ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಮೆಗತಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ದಸರಾ ವೇಳೆಗೆ ಪೂರ್ಣಗೊಳ್ಳುತ್ತಾ?

|
Google Oneindia Kannada News

ಬೆಂಗಳೂರು ಜುಲೈ 20: ಬಹು ನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ, ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ. ಆದರೆ ಈ ಯೋಜನೆ ದಸರಾ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇಲ್ಲ.

ಯೋಜನೆ ಈ ವರ್ಷದ ಅಕ್ಟೋಬರ್‌ ವೇಳೆಗೆ ಸಿದ್ಧವಾಗುವ ಸಾಧ್ಯತೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನ ನೈಸ್ ಪ್ರವೇಶದ್ವಾರದಿಂದ ಮೈಸೂರಿನ ರಿಂಗ್ ರೋಡ್ ಜಂಕ್ಷನ್‌ವರೆಗೆ 117 ಕಿ. ಮೀ. ಹೆದ್ದಾರಿಯು ಸರಾಸರಿ ಪ್ರಯಾಣದ ಸಮಯವನ್ನು ಕಡಿತಗೊಳಿಸುವ ನಿರೀಕ್ಷೆಯಿಂದ ನಿರ್ಮಾಣಗೊಳ್ಳುತ್ತಿದೆ.

ಮೋದಿಯವರಿಂದ ಇಂದು 296 ಕಿಮೀ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಮೋದಿಯವರಿಂದ ಇಂದು 296 ಕಿಮೀ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ

ಈ ಎಕ್ಸಪ್ರೆಸ್‌ವೇ ನಿರ್ಮಾಣದ ಬಳಿಕ ಉಭಯ ನಗರಗಳ ಸಂಚಾರದ ಅವಧಿ 3 ಗಂಟೆಗಳಿಂದ ಕೇವಲ 90 ನಿಮಿಷಗಳಿಗೆ ಕಡಿಮೆಯಾಗಲಿದೆ. ಯೋಜನೆ ಈ ಬಾರಿಯ ದಸರಾ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿತ್ತು.

Bengaluru-Mysuru Expressway unlikely to be ready by October says PWD Minister CC Patil

2022ರ ಮೈಸೂರು ದಸರಾ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ನಡೆಯಲಿವೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಲು ಯೋಜಿಸಿತ್ತು. ಕೆಲವು ಕಡೆ ಕಾಮಗಾರಿ ಆಮೆ ಗತಿಯಲ್ಲಿ ನಡೆಯುತ್ತಿದ್ದು, ದಸರಾಕ್ಕೂ ಮುನ್ನ ಪೂರ್ಣಗೊಳ್ಳುವ ಸಾಧ್ಯತೆ ಇಲ್ಲ ಎಂದು ಅಂದಾಜಿಸಲಾಗಿದೆ.

ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಆದರೆ ಸ್ಥಳಗಳಲ್ಲಿ ಫ್ಲೈಓವರ್‌ಗಳು ಮತ್ತು ಅಂಡರ್‌ಪಾಸ್‌ಗಳಂತಹ ರಚನೆಗಳು ಅಪೂರ್ಣವಾಗಿವೆ. ಕಾರಿಡಾರ್ ಒಂಬತ್ತು ಪ್ರಮುಖ ಸೇತುವೆಗಳು, 44 ಸಣ್ಣ ಸೇತುವೆಗಳು ಮತ್ತು ನಾಲ್ಕು ರೈಲು ಮೇಲ್ಸೇತುವೆಗಳನ್ನು ಹೊಂದಿದೆ.

"ನಾವು 70 ಪ್ರತಿಶತದಷ್ಟು ಕೆಲಸವನ್ನು ಪೂರ್ಣಗೊಳಿಸಿದ್ದೇವೆ ಮತ್ತು ಉಳಿದವುಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ದಸರಾ ವೇಳೆಗೆ ಕಾಮಗಾರಿ ಮುಗಿಸಲು ಸಾಧ್ಯವಾಗದಿರಬಹುದು,'' ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Bengaluru-Mysuru Expressway unlikely to be ready by October says PWD Minister CC Patil

ಮಾರ್ಚ್‌ನಲ್ಲಿ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ 10 ಪಥಗಳ ಬೆಂಗಳೂರು-ಮೈಸೂರು ಆರ್ಥಿಕ ಕಾರಿಡಾರ್ ಕುರಿತು ಟ್ವೀಟ್ ಮಾಡಿದ್ದರು. ದಾಖಲೆಯ ವೇಗದಲ್ಲಿ ನಿರ್ಮಾಣವಾಗುತ್ತಿದ್ದು, 8,172 ಕೋಟಿ ರೂಪಾಯಿ ವೆಚ್ಚದ ಕಾರಿಡಾರ್ ಅಕ್ಟೋಬರ್ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದರು.

ಮಾರ್ಚ್ 2014 ರಲ್ಲಿ ಕೇಂದ್ರ ಸಾರಿಗೆ ಸಚಿವಾಲಯವು ದೇಶಾದ್ಯಂತ ಕೆಲವು ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಘೋಷಣೆ ಮಾಡಿತ್ತು.

ಇದರಲ್ಲಿ ಬೆಂಗಳೂರು-ಮೈಸೂರು ರಸ್ತೆ ಸಹ ಸೇರಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 4 ಪಥವಿದ್ದ ಹೆದ್ದಾರಿಯನ್ನು 6 ಲೇನ್ ಎಕ್ಸ್‌ಪ್ರೆಸ್‌ವೇ ಮತ್ತು ನಾಲ್ಕು ಸರ್ವೀಸ್ ರಸ್ತೆ ಸೇರಿದಂತೆ 10 ಲೇನ್‌ಗಳಾಗಿ ಪರಿವರ್ತಿಸುತ್ತಿದೆ. 2014 ರಲ್ಲಿ ಯೋಜನೆಯ ಅಂದಾಜು ವೆಚ್ಚ 4,100 ಕೋಟಿ ಆಗಿತ್ತು, ಈಗ ಅದು ಹೆಚ್ಚಾಗಿದೆ.

Recommended Video

ಅಗ್ನಿವೀರ್ ಪ್ರಾಜೆಕ್ಟ್ ನಿಂದಾಗಿ ಭಾರತ ರಕ್ಷಣಾ ಪಡೆಗೆ ಏನು ಲಾಭ | *Defence | OneIndia Kannada

English summary
Expectations of completion of Bengaluru-Mysore Expressway by 2022 Dasara have been dashed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X