Bengaluru-Mysuru Expressway: ಎಕ್ಸಿಟ್ ಟೋಲ್ ನಿರ್ಮಾಣಕ್ಕೆ ಕೇಂದ್ರದಿಂದ ಅನುಮತಿ-ವೆಚ್ಚ ಎಷ್ಟು ಸಾವಿರ ಕೋಟಿ?-ಮಾಹಿತಿ
ಬೆಂಗಳೂರು, ಮಾರ್ಚ್, 13: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನ ಟೋಲ್ ವಿಚಾರದಲ್ಲಿ ಈಗಾಗಲೇ ಸಾಕಷ್ಟು ಗಲಾಟೆಗಳು ಆಗಿವೆ. ನಂತರ ಹಲವು ಬದಲಾವಣೆಗಳು ಕೂಡ ಆಗಿವೆ. ಹೀಗೆ ಒಂದಲ್ಲ ಒಂದು ವಿಚಾರಲ್ಲಿ ಈ ಹೆದ್ದಾರಿ ಸುದ್ದಿಯಾಗುತ್ತಲೇ ಇದೆ.
ಇದೀಗ ಎಕ್ಸ್‌ಪ್ರೆಸ್ ವೇನಲ್ಲಿ ಹೆದ್ದಾರಿ ಬಳಸಿದಷ್ಟೇ ಟೋಲ್ ಶುಲ್ಕ ನೀಡುವ ಎಕ್ಸಿಟ್ ಮತ್ತು ಎಂಟ್ರಿ ಟೋಲ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಹಾಗಾದರೆ ಇದಕ್ಕೆ ಬಿಡುಗಡೆ ಮಾಡಿದ ಹಣ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಹೆದ್ದಾರಿಯಲ್ಲಿ ಎಕ್ಸಿಟ್ ಮತ್ತು ಎಂಟ್ರಿ ಟೋಲ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ದೊರೆತಿದೆ. ಹಾಗಾದರೆ ಈ ವ್ಯವಸ್ಥೆ ಎಲ್ಲೆಲ್ಲಿ ಜಾರಿಯಾಗಲಿದೆ ಹಾಗೂ ಇದಕ್ಕೆ ಪ್ರತಿಕ್ರಿಯೆಗಳು ಯಾವ ರೀತಿ ವ್ಯಕ್ತವಾಗುತ್ತಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇನ್ನು ಶೀಘ್ರವೇ ಪ್ರವೇಶ ಮತ್ತು ನಿರ್ಗಮನ ಟೋಲ್ ನಿರ್ಮಾಣ ಕಾಮಗಾರಿ ಆರಂಭ ಆಗಲಿದೆ. ಇದೀಗ ಎಕ್ಸ್‌ಪ್ರೆಸ್‌ವೇನಲ್ಲಿ ಓಪನ್ ಟೋಲ್ ಮಾದರಿಯಲ್ಲಿ ಹೆದ್ದಾರಿ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ಇದರಿಂದ ಒಂದು ಕಿಲೋಮೀಟರ್ ಹೆದ್ದಾರಿ ಬಳಸಿದರೂ ಪೂರ್ಣ ಬಳಕೆಯ ಶುಲ್ಕ ಕೊಡಬೇಕಿದ್ದು, ಇದರ ವಿರುದ್ಧ ಸಾರ್ವಜನಿಕರು ಕೆಂಡಕಾರುತ್ತಿದ್ದಾರೆ.
ಎಕ್ಸ್‌ಪ್ರೆಸ್‌ವೇನ ಪ್ರಮುಖ ನಗರಗಳಿಗೆ ವ್ಯವಸ್ಥಿತವಾದ ಪ್ರವೇಶ ಹಾಗೂ ನಿರ್ಗಮನದ ವ್ಯವಸ್ಥೆಯಿಲ್ಲ. ಈ ಸಮಸ್ಯೆಯನ್ನು ನಿವಾರಣೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ 1,200 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತ್ಯೇಕ ಯೋಜನೆ ಪ್ರಸ್ತಾವನೆ ಸಲ್ಲಿಸಿದ್ದು, ಇದೀಗ ಇದಕ್ಕೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಸಿಕ್ಕಿದೆ.
ಎಕ್ಸ್‌ಪ್ರೆಸ್‌ವೇ ಹಾದು ಹೋಗಲಿರುವ ಬಿಡದಿ, ರಾಮನಗರ, ಚನ್ನಟಪಟ್ಟಣ, ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣ ನಗರಗಳ ಬಳಿ ಪ್ರವೇಶ ಮತ್ತು ನಿರ್ಗಮನ ದ್ವಾರದ ನಿರ್ಮಾಣಕ್ಕೆ ಯೋಜನೆಯು ಅವಕಾಶ ಕಲ್ಪಿಸಿಕೊಡಲಿದೆ.
ಕುಂಬಳಗೂಡು ಟೋಲ್ ಪ್ಲಾಜಾ, ಬಿಡದಿ, ರಾಮನಗರದ ಕೆಂಪೇಗೌಡನದೊಡ್ಡಿ, ಚನ್ನಪಟ್ಟಣದ ತಿಟ್ಟಮಾರನಹಳ್ಳಿ ಅಥವಾ ಮತ್ತೀಕೆರೆ, ಶೆಟ್ಟಿಹಳ್ಳಿ, ಮದ್ದೂರಿನ ನಿಡಘಟ್ಟ, ಮಂಡ್ಯ ಬೈಪಾಸ್ ಟೋಲ್, ಶ್ರೀರಂಗಪಟ್ಟಣ ಟೋಲ್ ಸ್ಥಳದಲ್ಲಿ ವಾಹನ ಹೆದ್ದಾರಿಗೆ ಪ್ರವೇಶ ಪಡೆಯುವ ಅವಕಾಶ ಮಾಡಿಕೊಡುವ ನಿರ್ಧಾರ ಮಾಡಿದೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications