BLR-MYS Expressway: ಸಿಹಿ ಸುದ್ದಿ, ಅಪಘಾತ-ಸಾವಿನ ಸಂಖ್ಯೆ ಇಳಿಕೆ, ಆಗಸ್ಟ್ ಅಂಕಿ ಸಂಖ್ಯೆ ನೀಡಿದ ಎಡಿಜಿಪಿ
ಬೆಂಗಳೂರು, ಸೆಪ್ಟಂಬರ್ 03: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru-Mysuru Expressway) ಓಡಾಡುವವರಿಗೆ ನೆಮ್ಮದಿಯ ಸುದ್ದಿಯೊಂದು ಬಹಿರಂಗಗೊಂಡಿದೆ. ಹೌದು ಸೂಕ್ತ ರಸ್ತೆ ಸುರಕ್ಷತಾ ಕ್ರಮ ಜರುಗಿಸಿದ್ದರಿಂದ ಕಳೆದ ತಿಂಗಳ ಆಗಸ್ಟ್ ತಿಂಗಳಲ್ಲಿ ಅಪಘಾತಗಳು ಮತ್ತು ಸಾವಿನ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ ಎಂದು ಸ್ವತಃ ಕರ್ನಾಟಕ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ಸುರಕ್ಷತೆ) ಅಲೋಕ್ ಕುಮಾರ್ ತಿಳಿಸಿದ್ದಾರೆ.
ಭಾನುವಾರ ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಟ್ವೀಟ್ ಮಾಡಿರುವ ಅಲೋಕ್ ಕುಮಾರ್ ಅವರು, ಅಪಘಾತ ಮತ್ತು ಸಾವಿನ ಸಂಖ್ಯೆಗಳ ಮಾಹಿತಿ ನೀಡಿದ್ದಾರೆ. ಈ ಎಕ್ಸ್‌ಪ್ರೆಸ್ ವೇನಲ್ಲಿ ರಸ್ತೆ ಅಪಘಾತಗಳು, ಸಾವು ನೋವುಗಳ ಹೆಚ್ಚಾಗಿದ್ದವು. ಇದರಿಂದ ಪೊಲೀಸ್ ಇಲಾಖೆ ಜೊತೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕೈಗೊಂಡ ದಿಟ್ಟ ಕ್ರಮಗಳಿಂದ ಇದೀಗ ಅಪಘಾತಗಳು ಹತೋಟಿ ಬಂದಿವೆ.

ಎಕ್ಸ್‌ಪ್ರೆಸ್ ವೇ ನಲ್ಲಿ ರಸ್ತೆ ಅಪಘಾತದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಆದ ಸಾವುಗಳನ್ನು ನೋಡಿವುದಾದರೆ, ಮೇ ತಿಂಗಳಲ್ಲಿ 29ಮಂದಿ, ಜೂನ್-28, ಜುಲೈ- 8 ಹಾಗೂ ಕಳೆದ ತಿಂಗಳು ಆಗಸ್ಟ್ನಲ್ಲಿ ಕೇವಲ 06 ಮಂದಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ಅಲೋಕ್ ಕುಮಾರ್ ಅವರು ತಿಳಿಸಿದ್ದಾರೆ. ಇದಕ್ಕೆ ಕಾರಣವಾದ ಪೊಲೀಸ್ ಸಿಬ್ಬಂದಿಗೆ ಅವರು ಅಭಿನಂದನೆ ತಿಳಿಸಿದ್ದಾರೆ.
Trying our best to minimise fatalities on Bengaluru- Mysore Highway
— alok kumar (@alokkumar6994) September 3, 2023
No of deaths-
May - 29
June- 28
July- 8
August-6
Kudos to the team of our officers & men
But there is no room for complacency & recklessness
“ Rash & negligent driving is a certain recipe for disaster “
ದಂಡ ಕ್ರಮ ಮುಂದುವರಿಕೆ
ಇನ್ನೂ ಹೆದ್ದಾರಿಯಲ್ಲಿ ವೇಗದಕ್ಕೆ 100 kmph ಮೀತಿ ಹೇರಲಾಗಿದ್ದು, ಕೆಲವು ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿತ್ತು. ಜೊತೆಗೆ ವೇಗದ ಮಿತಿ ಉಲ್ಲಂಘನೆ ಸೇರಿದಂತೆ ಸಂಚಾರ ನಿಯಮ ಮೀರುವ ವಾಹನ ಸವಾರರಿಂದ ದಂಡ ವಸೂಲಾತಿಕ್ರಮ ಮುಂದುವರಿದಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ ಸಾವಿನ ಸಂಖ್ಯೆ ವಿಚಾರ ಪಾರ್ಲಿಮೆಂಟ್‌ನಲ್ಲೂ ಸದ್ದು ಮಾಡಿತ್ತು. ಸಂಸದರಾದ ಸುಮಲತಾ ಮತ್ತು ಪ್ರಜ್ವಲ್ ದೇವರಾಜ್ ಅವರು ಕೇಳಿದ್ದ ಪ್ರಶ್ನೆಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಅಪಘಾತ ಮತ್ತು ಕೈಗೊಂಡ ಕ್ರಮಗಳ ಕುರಿತು ವಿವರಿಸಿದ್ದರು.
ಎಕ್ಸ್‌ಪ್ರೆಸ್‌ವೇನಲ್ಲಿ 24 ಕಡೆ ಸ್ಕೈವಾಕ್
ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ, ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ರಸ್ತೆ ದಾಟುವ ಸಾರ್ವಜನಿಕರ ಅನುಕೂಲಕ್ಕಾಗಿ ಸಂಭವನೀಯ ಅಪಘಾತ ಸ್ಥಳದಲ್ಲಿ ಸ್ಕೈವಾಕ್ ನಿರ್ಮಿಸಲು ಯೋಜನೆ ರೂಪಿಸಿದೆ.

ಎಕ್ಸ್‌ಪ್ರೆಸ್‌ವೇಯಲ್ಲಿ ಸುಮಾರು ಪ್ರದೇಶಗಳನ್ನು ಗುರುತಿಸಿರುವ ಹೆದ್ದಾರಿ ಪ್ರಾಧಿಕಾರ ಒಟ್ಟು 24 ಕಡೆಗಳಲ್ಲಿ ಸ್ಕೈವಾಕ್ ನಿರ್ಮಾಣ ಮಾಡುವ ಚಿಂತನೆ ನಡೆದಿದೆ. ಮುಂದಿನ ಒಂದು ವರ್ಷಕ್ಕೆ ಈ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಿದೆ.
ಕಳೆದ ಆಗಸ್ಟ್ 01ರಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳನ್ನು ಹೆದ್ದಾರಿಯಲ್ಲಿ ನಿಷೇಧಿಸಲಾಗಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications