Bengaluru-Mysuru Expressway: ಈ 60 ಪ್ರದೇಶಗಳಲ್ಲಿ ಕ್ಯಾಮೆರಾ ಕಣ್ಗಾವಲು-ಎಲ್ಲೆಲ್ಲಿ? ಮಾಹಿತಿ, ವಿವರ
ಬೆಂಗಳೂರು, ಮಾರ್ಚ್, 30: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಹೆದ್ದಾರಿಯಲ್ಲಿ ಕಳ್ಳತನ ಪ್ರಕರಣ, ನಿಯಮ ಉಲ್ಲಂಘನೆ, ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಇದೀಗ ಪೊಲೀಸ್ ಇಲಾಖೆ ಮುಂದಾಗಿದೆ. ಹಾಗಾದರೆ ಇಲಾಖೆ ಕೈಗೊಂಡ ನಿರ್ಧಾರಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇತ್ತೀಚಿನ ದಿನಗಳಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಹೆದ್ದಾರಿ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇದೆ. ಟೋಲ್ ಹೆಚ್ಚಳ ವಿಚಾರಕ್ಕೆ ಈಗಾಗಲೇ ಸಾರ್ವಜನಿಕರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಕೆಂಡಕಾರುತ್ತಿದ್ದಾರೆ. ಅಷ್ಟೇ ಅಲ್ಲದೆ ಇದೀಗ ಈ ಹೆದ್ದಾರಿಯಲ್ಲಿ ನಡೆಯುತ್ತಿರುವ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಹೆದ್ದಾರಿಯಲ್ಲು ಏಪ್ರಿಲ್ ತಿಂಗಳ ಅಂತ್ಯಕ್ಕೆ ವಾಹನಗಳ ನೋಂದಣಿ ಫಲಕಗಳನ್ನು ಪತ್ತೆಗಾಗಿ 60 ಸ್ವಯಂ ಚಾಲಿತ ಕ್ಯಾಮೆರಾಗಳು ಕಾರ್ಯ ನಿರ್ವಹಿಸಲಿವೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದ ಅಧಿಕಾರಿಗಳ ಸಭೆ ಬಳಿಕ ಅವರು ಮಾತನಾಡಿದ್ದು, ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳನ್ನು ನಿಯಂತ್ರಿಸಲು ಪ್ರಯತ್ನ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ, ಮಿತಿಮೀರಿದ ವೇಗವಾಗಿ ಸಂಚರಿಸುವ ವಾಹನಗಳ ಮೇಲೆ ನಿಗಾವಹಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಇದೀಗ ಕೆಲವೇ ಸ್ವಯಂ ಚಾಲಿತ ಕ್ಯಾಮೆರಾಗಳಿದ್ದು, ಅವುಗಳ ಸಂಖ್ಯೆಯನ್ನು ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು "ಹೆದ್ದಾರಿ ಪ್ರಾಧಿಕಾರ(NHAI)ದಿಂದಲೂ 6 ಸ್ಥಳಗಳಲ್ಲಿ ಎಎನ್‌ಪಿಆರ್ ಕ್ಯಾಮೆರಾಗಳನ್ನು ಅಳವಡಿಲಾಗುವುದು ಅಂತಾ ಪ್ರಾಧಿಕಾರದ ಬೆಂಗಳೂರು ವಿಭಾಗದ ಅಧಿಕಾರಿ ವಿಲಾಸ್ ಪಿ.ಬ್ರಹ್ಮಣಕರ್ ಮಾಹಿತಿ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ಮತ್ತು ರಾಮನಗರ ಜಿಲ್ಲೆಯ ಚನ್ನಪಟ್ಟಣದ ನಡುವೆ ಸೂಚನಾ ಫಲಕ ಅಳವಡಿಸಲಾಗುವುದು. ಮತ್ತು ದುರಸ್ಥಿ ಹಂತಕ್ಕೆ ತಲುಪಿರುವ ತಡೆಗೋಡೆ ದುರಸ್ತಿ ಕಾಮಗಾರಿಯನ್ನು ಪ್ರಾಧಿಕಾರದಿಂದ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ಇನ್ನು ಈ ಹೆದ್ದಾರಿ ಹಾದು ಹೋಗಿರುವ ಭಾಗದಲ್ಲಿ ಪಟ್ಟಣ ಪ್ರದೇಶಗಳಲ್ಲಿ ಜನರ ಸಂಚಾರಕ್ಕೆ ಅನುಕೂಲವಾಗಲೆಂದು ಕೆಳಸೇತುವೆ ಹಾಗೂ ಮೇಲ್ಸೆತುವೆ ನಿರ್ಮಾಣ ಮಾಡಲಾಗುತ್ತಿದೆ.
688 ಕೋಟಿ ರೂಪಾಯಿಗೆ ಟೆಂಡರ್ ಆಗಿದ್ದು, ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗುದೆ ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ. ಇನ್ನು ಹೆದ್ದಾರಿಯ ಮೂರು ಸ್ಥಳಗಳಲ್ಲಿ ಹೆಚ್ಚು ಅಪಘಾತ ಪ್ರಕರಣಗಳು ನಡೆಯುತ್ತಿದ್ದು, ಅಲ್ಲಿ ಸೂಚನಾ ಫಲಕ ಅಳವಡಿಸುವಂತೆ ಸೂಚಣೆ ನೀಡಲಾಗಿದ ಎಂದು ತಿಳಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಈ ಹೆದ್ದಾರಿ ಪಕ್ಕದಲ್ಲಿ ಕಾಮಗಾರಿಗಾಗಿ ಇಟ್ಟಿದ್ದ ಹಾಗೂ ಅಳವಡಿಕೆ ಮಾಡಿದ್ದ ರಾಡ್‌ಗಳನ್ನು ಕಳವು ಮಾಡಿದ ಬಗ್ಗೆಯೂ ವರದಿ ಆಗಿತ್ತು. ಇದೀಗ ಇದಕ್ಕೂ ಮೀರಿ ನಡೆಯುತ್ತಿರುವ ಕೆಲವು ದೊಡ್ಡ ದೊಡ್ಡ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ.












Click it and Unblock the Notifications