನ ಸಾವನ್ನಪ್ಪಿದ್ದರೆ, ಜೂನ್ ತಿಂಗಳಿನಲ್ಲಿ 28 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ. ಹಲವು ಕ್ರಮಗಳನ್ನು ತೆಗೆದುಕೊಂಡ ಬಳಿಕ ಅಪಘಾತಗಳ ಸಂಖ್ಯೆ ಕೂಡ ಕಡಿಮೆಯಾಗಿದ್ದು ಜುಲೈನಲ್ಲಿ 8 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ರಾಮನಗರ ವ್ಯಾಪ್ತಿಯಲ್ಲಿ ಮೂವರು ಸಾವನ್ನಪ್ಪಿದ್ದರೆ, ಮಂಡ್ಯ ವ್ಯಾಪ್ತಿಯಲ್ಲಿ 5 ಜನ ಸಾವನ್ನಪ್ಪಿದ್ದಾರೆ ಎಂದು ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ಹಲವು ವಾಹನಗಳ ಓಡಾಟಕ್ಕೆ ನಿರ್ಬಂಧ

ಅಪಘಾತಗಳನ್ನು ತಪ್ಪಿಸಲು ದಶಪಥ ಹೆದ್ದಾರಿಯಲ್ಲಿ ಆಟೋ, ದ್ವಿಚಕ್ರ ವಾಹನ, ಟ್ರಾಕ್ಟರ್ ಸೇರಿದಂತೆ ಹಲವು ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ನಿಯಮ ಮೀರಿ ದಶಪಥ ಹೆದ್ದಾರಿಯಲ್ಲಿ ಓಡಾಡುವ ವಾಹನ ಸವಾರರಿಗೆ ದಂಡ ವಿಧಿಸಲಾಗುತ್ತಿದೆ.

ದ್ವಿಚಕ್ರ ವಾಹನ, ಆಟೋ, ಟ್ರಾಕ್ಟರ್ ಸೇರಿ ಹಲವು ವಾಹನಗಳಿಗೆ ನಿಷೇಧ ಹೇರಿದ ನಂತರ ಅಪಘಾತಗಳ ಪ್ರಮಾಣ ಕಡಿಮೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇದಕ್ಕೂ ಮುನ್ನ ಹೆದ್ದಾರಿಯಲ್ಲಿ ಓಡಾಡುವ ವಾಹನಗಳಿಗೆ ವೇಗಮಿತಿ ನಿಗದಿಮಾಡಿದ್ದು, ಹೆಚ್ಚಿನ ವೇಗದಲ್ಲಿ ಚಲಿಸುವ ವಾಹನಗಳಿಂದ ದಂಡ ವಸೂಲಿ ಮಾಡಲಾಗುತ್ತಿದೆ.

ಸಮರ್ಪಕ ಸರ್ವಿಸ್ ರಸ್ತೆಯನ್ನು ನಿರ್ಮಾಣ ಮಾಡದೆ ವಾಹನಗಳಿಗೆ ನಿರ್ಬಂಧ ಹೇರಿರುವ ಕ್ರಮಕ್ಕೆ ಸಾರ್ವಜನಿಕರಿಂದ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಒಟ್ಟಾರೆ ಸಾವಿನ ಹೆದ್ದಾರಿ ಎಂದು ಕುಖ್ಯಾತಿ ಪಡೆದುಕೊಂಡಿದ್ದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿ, ಸಾವಿನ ಪ್ರಮಾಣ ಕಡಿಮೆಯಾಗಿರುವುದು ವಾಹನ ಸವಾರರ ಆತಂಕವನ್ನು ದೂರ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+