Bengaluru-Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಪ್ರಯಾಣಿಸುವ ವಾಹನ ಸವಾರರಿಗೆ ಮಹತ್ವದ ಸೂಚನೆ
Bengaluru-Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಆರಂಭದಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇದೆ. ಅಲ್ಲದೇ, ಈ ಹೆದ್ದಾರಿಯಲ್ಲಿ ನಿಯಮ ಉಲ್ಲಂಘಟನೆ ಪ್ರಕರಣಗಳು ದಾಖಲಾಗುತ್ತಲೇ ಇದ್ದು, ಇಂತಹ ಪ್ರಕರಣಗಳನ್ನು ತಡೆಗಟ್ಟಲು ಕಣ್ಗಾವಲನ್ನು ಇಡಲಾಗಿತ್ತು. ಹಾಗಾದರೆ ಇದನ್ನೂ ಮೀರಿ ಕಳೆದ 28 ದಿನಗಳಲ್ಲಿ ಎಷ್ಟು ನಿಯಮ ಉಲ್ಲಂಘಟನೆ ಪ್ರಕರಣಗಳು ದಾಖಲಾಗಿವೆ ಹಾಗೂ ವಾಹನ ಸವಾರರಿಗೆ ಎಡಿಜಿಪಿ ಅಲೋಕ್ ನೀಡಿದ ಪ್ರಮುಖ ಸೂಚನೆಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿ ಗಂಟೆಗೆ 100ಕ್ಕೂ ಹೆಚ್ಚು ಸಂಚಾರ ನಿಯಮ ಉಲ್ಲಂಘನೆಗಳು ದಾಖಲಾಗುತ್ತಿವೆ. ಕಳೆದ 28 ದಿನಗಳಲ್ಲಿ ಒಟ್ಟು 74,915 ಸಂಚಾರ ನಿಯಮ ಉಲ್ಲಂಘನೆ ಆಗಿದ್ದು, 118 ಕಿ.ಮೀ. ಉದ್ದದ ಎರಡೂ ರಸ್ತೆಬದಿಯಲ್ಲಿ ಅಳವಡಿಸಲಾಗಿರುವ 22 ಕ್ಯಾಮೆರಾಗಳು ಈ ದೃಶ್ಯಗಳನ್ನು ಸೆರೆ ಹಿಡಿದಿವೆ.

ನಿಯಮ ಉಲ್ಲಂಘಟನೆ ಪ್ರಕರಣಗಳ ವಿವರ: ಸೀಟ್ ಬೆಲ್ಟ್ ಧರಿಸದ 57,057 ಪ್ರಕರಣಗಳು, ಅತಿ ವೇಗದಲ್ಲಿ ವಾಹನ ಚಾಲನೇ ಮಾಡಿದ 10,945 ಪ್ರಕರಣಗಳು, ಲೇನ್ ನಿಯಮ ಉಲ್ಲಂಘಟನೆಯ 6,046 ಪ್ರಕರಣಗಳು ಮತ್ತು ವಾಹನ ಚಾಲನೆ ಮಾಡುವ ವೇಳೆ ಮೊಬೈಲ್ ಫೋನ್ ಬಳಸಿದ 494 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.
ಅಪಘಾತಗಳ ಹೆಚ್ಚಳ ಮತ್ತು NH-275ನಲ್ಲಿ ಸಂಚಾರ ಉಲ್ಲಂಘನೆಗಳನ್ನು ತಡೆಯಲು ಪೊಲೀಸರು AI ಆಧಾರಿತ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ANPR) ಕ್ಯಾಮೆರಾಗಳನ್ನು ಪ್ರತಿ ದಿಕ್ಕಿನಲ್ಲಿ 6 ಸ್ಥಳಗಳಲ್ಲಿ ಅಳವಡಿಕೆ ಮಾಡಿದ್ದರು. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿ ದಿಕ್ಕಿನಲ್ಲಿಯೂ ಐದು ಇತರ ಸ್ಥಳಗಳಲ್ಲಿ ವೀಡಿಯೊ ಕ್ಯಾಮೆರಾಗಳನ್ನು ಅಳವಡಿಕೆ ಮಾಡಿದೆ. ಮತ್ತು ವೇಗದ ಮಿತಿಯನ್ನು ಕೂಡ ನಿಗದಿಪಡಿಸಿದೆ. ಒಂದು ವೇಳೆ ಈ ನಿಯಮಗಳು ಮೀರಿದರೆ, ಉಲ್ಲಂಘಟನೆ ದೃಶ್ಯಗಳು ಕ್ಯಾಮೇರಾದಲ್ಲಿ ಲಭ್ಯವಾಗಲಿವೆ.
