ಡಿ. 8ರಂದು ಬೆಂಗಳೂರು-ಮೈಸೂರು 6 ಪಥದ ರಸ್ತೆ ಕಾಮಗಾರಿಗೆ ಚಾಲನೆ
ಬೆಂಗಳೂರು, ಡಿಸೆಂಬರ್ 02 : ಬಹುನಿರೀಕ್ಷಿತ ಬೆಂಗಳೂರು-ಮೈಸೂರು ರಸ್ತೆ ಅಗಲೀಕರಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. 'ಡಿಸೆಂಬರ್ 8ರಂದು ರಸ್ತೆ ಕಾಮಗಾರಿಗೆ ಚಾಲನೆ ಸಿಗಲಿದೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು-ಮೈಸೂರು ನಡುವಿನ ರಾಷ್ಟ್ರೀಯ ಹೆದ್ದಾರಿಯ 275ಅನ್ನು ವಿಸ್ತರಣೆ ಮಾಡಿ 10 ಪಥದ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ. 6 ಪಥದ ಮುಖ್ಯ ರಸ್ತೆ, 2 ಕಡೆಯೂ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತದೆ.
2014ರಲ್ಲಿ ಈ ಯೋಜನೆಗೆ ಒಪ್ಪಿಗೆ ಸಿಕ್ಕಿತ್ತು. 2018ರ ಮಾರ್ಚ್‌ನಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಯೋಜನೆಗೆ ಶಂಕು ಸ್ಥಾಪನೆ ಮಾಡಿದ್ದರು. ವಿವಿಧ ಕಾರಣಗಳಿಗಾಗಿ ವಿಳಂಬವಾಗಿದ್ದ ಯೋಜನೆಗೆ ಡಿಸೆಂಬರ್ 8ರಂದು ಚಾಲನೆ ಸಿಗಲಿದೆ.
ಬೆಂಗಳೂರು-ಮೈಸೂರು ನಡುವಿನ 117 ಕಿ.ಮೀ. ಮಾರ್ಗವನ್ನು ವಿಸ್ತರಣೆ ಮಾಡಿ 6 ಪಥದ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ. Dilip Buildcon Ltd. ಯೋಜನೆಯ ಗುತ್ತಿಗೆಯನ್ನು ಪಡೆದಿದೆ.....

ಕುಮಾರಸ್ವಾಮಿ ಹೇಳಿದ್ದೇನು?
'ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಡಿ.8ರಂದು ಚಾಲನೆ ನೀಡಲಾಗುತ್ತದೆ. ಆರು ಪಥದ ರಸ್ತೆ ಕಾಮಗಾರಿಗೆ ಅರಣ್ಯ ಇಲಾಖೆಯು ಅನುಮತಿ ನೀಡುವ ಕಾರ್ಯ ಬಾಕಿ ಇದ್ದು, ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಕೆಆರ್‌ಡಿಸಿಎಲ್ ಭೂಮಿ ಡಿನೋಟಿಫಿಕೇಷನ್ ಮತ್ತು ಕಂದಾಯ ದಾಖಲೆಗಳ ಪರಿಷ್ಕರಣಾ ಕಾರ್ಯವನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಟೆಂಡರ್ ಪ್ರಕ್ರಿಯೆ ಪೂರ್ಣ
Dilip Buildcon Ltd. ಕಂಪನಿಗೆ ಮೈಸೂರು-ಬೆಂಗಳೂರು 6 ಪಥದ ರಸ್ತೆ ನಿರ್ಮಾಣ ಕಾಮಗಾರಿಯ ಟೆಂಡರ್ ನೀಡಲಾಗಿದೆ. ಕಾಮಗಾರಿಯನ್ನು ಪೂರ್ಣಗೊಳಿಸಲು 30 ತಿಂಗಳ ಡೆಡ್‌ಲೈನ್ ನೀಡಲಾಗಿದೆ. ಆದರೆ, 24 ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳಿಸುವ ವಿಶ್ವಾಸವಿದೆ.

2 ಹಂತದಲ್ಲಿ ಕಾಮಗಾರಿ
ಒಟ್ಟು 2 ಹಂತದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತದೆ. ಬೆಂಗಳೂರು-ನಿಢ್ಲಘಟ್ಟ (56 ಕಿ.ಮೀ) ಕಾಮಗಾರಿಯನ್ನು 1984 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತದೆ. 2 ನೇ ಹಂತದಲ್ಲಿ ನಿಢ್ಲಘಟ್ಟ-ಮೈಸೂರು ನಡುವಿನ (61 ಕಿ.ಮೀ) ಕಾಮಗಾರಿಯನ್ನು ಕೈಗೊಳ್ಳಲಾಗುತ್ತದೆ.

6400 ಕೋಟಿ ವೆಚ್ಚ
ಬೆಂಗಳೂರು-ಮೈಸೂರು 6 ಪಥದ ರಸ್ತೆ ಕಾಮಗಾರಿಯನ್ನು 6,400 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. 117 ಕಿ.ಮೀ. 4 ಪಥದ ರಸ್ತೆಯನ್ನು ಅಗಲೀಕರಣ ಮಾಡಿ, 6 ಪಥದ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ. ಎರಡೂ ಕಡೆಯೂ ಸರ್ವೀಸ್ ರಸ್ತೆ ನಿರ್ಮಾಣ ವಾಗಲಿದೆ.












Click it and Unblock the Notifications