Bengaluru Mysuru Expressway: ಟೋಲ್ ಶುಲ್ಕದ ತಕರಾರು ಜನಸಾಮಾನ್ಯರದ್ದಲ್ಲ, ಡಿಕೆಶಿ ಅವರದ್ದು

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ ದಶಪಥ ಹೆದ್ದಾರಿಯಲ್ಲಿನ ಟೋಲ್ ಸಂಗ್ರಹ ಕುರಿತು ತಕರಾರು ಜನಸಾಮಾನ್ಯರದ್ದು ಅಲ್ಲ ಎಂದು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಸಿದ್ದಾರೆ.

ಬೆಂಗಳೂರು, ಮಾರ್ಚ್ 16: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ ದಶಪಥ ಹೆದ್ದಾರಿಯಲ್ಲಿನ ಟೋಲ್ ಸಂಗ್ರಹ ಕುರಿತು ತಕರಾರು ಜನಸಾಮಾನ್ಯರದ್ದು ಅಲ್ಲ. ಅದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಪ್ರತಿಕ್ರಿಯಿಸಿರುವ ಅವರು, ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ ಹೆದ್ದಾರಿ ಟೊಲ್ ಶುಲ್ಕ ಸಂಗ್ರಹ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ರಾಜಕರಾಣ ಮಾಡುತ್ತಿದ್ದಾರೆ. ಅವರು ಬಳಸುವ ಭಾಷೆ, ನಡೆದುಕೊಂಡ ರೀತಿ ಯಾವುದೇ ಕನ್ನಡಿಗರಿಗೆ ಶೋಭೆ ತರುವಂಥದ್ದಲ್ಲ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.

 Bengaluru Mysuru Expressway: Toll fee Problem its not Publics, DK Shivakumar doing Highway politics

ರಾಷ್ಟ್ರೀಯ ಹೆದ್ದಾರಿ ಬರುವ ಮುನ್ನವೂ ಟೋಲ್ ಸಂಗ್ರಹವಾಗುತ್ತದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಆ ಬಗ್ಗೆ ಯಾವುದೇ ಸಮಸ್ಯೆಗಳಿದ್ದು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಬಹಳಷ್ಟು ಸೇವೆಗಳು ಸರ್ವಿಸ್ ರಸ್ತೆಯಲ್ಲಿಯೇ ಇದೆ. ಅಲ್ಲೆಲ್ಲೂ ಟೋಲ್ ಇಲ್ಲ. ಆದರೆ ಈ ದಶಪಥ ರಸ್ತೆಯಲ್ಲಿನ ಟೋಲ್ ಸಂಗ್ರಹ ವಿಚಾರದಲ್ಲಿ ವಿನಾಕಾರಣ ರಾಜಕಾರಣ ಮಾಡಲಾಗುತ್ತಿದೆ ಎಂದರು.

ಮಹಾರಾಷ್ಟ್ರದ ಸಂಪುಟದ ನಿರ್ಣಯಕ್ಕೆ ಬೊಮ್ಮಾಯಿ ಆಕ್ಷೇಪ

ಮಹಾರಾಷ್ಟ್ರದ ಸಚಿವ ಸಂಪುಟವು ಗಡಿ ಕನ್ನಡಿಗರ ಕುರಿತು ನೀರ್ಣಯ ಕೈಗೊಂಡಿದೆ. ಕರ್ನಾಟದ ಗಡಿಭಾಗದ ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆ ಘೋಷಣೆ ಮಾಡಿರುವುದು ಅಕ್ಷಮ್ಯ ಅಪರಾಧ. ನೆರೆ ರಾಜ್ಯದ ನಡೆಯನ್ನು ಮುಖ್ಯಮಂತ್ರಿಗಳು ಖಂಡಿಸಿದರು.

 Bengaluru Mysuru Expressway: Toll fee Problem its not Publics, DK Shivakumar doing Highway politics

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಮಾತನಾಡಿದಾಗ ಸುಪ್ರೀಂಕೋರ್ಟ್ ಆದೇಶ ಬರುವವರೆಗೆ ಕಾಯಬೇಕು. ಯಾವುದೇ ಪ್ರಚೋದನೆ ಯಾಗಬಾರದೆಂದು ಒಪ್ಪಿಕೊಳ್ಳಲಾಗಿತ್ತು. ಈಗ ಅದನ್ನು ಮಹಾರಾಷ್ಟ್ರ ಉಲ್ಲಂಘಿಸಿದೆ.

ಕೂಡಲೇ ಆಜ್ಞೆಯನ್ನು ಹಿಂದೆಗೆದುಕೊಳ್ಳಬೇಕು. ಈ ವಿಚಾರವನ್ನು ಗೃಹ ಸಚಿವರ ಗಮನಕ್ಕೂ ತರಲಾಗುವುದು. ಈ ರೀತಿಯ ಯೋಜನೆಗಳನ್ನು ನಾವೂ ಕೂಡ ಪ್ರಕಟಿಸಬಹುದು. ಹಲವಾರು ತಾಲ್ಲೂಕುಗಳು, ಗ್ರಾಮ ಪಂಚಾಯಿತಿಗಳು ಮಹಾರಾಷ್ಟ್ರದಲ್ಲಿ ನಮಗೆ ನ್ಯಾಯ ಸಿಗುತ್ತಿಲ್ಲ, ಕರ್ನಾಟಕಕ್ಕೆ ಸೇರಬೇಕು ಎಂದು ಈಗಾಗಲೇ ನಿರ್ಣಯ ಮಾಡಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಇದ್ದಾಗ ಮಹಾರಾಷ್ಟ್ರದ ಸರ್ಕಾರ ಬಹಳ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ವೇತನ ಹೆಚ್ಚಳ ಮಾಡಿದ ಸರ್ಕಾರ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೌಕರರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ಆ ಬಗ್ಗೆ ಸಚಿವರೆಲ್ಲರು, ಅಧಿಕಾರಿಗಳು ಸುದೀರ್ಘವಾಗಿ ಚರ್ಚಿಸಿ, ನೌಕರರ ಶೇ. 20 ರಷ್ಟು ವೇತನ ಪರಿಷ್ಕರಣೆಗೆ ನೀರ್ಧರಿಸಲಾಗಿದೆ. ಅಲ್ದೇ ರಾಜ್ಯ ಸಾರಿಗೆ ನೌಕರರಿಗೆ ಶೇಕಡಾ 15 ರಷ್ಟು ವೇತನ ಪರಿಷ್ಕರಣೆ ಬೇಡಿಕೆಯಂತೆ ಒಪ್ಪಿಕೊಂಡು ಪರಿಷ್ಕರಿಸಲಾಗಿದೆ. ಗುರುವಾರ ಈ ಎರಡು ವೇತನ ಹೆಚ್ಚಳ ಬಗ್ಗೆ ಆದೇಶ ಹೊರಡಿಸಲಾಗುವುದು ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+