ಕ್ಯಾಮೆರಾಗಳಿದ್ದರೂ ಹೆದ್ದಾರಿಯಲ್ಲಿ ಸಂಚರಿಸುವವರು ನಿಯಮ ಉಲ್ಲಂಘಿಸಿ ವೇಗದ ಮಿತಿಯನ್ನು ದಾಟಿ ವಾಹನ ಚಾಲನೆ ಮಾಡುತ್ತಿದ್ದು, ಇದು ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಮಾತನಾಡಿ, ಕೇವಲ 28 ದಿನಗಳಲ್ಲಿ 74,000ಕ್ಕೂ ಹೆಚ್ಚು ನಿಯಮ ಉಲ್ಲಂಘಟನೆ ಪ್ರಕರಣಗಳು ದಾಖಲಾಗಿವೆ. ಇದು ರಸ್ತೆ ಸುರಕ್ಷತೆಯ ಬಗ್ಗೆ ಜನರ ನಿರ್ಲಕ್ಷ್ಯತನವನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದ್ದಾರೆ.
ಕಾರು ಚಾಲಕರು ಸೀಟ್ ಬೆಲ್ಟ್ ಧರಿಸದಿರುವುದು, ಅತಿವೇಗ ಮತ್ತು ಲೇನ್ ಉಲ್ಲಂಘನೆ ಪ್ರಕರಣಗಳೇ ಅತೀ ಹೆಚ್ಚಾಗಿವೆ. ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ಸೇರಿದಂತೆ ಭಾರೀ ಸರಕು ವಾಹನಗಳು ಅತೀ ಹೆಚ್ಚು ಸಂಚಾರ ನಿಯಮ ಉಲ್ಲಂಘಟನೆ ಪ್ರಕರಣಗಳು ಈ ಪಟ್ಟಿಯಲ್ಲಿ ನಂತರದ ಸ್ಥಾನದಲ್ಲಿವೆ. ಇನ್ನು ನಿಯಮ ಉಲ್ಲಂಘಿಸಿದ ಎಲ್ಲಾ ವಾಹನ ಸವಾರರಿಗೂ ನೋಟಿಸ್ ಜಾರಿ ಮಾಡಲಾಗುವುದು ಎಂದು ಎಡಿಜಿಪಿನ ಅಲೋಕ್ ಕುಮಾರ್ ಅವರು ತಿಳಿಸಿದ್ದಾರೆ.
ಕೆಲವೇ ದಿನಗಳಲ್ಲಿ, ಯಾರೆಲ್ಲ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಾರೆಯೋ ಅಂತಹವರ ಫೋನ್‌ಗಳಿಗೆ ಅಧಿಸೂಚನೆಗಳನ್ನು ಕಳುಹಿಸಲಾಗುವುದು. ಇದು ಉಲ್ಲಂಘನೆಗಳ ಬಗ್ಗೆ ಅವರಿಗೆ ಅರಿವು ಮೂಡಿಸುತ್ತದೆ. ಹಾಗೆಯೇ ಸಂಚಾರ ನಿಯಮ ಉಲ್ಲಂಘಿಸುವವರ ವಾಹನಗಳು ಟೋಲ್‌ಗಳಲ್ಲಿ ನಿರ್ಗಮಿಸಿದಾಗ ಅವರ ಫಾಸ್ಟ್‌ಟ್ಯಾಗ್ ಖಾತೆಯ ಮೂಲಕ ದಂಡವನ್ನು ತಕ್ಷಣವೇ ಕಡಿತಗೊಳಿಸಬೇಕು. ಈ ಕಾರ್ಯವಿಧಾನದಿಂದ ಹೆದ್ದಾರಿಗಳಲ್ಲಿ ಸಂಚಾರ ನಿಯಮ ಉಲ್ಲಂಘನೆಯನ್ನು ಕಡಿಮೆ ಮಾಡಬಹುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.











Click it and Unblock the Notifications