ಡಬಲ್ ಇಂಜಿನ್ ಸರ್ಕಾರಗಳ ಸಾಧನೆ ಎಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ವಿಡಿಯೋ ಹಂಚಿಕೊಂಡ ಸುಧಾಕರ್

10 ಪಥಗಳ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇ ಮತ್ತು ವಂದೇ ಭಾರತ್ ಎಕ್ಸ್‌ಪ್ರೆಸ್ ಒಂದೇ ಚೌಕಟ್ಟಿನಲ್ಲಿ..!

ಬೆಂಗಳೂರು, ಫೆಬ್ರವರಿ. 10: ಉದ್ಘಾಟನೆಗೆ ಸಿದ್ಧವಾಗಿರುವ ಬಹುನಿರೀಕ್ಷಿತ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇ ಚಿತ್ರಗಳು, ವಿಡಿಯೋಗಳು ಎಲ್ಲೆಡೆ ವೈರಲ್ ಆಗುತ್ತಿವೆ. ಈ ಬಾರಿ ರಾಷ್ಟ್ರೀಯ ಹೆದ್ದಾರಿ ಜೊತೆಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ಕೂಡ ಕಾಣಿಸಿಕೊಂಡಿದೆ.

ಹೌದು, ಹಲವು ಬಾರಿ ಸಚಿವರು, ಶಾಸಕರು ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇ ಚಿತ್ರಗಳು, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಆದರೆ, ಆರೋಗ್ಯ ಸಚಿವ ಕೆ ಸುಧಾಕರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು ಇದರಲ್ಲಿ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇ ಜೊತೆಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಕೂಡ ಕಾಣಿಸಿಕೊಂಡಿದೆ.

ಒಂದೇ ಚೌಕಟ್ಟಿನಲ್ಲಿ ಬರುವ ಎರಡರ ವಿಡಿಯೋದ ಡ್ರೋನ್ ಶಾಟ್ ಅನ್ನು ಆರೋಗ್ಯ ಸಚಿವ ಕೆ ಸುಧಾಕರ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಇದು ಡಬಲ್ ಇಂಜಿನ್ ಬಿಜೆಪಿ ಸರ್ಕಾರಗಳ ಸಾಧನೆ ಎಂದು ಹೇಳಿದ್ದಾರೆ.

Bengaluru - Mysuru expressway and Vande Bharat train in one frame; Watch Video

"10 ಪಥಗಳ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇ ಮತ್ತು ವಂದೇ ಭಾರತ್ ಎಕ್ಸ್‌ಪ್ರೆಸ್ ಒಂದೇ ಚೌಕಟ್ಟಿನಲ್ಲಿ..! ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಬಿಜೆಪಿ ಸರ್ಕಾರಗಳು ಅಭೂತಪೂರ್ವ ವೇಗದಲ್ಲಿ ಮುಂದಿನ ಪೀಳಿಗೆಗೆ ಮೂಲಸೌಕರ್ಯಗಳನ್ನು ಒದಗಿಸಿವೆ" ಎಂದಿದ್ದಾರೆ.

ರೂ. 8,453 ಕೋಟಿ ವೆಚ್ಚದ ಈ ಬೆಂಗಳೂರು ಮೈಸೂರು ಹೆದ್ದಾರಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುವ ನಿರೀಕ್ಷೆಯಿದೆ. ಕೆಂಗೇರಿಯಿಂದ ಮೈಸೂರಿಗೆ ಎಕ್ಸ್‌ಪ್ರೆಸ್‌ವೇಯ ಪ್ರಸ್ತುತ 3.5 ಗಂಟೆಗಳ ಪ್ರಯಾಣವನ್ನು ಕೇವಲ 1.5 ಗಂಟೆಗೆ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.

ಸದ್ಯ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರಿನಿಂದ ಮಂಡ್ಯಕ್ಕೆ ವಾಹನಗಳನ್ನು ಓಡಿಸಲು ಅನುಮತಿ ನೀಡಿದ್ದು, ಉಳಿದ ಸ್ಟ್ರೆಚ್ ಇನ್ನೂ ಪೂರ್ಣಗೊಂಡಿಲ್ಲ. ರಸ್ತೆಯು 118 ಕಿಲೋಮೀಟರ್ ಉದ್ದವನ್ನು ಹೊಂದಿದೆ. ಉದ್ಘಾಟನೆಗೆ ಮುಂಚೆಯೇ ವಾಹನಗಳ ಭಾರೀ ಸಂಚಾರಕ್ಕೆ ಸಾಕ್ಷಿಯಾಗಿದೆ.

Bengaluru - Mysuru expressway and Vande Bharat train in one frame; Watch Video

ಕಳೆದ ವರ್ಷ ನವೆಂಬರ್‌ನಲ್ಲಿ, ಮೈಸೂರು ಮತ್ತು ಚೆನ್ನೈ ನಡುವಿನ ದಕ್ಷಿಣ ಭಾರತದ ಮೊದಲ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲ್ವೇ ಇಲಾಖೆಯಿಂದ ಉದ್ಘಾಟನೆಗೊಂಡಿತು. ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಯ ಸರಾಸರಿ ವೇಗ ಗಂಟೆಗೆ 75 ರಿಂದ 77 ಕಿಲೋಮೀಟರ್. ಎರಡು ನಗರಗಳ ನಡುವಿನ ಅಂತರವು ಸುಮಾರು 504 ಕಿಲೋಮೀಟರ್ ಆಗಿದ್ದು, ಚೆನ್ನೈನಿಂದ ಮೈಸೂರು ತಲುಪಲು ಸುಮಾರು ಆರೂವರೆ ಗಂಟೆಗಳು ಪ್ರಯಾಣಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+